ETV Bharat / state

ಇಂದಿರಾ ಕ್ಯಾಂಟೀನ್ ನಡೆಸಲು ಹಣ ಇಲ್ಲ; 15 ದಿನಗಳಲ್ಲಿ ಮುಚ್ಚುವ ಸ್ಥಿತಿ ಇದೆ: ಬಿಬಿಎಂಪಿ ಆಯುಕ್ತ - ಕೌನ್ಸಿಲ್ ಸಭೆ

ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಹದಿನೈದು ದಿನದಲ್ಲಿ ಮುಚ್ಚುವ ಸ್ಥಿತಿ ಬಂದಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಕೌನ್ಸಿಲ್ ಸಭೆಯಲ್ಲಿ ತಿಳಿಸಿದ್ರು.

ಬಿಬಿಎಂಪಿ
author img

By

Published : Aug 27, 2019, 9:06 PM IST

ಬೆಂಗಳೂರು: 2019-20ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಇಂದಿರಾ ಕ್ಯಾಂಟೀನ್​ಗೆ ಅನುದಾನ ಬಿಡುಗಡೆಯಾಗಿಲ್ಲ. ಈಗ ತಾತ್ಕಾಲಿಕವಾಗಿ ಇಂದಿರಾ ಕ್ಯಾಂಟೀನನ್ನು ಮುಂದುವರಿಸಲಾಗುತ್ತಿದೆ. ಆದರೆ ಮುಂದಿನ 15 ದಿನಗಳಲ್ಲಿ ಅನಿವಾರ್ಯವಾಗಿ ಯೋಜನೆಯನ್ನು ಮುಚ್ಚುವ ಸ್ಥಿತಿ ಬಂದಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಕೌನ್ಸಿಲ್ ಸಭೆಯಲ್ಲಿ ಪಾಲಿಕೆ ಸದಸ್ಯರ ಗಮನಕ್ಕೆ ತಂದರು.

ಇಂದಿರಾ ಕ್ಯಾಂಟೀನ್‌ ಬಗೆಗಿನ ಅಂಕಿಅಂಶಗಳು:

ಇಂದಿರಾ ಕ್ಯಾಂಟೀನ್​ನಲ್ಲಿ ಈವರೆಗೆ 14 ಕೋಟಿ 40 ಲಕ್ಷ ಜನರು ಊಟ ಮಾಡಿದ್ದಾರೆ. ರಾಜ್ಯ ಸರ್ಕಾರದ ಯೋಜನೆ ಇದಾಗಿದ್ದು, ಕಳೆದ ಎರಡು ವರ್ಷ ಸರ್ಕಾರ ಯೋಜನೆಗೆ ಅನುದಾನ ನೀಡಿತ್ತು. ನಗರದಲ್ಲಿ ಒಟ್ಟು 173 ಇಂದಿರಾ ಕ್ಯಾಂಟೀನ್, 18 ಮೊಬೈಲ್ ಕ್ಯಾಂಟೀನ್​ಗಳಿವೆ. 2017-18 ರಲ್ಲಿ ಸರ್ಕಾರ 100 ಕೋಟಿ ರೂಪಾಯಿ ಬಿಡುಗಡೆ ಮಾಡಿತ್ತು. ಆಗ 24 ಕೋಟಿ ರೂ ಹೆಚ್ಚುವರಿ ಖರ್ಚಾಗಿತ್ತು. 2018-19ರಲ್ಲಿಯೂ ಕೂಡ ಸರ್ಕಾರ ಬಿಡುಗಡೆ ಮಾಡಿದ್ದಕ್ಕಿಂತ ಹೆಚ್ಚುವರಿ ಹಣ ಖರ್ಚಾಗಿತ್ತು. ಹೀಗಾಗಿ 2019-20 ನೇ ಸಾಲಿನಲ್ಲಿ 210 ಕೋಟಿ ರೂ. ಮೀಸಲಿಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು‌ ಎಂದರು.

15 ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚುವ ಸ್ಥಿತಿ ಬಂದಿದೆ: ಬಿಬಿಎಂಪಿ ಆಯುಕ್ತ

ಆದರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನಿಗೆ ಯಾವುದೇ ಹಣ ಮೀಸಲಿಡಲಿಲ್ಲ. ಅನುದಾನ ರಿಲೀಸ್‌ಗಾಗಿ 3 ಪತ್ರವನ್ನು ಬರೆಯಲಾಗಿತ್ತು. ಇವತ್ತಿಗೂ ಸರ್ಕಾರವಾಗಲೀ, ಪಾಲಿಕೆಯಾಗಲಿ ಯೋಜನೆಗೆ ಹಣ ಮೀಸಲಿಟ್ಟಿಲ್ಲ. ಹೀಗಾಗಿ ಕ್ಯಾಂಟೀನ್‌ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿದ್ದು, ನೀವು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಿ ಎಂದು ಪಾಲಿಕೆ ಸದಸ್ಯರ ಗಮನ ಸೆಳೆದರು.

'ಯಾವುದೇ ಕಾರಣಕ್ಕೂ ಕ್ಯಾಂಟಿನ್ ಮುಚ್ಚಲ್ಲ'

ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಗಂಗಾಂಬಿಕೆ, ಬೆಂಗಳೂರು ನಾಗರಿಕರಿಗೆ ಸಾಕಷ್ಟು ಉಪಯೋಗವಾಗುತ್ತಿರುವ ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲಾಗುವುದಿಲ್ಲ. ಇಂದಿನ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೂ ಮನವಿ ಮಾಡಲಾಗುವುದು. ಅಲ್ಲಿಯವರೆಗೂ ಪಾಲಿಕೆಯ ಕಲ್ಯಾಣ ಕಾರ್ಯಕ್ರಮದ ಅನುದಾನವನ್ನು ಬಳಸಿಕೊಳ್ಳುವ ಸಾಧ್ಯತೆ ಬಗ್ಗೆ ಆಯುಕ್ತರ ಜೊತೆ ಚರ್ಚಿಸಲಾಗುವುದು ಎಂದರು.

ಯೋಜನೆಯನ್ನು ತನಿಖೆಗೊಪ್ಪಿಸಿದ್ದೇಕೆ?

ಬಡವರ ಹೆಸರಲ್ಲಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್, ಗ್ರಾಹಕರ ಲೆಕ್ಕದಲ್ಲಿ ಖರ್ಚುವೆಚ್ಚ ತೋರಿಸಿ ಹೆಚ್ಚುವರಿ ಬಿಲ್ ಪಾವತಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಯೋಜನೆಯ ತನಿಖೆಗೆ ಆದೇಶಿಸಿದ್ದಾರೆ. ಗುತ್ತಿಗೆ ಸಂಸ್ಥೆಗಳಿಗೆ ನೀಡಿರುವ ಬಿಲ್ ಹಾಗೂ ಗ್ರಾಹಕರ ಸಂಖ್ಯೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

'ತಪ್ಪು ಕಂಡುಬಂದ್ರೆ ಕಠಿಣ ಕ್ರಮ'

ಈ ಬಗ್ಗೆ ಪ್ರತಿಕ್ರಿಯಿಸಿದ ಆಯುಕ್ತರು, ತೆರಿಗೆದಾರರ ಹಣದಲ್ಲಿ ಯಾವುದೇ ದೂರು ಬಂದರೂ ತನಿಖೆ ಮಾಡಬಹುದು. ತಪ್ಪಾಗಿದ್ದು ನಿಜವಾದರೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ಕೊಟ್ಟರು.

Intro:"ಹದಿನೈದು ದಿನದಲ್ಲಿ ಇಂದಿರಾ ಕ್ಯಾಂಟೀನ್ ಮುಚ್ಚುವ ಸ್ಥಿತಿ ಬಂದಿದೆ"- ಮಂಜುನಾಥ್ ಪ್ರಸಾದ್

ಬೆಂಗಳೂರು- 2019-20 ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಇಂದಿರಾ ಕ್ಯಾಂಟೀನ್ ಗೆ ಅನುದಾನ ಬಿಡುಗಡೆಯಾಗಿಲ್ಲ. ಹೊಸ ಟೆಂಡರ್ ಮಾಡಲಾಗದೆ ತಾತ್ಕಾಲಿಕವಾಗಿ ಇಂದಿರಾ ಕ್ಯಾಂಟೀನ್ ಮುಂದುವರಿಸಲಾಗುತ್ತಿದೆ. ಆದರೆ ಮುಂದಿನ ಹದಿನೈದು ದಿನದಲ್ಲಿ ಮುಚ್ಚುವ ಸ್ಥಿತಿ ಬಂದಿದೆ ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್, ಕೌನ್ಸಿಲ್ ಸಭೆಯಲ್ಲಿ ಕಾರ್ಪೋರೇಟರ್ಸ್ ಗಮನಕ್ಕೆ ತಂದರು.
ಇಂದಿರಾ ಕ್ಯಾಂಟೀನ್ ನಲ್ಲಿ ಈವರೆಗೆ 14 ಕೋಟಿಯ, 40 ಲಕ್ಷ ಜನರಿಗೆ ಊಟ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ಯೋಜನೆ ಇದಾಗಿದ್ದು, ಎರಡು ವರ್ಷ ಸರ್ಕಾರ ಇದಕ್ಕೆ ಅನುದಾನ ನೀಡಿತ್ತು. ನಗರದಲ್ಲಿ ಒಟ್ಟು 173 ಇಂದಿರಾ ಕ್ಯಾಂಟೀನ್, 18 ಮೊಬೈಲ್ ಕ್ಯಾಂಟೀನ್ ಗಳಿವೆ.
2017-18 ರಲ್ಲಿ ನೂರು ಕೋಟಿ ರುಪಾಯಿ ಬಿಡುಗಡೆ ಮಾಡಿತ್ತು. ಆಗ 24 ಕೋಟಿ ಹೆಚ್ಚುವರಿ ಖರ್ಚಾಗಿತ್ತು. 2018-19 ರಲ್ಲಿ ಕೂಡಾ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದಕ್ಕಿಂತ ಹೆಚ್ಚುವರಿ ಖರ್ಚಾಗಿತ್ತು. ಹೀಗಾಗಿ 2019-20 ನೇ ಸಾಲಿನಲ್ಲಿ 210 ಕೋಟಿ ರೂ. ಮೀಸಲಿಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು‌. ಆದ್ರೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನಿಗೆ ಯಾವುದೇ ಹಣ ಮೀಸಲಿಡಲಿಲ್ಲ. ಎರಡು ಮತ್ತು ಮೂರನೇ ಪತ್ರವನ್ನು ಕೂಡ ಬರೆಯಲಾಗಿತ್ತು. ಇವತ್ತಿಗೂ ಸರ್ಕಾರವಾಗಲಿ, ಪಾಲಿಕೆಯಲ್ಲಾಗಲಿ ಹಣ ಮೀಸಲಿಟ್ಟಿಲ್ಲ. ಹೀಗಾಗಿ
ಇದೀಗ ಇಂದಿರಾ ಕ್ಯಾಂಟೀನ್ ಮುಚ್ಚುವ ಪರಿಸ್ಥಿತಿ ಬಂದಿದ್ದು, ನೀವು ಚರ್ಚಿಸಿ ನಿರ್ಧಾರ ಮಾಡಿ ಎಂದು ಪಾಲಿಕೆ ಸದಸ್ಯರಿಗೆ ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಗಂಗಾಂಬಿಕೆ ಬೆಂಗಳೂರು ನಾಗರಿಕರಿಗೆ ಸಾಕಷ್ಟು ಉಪಯೋಗವಾಗುತ್ತಿರುವ ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲಾಗುವುದಿಲ್ಲ. ಇಂದಿನ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಂಡು ಸರ್ಕಾರಕ್ಕೂ ಮನವಿ ಮಾಡಲಾಗುವುದು. ಅಲ್ಲಿಯವರೆಗೂ ಪಾಲಿಕೆಯ ಕಲ್ಯಾಣ ಕಾರ್ಯಕ್ರಮದ ಅನುದಾನವನ್ನು ಬಳಸಿಕೊಳ್ಳುವ ಸಾಧ್ಉತೆ ಬಗ್ಗೆ ಆಯುಕ್ತರ ಜೊತೆ ಚರ್ಚಿಸಲಾಗುವುದು ಎಂದರು.
ಒಟ್ಟಿನಲ್ಲಿ ಮುಂದಿನ ಹದಿನೈದು ದಿನದಲ್ಲಿ ಇಂದಿರಾ ಕ್ಯಾಂಟೀನ್ ಭವಿಷ್ಯದ ಬಗ್ಗೆ ನಿರ್ಧಾರವಾಗಲಿದೆ.

ಸೌಮ್ಯಶ್ರೀ
Kn_Bng_03_indiracanteen_7202707Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.