ETV Bharat / state

ಪಂಚಮಸಾಲಿ 2ಎ ಮೀಸಲಾತಿ ವಿಚಾರ: ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಸರ್ಕಾರ ಆಕ್ಷೇಪ - highcourt

ಪಂಚಮಸಾಲಿ 2ಎ ಮೀಸಲಾತಿ ವಿಷಯದ ಬಗ್ಗೆ ಗುರುವಾರ ಹೈಕೋರ್ಟ್​ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಾಲಯಕ್ಕೆ 2ಎ ಮೀಸಲಾತಿ ಕುರಿತು ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿ ಸಲ್ಲಿಸುವುದಕ್ಕೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತು.

ಹೈಕೋರ್ಟ್​
ಹೈಕೋರ್ಟ್​
author img

By

Published : Dec 29, 2022, 12:34 PM IST

Updated : Dec 29, 2022, 6:55 PM IST

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತಂತೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸರ್ಕಾರ ಆಕ್ಷೇಪ ವ್ಯಕ್ತ ಪಡಿಸಿದೆ. ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯನ್ನು ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ ರಾಘವೇಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಮತ್ತು ನ್ಯಾ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಹಿಂದುಳಿದ ವರ್ಗಗಳ ಆಯೋಗದಿಂದ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಮಧ್ಯಂತರ ವರದಿ ಸಲ್ಲಿಕೆಯಾಗಿದೆ. ಸರ್ಕಾರ ಈ ವರದಿಯನ್ನು ಪರಿಶೀಲನೆ ನಡೆಸುವ ಹಂತದಲ್ಲಿದೆ. ಆದರೆ, ಈವರೆಗೂ ಯಾವುದೆ ಕ್ರಮ ಕೈಗೊಂಡಿಲ್ಲ. ಜತೆಗೆ, ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ನ್ಯಾಯಾಲಯಕ್ಕೆ ಸಲ್ಲಿಸುವುದಕ್ಕೆ ಅಗತ್ಯವಿಲ್ಲ ಎಂದು ವಿವರಿಸಿದರು. ಅಲ್ಲದೆ, ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಅರ್ಜಿದಾರರ ಪರ ವಕೀಲ ಮಂಜುನಾಥ್, ಹಿಂದುಳಿದ ವರ್ಗಗಳ ಆಯೋಗದಿಂದ ಮಧ್ಯಂತರ ವರದಿ ಸಲ್ಲಿಕೆಯಾಗಿದೆ. ಈ ಸಂಬಂಧ ಮಾಧ್ಯಮಗಳಿಗೆ ಶಾಸಕರೊಬ್ಬರು ತಿಳಿಸಿದ್ದು, 2ಎ ಅಡಿಯಲ್ಲಿ ಮೀಸಲಾತಿ ನೀಡುವುದು ಖಚಿತ ಎಂದು ತಿಳಿಸಿದ್ದಾರೆ. ಹೀಗಾಗಿ ವರದಿಯನ್ನು ನ್ಯಾಯಾಲಯದ ಮುಂದೆ ಮಂಡಿಸುವುದಕ್ಕೆ ಸೂಚನೆ ನೀಡಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ? ಹಿಂದುಳಿದ ವರ್ಗಗಳ ಆಯೋಗ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬೇಡಿಕೆಯನ್ನು 2000ರಲ್ಲಿಯೇ ತಿರಸ್ಕರಿಸಿದ್ದು, ಪಂಚಮಸಾಲಿ ಉಪ ಜಾತಿಯನ್ನು 2ಎಗೆ ಸೇರಿಸಲು ನಿರಾಕರಿಸಿದೆ. ಈಗ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿದ 2ಎ ಅಡಿಯಲ್ಲಿ ಮೀಸಲಾತಿ ನೀಡುವ ಕ್ರಮಕ್ಕೆ ಮುಂದಾಗಿದ್ದು, ಇದು ಕಾನೂನುಬಾಹಿರ. ಅಲ್ಲದೆ, ಹಿಂದುಳಿದ ವರ್ಗಗಳ ಆಯೋಗದ ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ: ಪಂಚಮಸಾಲಿ ಮೀಸಲು ಹೋರಾಟ: ಸಿಎಂ ಬೊಮ್ಮಾಯಿ ಭೇಟಿಯಾದ ಕೂಡಲಸಂಗಮ ಶ್ರೀ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ, ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಲವು ದಿನಗಳಿಂದ ಒತ್ತಾಯಿಸಲಾಗುತ್ತಿದೆ. ಈಗಾಗಲೇ ಈ ವಿಷಯವಾಗಿ ಹಲವು ಬಾರಿ ಪ್ರತಿಭಟನೆಯನ್ನು ಮಾಡಲಾಗಿದೆ. ಶಾಸಕ ಬಸನಗೌಡ ಯತ್ನಾಳ್ ಈ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದಾರೆ ಎನ್ನಬಹುದು.

ಇದನ್ನೂ ಓದಿ: ನಾವು ಕಿಂಗ್ ಮೇಕರ್​​ಗಳೇ ಹೊರತು ಕಿಂಗ್ ಆಗಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಯುವಜನರ ಉದ್ಯೋಗಕ್ಕಾಗಿ ಮೀಸಲಾತಿ ಹೋರಾಟ ಒಂದೇ ಮಾರ್ಗವಾಗಿ ಉಳಿದಿದೆ. ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡ, ದೀಕ್ಷ ಲಿಂಗಾಯತರುಗಳಿಗೆ 2ಎ ಹಾಗೂ ಚತುರ್ಥ ಲಿಂಗಾಯತರು ಸೇರಿದಂತೆ ಲಿಂಗಾಯತ ಎಲ್ಲ ಒಳಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರ್ಪಡೆಗೊಳಿಸುವಂತೆ ಹಕ್ಕೊತ್ತಾಯಿಸಿ ಈ ಹೋರಾಟ ಮಾಡುತ್ತಿದ್ದೇವೆ ಎಂದು ಈ ಹಿಂದೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದರು.

ಇದನ್ನೂ ಓದಿ: 2ಎ ಗೆ ಪಂಚಮಸಾಲಿ : ಹೋರಾಟ ಮುಂದುವರೆಸಲು ಜಯಮೃತ್ಯುಂಜಯ ಶ್ರೀ ಕರೆ

Last Updated : Dec 29, 2022, 6:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.