ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದಕ್ಕೆ ಕಂಥರಿ ಹೆಸರಿನ ಹೋಟೆಲ್ಗೆ 15 ಸಾವಿರ ರೂ. ದಂಡ ವಿಧಿಸಿ ತಾತ್ಕಾಲಿಕ ಬಂದ್ ಮಾಡಲಾಗಿದೆ.
ಬಾಣಸವಾಡಿ ಠಾಣಾ ವ್ಯಾಪ್ತಿಯ ಕಲ್ಯಾಣನಗರ ಮುಖ್ಯ ರಸ್ತೆಯಲ್ಲಿ ಇರುವ ಕಂಥರಿ ರೆಸ್ಟೋರೆಂಟ್ ಸಾಮಾಜಿಕ ಅಂತರ ಮರೆತು ಗ್ರಾಹಕರು ಒಟ್ಟುಗೂಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಣಸವಾಡಿ ಠಾಣಾ ಪೊಲೀಸರಿಂದ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣವನ್ನು ದಾಖಲಿಸಿದ್ದಾರೆ.