ಬೆಂಗಳೂರು : ಬಿಬಿಎಂಪಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಇನ್ನು ಮುಂದೆ ಸಮವಸ್ತ್ರದ ಜೊತೆಗೆ ಬ್ಲೇಜರ್ ಕೂಡಾ ಸಿಗಲಿದೆ.
ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಇಮ್ರಾನ್ ಪಾಷಾ ಹಾಗೂ ಸದಸ್ಯರುಗಳು ನಗರದ ಜೆ.ಜೆ.ಆರ್ ನಗರದ ಶಾಲೆಯ ಆವರಣದಲ್ಲಿ ಮಕ್ಕಳ ದಿನವನ್ನ ವಿಶೇಷವಾಗಿ, ಸಾಂಕೇತಿಕವಾಗಿ ಬ್ಲೇಜರ್ಗಳನ್ನು ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಉಳಿದ ಪಾಲಿಕೆ ಶಾಲಾ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೂ ಸಹ ಬ್ಲೇಜರ್ ವಿತರಣೆ ಮಾಡಲಾಗುತ್ತಿದ್ದು, ಸುಮಾರು ಒಂಬತ್ತು ಸಾವಿರ ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೆ ವಿತರಿಸಲು ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿದೆ ಎಂದು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಇಮ್ರಾನ್ ಪಾಷಾ ತಿಳಿಸಿದರು.
ಕಾರ್ಯಕ್ರಮದಲ್ಲಿ ಮೇಯರ್ ಗೌತಮ್ ಕುಮಾರ್, ಉಪಮೇಯರ್ ರಾಮ್ ಮೋಹನ್ ರಾಜು ಭಾಗಿಯಾಗಿದ್ದರು.