ETV Bharat / state

ಬಜೆಟ್​ನಲ್ಲಿ ಐಐಟಿ ಮಾದರಿಯಲ್ಲೇ ಕೆಐಟಿಗಳನ್ನು ಉನ್ನತೀಕರಿಸಲು ವಿಶೇಷ ಒತ್ತು..

author img

By

Published : Feb 17, 2023, 12:55 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್​ನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದಾರೆ.

2023 24th Karnataka Budget
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ

ಬೆಂಗಳೂರು: ವಿಧಾನಸಭೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್​​ ಮಂಡಿಸಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಹೌದು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ರಾಜ್ಯ ಬಜೆಟ್​ನಲ್ಲಿ ಪ್ರಮುಖ ಆದ್ಯತೆ ನೀಡಲಾಗಿದೆ.

ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ: ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ ಐದು ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (ಕೆಐಟಿ)ಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾಸನ, ಹಾವೇರಿ, ಕೆ.ಆರ್.ಪೇಟೆ, ತಳ್ಳಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ. ಐಐಟಿ, ಐಐಎಂ, ಐಐಎಸ್ಸಿ/, ಎನ್ಐಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯುವ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 4 ಲಕ್ಷ ಅನುದಾನು ಒದಗಿಸಲಾಗುವುದು.

ಪ್ರೊ.ಸಡಗೋಪನ್ ನೇತೃತ್ವದ ತಜ್ಞರ ಸಮಿತಿ: ಪ್ರೊ.ಸಡಗೋಪನ್ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಹೀಗಾಗಿ ಸಮಿತಿಯ ಶಿಫಾರಸ್ಸಿನ ಅನ್ವಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

ರೀಡಿಂಗ್‌ ಕಾರ್ನರ್​ಗಳ ಸ್ಥಾಪನೆಗೆ ಚಿಂತನೆ: ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಒದಗಿಸುವ ಮೂಲಕ ಗಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್‌ ಕಾರ್ನರ್​ಗಳನ್ನು ಸ್ಥಾಪಿಸಲಾಗುವುದು.

'ಅಭ್ಯುದಯ' ಕಾರ್ಯಕ್ರಮ ಅನುಷ್ಠಾನ: ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್ ಸಹಯೋಗದೊಂದಿಗೆ ಪರಿಹಾರಾತ್ಮಕ ಚಟುವಟಿಕೆ 'ಅಭ್ಯುದಯ' ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು.

ವಿಶ್ವವಿದ್ಯಾಲಯದಲ್ಲಿ ತಂತ್ರಜ್ಞಾನದ ಅಳವಡಿಕೆಗೆ ಒತ್ತು: ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ ಹಾಗೂ ಹಾಸನ ಜಿಲ್ಲೆಗಳಲ್ಲಿ ಒಟ್ಟು 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಗೆ ಒತ್ತು ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಅಳವಡಿಕೆಗೆ ವಿಶೇಷ ಆದ್ಯತೆ: ''ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸ ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ'' ಎಂದು ಕೆ. ಎಸ್‌. ನರಸಿಂಹಸ್ವಾಮಿ ವಾಕ್ಯವನ್ನು ಸಿಎಂ ಹೇಳಿದರು. ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ.

ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಹಲವು ಕ್ರಮಗಳನ್ನು ಸರ್ಕಾರ ಅನುಷ್ಠಾನಗೊಳಿಸಲಿದೆ. ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಫ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆ ತರಲು ನಮ್ಮ ಸರ್ಕಾರ ವಿಶೇಷ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದರು.

ಕೃತಕ ಬುದ್ಧಿಮತ್ತೆಯಿಂದ ಸಂಚಾರ ಸಿಗ್ನಲ್​ಗಳ ನಿರ್ವಹಣೆ: ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದಕ್ಕಾಗಿ ಹೆಚ್ಚು ಸಂಚಾರ ದಟ್ಟಣೆ ಇರುವ 75 ಜಂಕ್ಷನ್​ಗಳಲ್ಲಿ 150 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಕೃತಕ ಬುದ್ದಿಮತ್ತೆ ಬಳಸಿಕೊಂಡು ಸಂಚಾರ ಸಿಗ್ನಲ್​ಗಳ ನಿರ್ವಹಣೆ ಮಾಡಲಾಗುವುದು.

ಇದನ್ನೂ ಓದಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ: ಗೃಹಿಣಿ ಶಕ್ತಿ ಯೋಜನೆ ಶೀಘ್ರದಲ್ಲೇ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.