ETV Bharat / state

2022ರ ಹಿನ್ನೋಟ: ರಾಜ್ಯದ ಗಮನ ಸೆಳೆದ ಪ್ರಮುಖ ರಾಜಕೀಯ ಬೆಳವಣಿಗೆಗಳು.. - ಸಚಿವ ಈಶ್ವರಪ್ಪ ರಾಜೀನಾಮೆ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿಬಂತು. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಸೇರಿದಂತೆ 2022 ರಲ್ಲಿ ಹಲವು ಪ್ರಮುಖ ರಾಜಕೀಯ ಘಟನಾವಳಿಗಳು ನಡೆದಿವೆ.

political events in the state in 2022
ಪ್ರಮುಖ ರಾಜಕೀಯ ಘಟನಾವಳಿಗಳು
author img

By

Published : Dec 30, 2022, 10:24 PM IST

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ನಡೆದ ಪ್ರಮುಖ ರಾಜಕೀಯ ಘಟನಾವಳಿಗಳನ್ನು ನೋಡುವುದಾದರೆ, ಮೇಕೆದಾಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ಜನವರಿ 9ರಂದು ಕನಕಪುರದಿಂದ ಪಾದಯಾತ್ರೆ ಆರಂಭಿಸಿತು. ಕೊರೊನಾ ಮಾರ್ಗಸೂಚಿ ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳುವುದಾಗಿ ಸರಕಾರ ಎಚ್ಚರಿಕೆ ನೀಡಿತ್ತು.

ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ 30 ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಜನವರಿ 12ರಂದು ಕೋವಿಡ್‌ ಕೇಸ್​​ ಹೆಚ್ಚುತ್ತಿರುವ ಸಮಯದಲ್ಲಿ ಪಾದಯಾತ್ರೆಗೆ ಅವಕಾಶ ನೀಡಿದ್ದಕ್ಕೆ ಹೈಕೋರ್ಟ್‌ ಛೀಮಾರಿ ಹಾಕಿದ ಬೆನ್ನಲ್ಲೇ ರಾಜ್ಯ ಸರಕಾರ ಯಾತ್ರೆಗೆ ನಿರ್ಬಂಧ ವಿಧಿಸಿತು. ಆ ಬಳಿಕ ಕಾಂಗ್ರೆಸ್‌ ನಾಯಕರು ಅನಿವಾರ್ಯವಾಗಿ ಪಾದಯಾತ್ರೆಯನ್ನು ಸ್ಥಗಿತಗೊಳಿಸಿದರು.

ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ: ಶಿವಮೊಗ್ಗದಲ್ಲಿ ಫೆಬ್ರವರಿ 20 ರಂದು ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಜರಂಗ ದಳ ಕಾರ್ಯಕರ್ತನಾಗಿದ್ದ ಹರ್ಷನನ್ನು ಹತ್ಯೆ ಮಾಡಿದ ಘಟನೆ ಇಡೀ ರಾಜ್ಯವನ್ನು ತಲ್ಲಣಗೊಳಿಸಿತ್ತು. ಈ ಘಟನೆಯ ವಿರುದ್ಧ ಹಲವಾರು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.

ಸಚಿವ ಈಶ್ವರಪ್ಪ ರಾಜೀನಾಮೆ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನದಿಂದ ಕೆ.ಎಸ್.ಈಶ್ವರಪ್ಪ ಅವರನ್ನು ವಜಾ ಮಾಡಬೇಕು. ಜೊತೆಗೆ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಇದರ ಜೊತೆಗೆ 24 ಗಂಟೆ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿಯನ್ನು ನಡೆಸಿದ್ದರು. ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹೆಚ್ಚಾದ ಬೆನ್ನಲ್ಲೇ ಸಚಿವ ಈಶ್ವರಪ್ಪ ರಾಜೀನಾಮೆ ಸಲ್ಲಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಭಾರಿ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್, ಏಪ್ರಿಲ್ 12 ರಂದು ಆತ್ಮಹತ್ಯೆ ಮಾಡಿಕೊಂಡರು. ಡೆತ್‌ ನೋಟ್​ನಲ್ಲಿ ಈಶ್ವರಪ್ಪನವರ ಹೆಸರನ್ನು ಬರೆದಿದ್ದರು. ಹಾಗಾಗಿ ಪ್ರತಿಪಕ್ಷ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತ್ತು.

ಪೇ ಸಿಎಂ ಪೋಸ್ಟರ್​: ಬಿಜೆಪಿ ಸರ್ಕಾರ ವಿರುದ್ಧ ಪೇ ಸಿಎಂ ಪೋಸ್ಟರ್ ಸಹ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. 40 ಪರ್ಸೆಂಟ್ ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿದ್ದ ಪೋಸ್ಟರ್ ನಗರದ ಹಲವು ಕಡೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಅಂಟಿಸಿ ಪ್ರತಿಭಟನೆ ನಡೆಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರದೊಂದಿಗೆ ಕ್ಯೂ ಆರ್ ಕೋಡ್ ಒಳಗೊಂಡ ಪೇ ಸಿಎಂ ಪೋಸ್ಟರ್ ಹಾಕಿದ್ದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಗರಿಗೆದರಿ ನಿಂತಿವೆ. ಐದಾರು ತಿಂಗಳ ಮೊದಲೇ ಚುನಾವಣೆ ಪ್ರಚಾರಕ್ಕೆ ಇಳಿದಿದ್ದು, ಪ್ರಚಾರದ ಮೂಲಕ ಮತದಾರರನ್ನು ತಮ್ಮ ಕಡೆ ಸೆಳೆಯಲು ರಾಜಕೀಯ ಪಕ್ಷಗಳು ಮುಂದಾಗಿವೆ. ನಿರಂತರ ಸಭೆಗಳು, ಪಾದಯಾತ್ರೆ, ರಥಯಾತ್ರೆ, ಬೃಹತ್ ಸಮಾವೇಶಗಳನ್ನು ಮೂರು ಪಕ್ಷಗಳು ಮಾಡುತ್ತಿವೆ. ಮತದಾರರ ಸೆಳೆಯುವ ಭರಾಟೆಯಲ್ಲಿ ರಾಜಕೀಯ ನಾಯಕರು ವಾಗ್ದಾಳಿ, ಟೀಕೆ ಮಾಡುವುದು ಸಾಮಾನ್ಯವಾಗಿದೆ.

ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ: ಮುಂಬರುವ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡೇ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ನಡೆಸಿದೆ. ರಾಜ್ಯದಲ್ಲೂ ರಾಹುಲ್ ಗಾಂಧಿ ಪಾದಯಾತ್ರೆ ಭರ್ಜರಿಯಾಗಿಯೇ ಸಾಗಿತ್ತು. ಜನಬೆಂಬಲವೂ ವ್ಯಕ್ತವಾಗಿತ್ತು. ಇದರ ಲಾಭ ವಿಧಾನಸಭೆ ಚುನಾವಣೆ ಮೇಲೂ ಆಗಲಿದೆ ಎಂಬ ನಿರೀಕ್ಷೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಇಟ್ಟುಕೊಂಡಿದ್ದಾರೆ.

ಇದರ ನಡುವೆ ಪ್ರತಿಪಕ್ಷದ ನಾಯಕ ಸಿದ್ದರಾಂಯ್ಯನವರು ರಾಜ್ಯದ 224 ಕ್ಷೇತ್ರಗಳ್ಲೂ ರಥಯಾತ್ರೆ ಮಾಡಲು ಹೊರಟ್ಟಿದ್ದರು. ಅದಕ್ಕಾಗಿ ಸಿದ್ದತೆಯನ್ನೂ ಮಾಡಿಕೊಂಡಿದ್ದರು. ಆದರೆ ಒಬ್ಬರೇ ಮಾಡಿದರೆ ತಪ್ಪು ಅಭಿಪ್ರಾಯ ಹೋಗುತ್ತದೆ. ಹಾಗಾಗಿ ಡಿ.ಕೆ.ಶಿವಕುಮಾರ್ ಜೊತೆ ಸೇರಿ ಎಲ್ಲಾ ನಾಯಕರು ಪ್ರವಾಸ ಮಾಡಿ ಎಂಬ ಸಲಹೆ ಹೈಕಮಾಂಡ್​ನಿಂದ ಬಂದಿದೆ. ಹಾಗಾಗಿ, ಸದ್ಯಕ್ಕೆ ಪ್ರವಾಸ ಮುಂದಕ್ಕೆ ಹೋಗಿದೆ.

ಪಂಚರತ್ನ ಯಾತ್ರೆ: ಇನ್ನು ಜೆಡಿಎಸ್ ನಾಯಕರು ಕೂಡ ಹಿಂದೆ ಬಿದ್ದಿಲ್ಲ. ಕಾಂಗ್ರೆಸ್, ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಕಳೆದ ನಾಲ್ಕೈದು ತಿಂಗಳಿಂದಲೇ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಪಂಚರತ್ನ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ವಿಶ್ವಾಸಗಳಿಸುವುದಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಅಮೃತ ಮಹೋತ್ಸವ, ಚಂದ್ರು ಸಾವು.. 2022ರಲ್ಲಿ ದಾವಣಗೆರೆಯಲ್ಲಿ ನಡೆದ ಘಟನಾವಳಿಗಳ ಸುತ್ತ..

ವೋಟರ್ ಐಡಿ ಹಗರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಈ ಹಗರಣದಲ್ಲಿ ರಾಜಕಾರಣಿಗಳು ಇದ್ದು, ಅವರನ್ನು ಬಂಧಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ರಾಜ್ಯ ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.