ETV Bharat / state

ನಾಳೆ ಸಿಎಂ ಪದಗ್ರಹಣ; ಕಂಠೀರವ ಸ್ಟೇಡಿಯಂ ಸುತ್ತಮುತ್ತಲಿನ ಈ ಮಾರ್ಗಗಳಲ್ಲಿ ಬದಲಾವಣೆ

author img

By

Published : May 19, 2023, 4:53 PM IST

ನಾಳೆ ಸಿಎಂ, ಡಿಸಿಎಂ ಹಾಗೂ ಇತರ ಸಚಿವರುಗಳ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಕಂಠೀರವ ಸ್ಟೇಡಿಯಂ ಸುತ್ತಮುತ್ತಲಿನ ಈ ಮಾರ್ಗಗಳಲ್ಲಿ ಸಂಚಾರ ಪೊಲೀಸರು ಕೆಲ ಮಾರ್ಪಾಡುಗಳನ್ನು ಮಾಡಿದ್ದಾರೆ.

ಸಂಚಾರ ಪೊಲೀಸರು
ಸಂಚಾರ ಪೊಲೀಸರು

ಬೆಂಗಳೂರು : ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಇತರ ಸಚಿವರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಕೆಲ ಮಾರ್ಪಾಡುಗಳನ್ನ ಮಾಡಿದ್ದಾರೆ.

ಈ ಕೆಳಕಂಡ ಮಾರ್ಗಗಳಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30ರವರೆಗೂ ಬದಲಾವಣೆ : ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲ ಮಾದರಿಯ ವಾಹನಗಳನ್ನು ನಿರ್ಬಂಧಿಸಿದ್ದು, ಬದಲಿಗೆ ಕ್ಲೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲೆ ರಸ್ತೆ ಅಥವಾ ಕ್ವೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದಾಗಿರುತ್ತೆ.

ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳನ್ನು ಪಟ್ಟಾ ಜಂಕ್ಷನ್​ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಟ್ ಮಾಡಲಾಗುವುದರಿಂದ ಬಿಎಂಟಿಸಿ ಹಾಗೂ ಇತರ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ ತಿರುವು ಪಡೆದು ಕೆ ಆರ್ ಸರ್ಕಲ್‌ ಮುಖೇನ ಸಂಚರಿಸಬಹುದಾಗಿದೆ.

ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಿದ್ದು, ಕಬ್ಬನ್‌ ರಸ್ತೆಯ ಮೂಲಕ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್‌ ಸೆಂಟರ್‌ ಕಡೆಗೆ ಸಂಚರಿಸಬಹುದಾಗಿರುತ್ತೆ. ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್‌ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.

ವಾಹನಗಳ ನಿಲುಗಡೆ ಸ್ಥಳಗಳು: ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸೆಂಟ್ ಜೋಸೆಫ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇತರ ವಾಹನಗಳನ್ನು ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಕೆ. ಜಿ ರಸ್ತೆಯ ಎಡ ಬದಿಯಲ್ಲಿ ಹಾಗು ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಬಹುದಾಗಿದೆ.

ಆರ್.ಆರ್.ಎಂ.ಆರ್ ರಸ್ತೆ ಹಾಗೂ ಕಸ್ತೂರ ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲ ತರಹದ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರು ತಮ್ಮ ತಮ್ಮ ವಾಹನಗಳಿಂದ ಇಳಿದು ಕೆ. ಬಿ ರಸ್ತೆ, ಆರ್.ಆರ್.ಎಂ.ಆರ್ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್​ಗಳ ಮೂಲಕ ಪ್ರವೇಶಿಸಲು ಕೋರಲಾಗಿದೆ.

ಸ್ಪೋಟಕ ವಸ್ತುಗಳ ನಿಷೇಧ: ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಕೆಜಿ ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ/ ರಿಚ್ ಮಂಡ್ ಸರ್ಕಲ್ ಬಳಿ/ಕ್ವಿನ್ಸ್ ಸರ್ಕಲ್ ಬಳಿ ವಾಹನದಿಂದ ಇಳಿದು ತಮ್ಮ ವಾಹನಗಳನ್ನು ಅರಮನೆ ಮೈದಾನದಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ. ಸಮಾರಂಭ ಸ್ಥಳದಲ್ಲಿ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳನ್ನು, ಬೆಂಕಿಪಟ್ಟಣ, ಲೈಟರ್, ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಕ್ರೀಡಾಂಗಣದ ಅಕ್ಕಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಏರ್ಪಡುವ ಸಾಧ್ಯತೆ ಇರುವುದರಿಂದ ನಾಳೆ ಮುಖ್ಯ ಕೆಲಸಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಮುಂಚಿತವಾಗಿಯೇ ತೆರಳುವಂತೆ ಕೋರಲಾಗಿದೆ.

ನಾಳೆ ಸಿಇಟಿ ಪರೀಕ್ಷೆಗೆ ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಬೆಳಗ್ಗೆ 8.30ರ ಒಳಗಾಗಿ ತಲುಪುವಂತೆ ಸೂಚಿಸಲಾಗಿದೆ. ಯಾವುದೇ ವಿದ್ಯಾರ್ಥಿಗೆ ಸಂಚಾರ ಸಂಬಂಧಿತ ಸಹಾಯ ಬೇಕಿದ್ದಲ್ಲಿ, ರಸ್ತೆಯಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸರನ್ನು ಸಂಪರ್ಕಿಸಬಹುದಾಗಿದೆ. ಮಧ್ಯಾಹ್ನದ ಸಿಇಟಿ ಪರೀಕ್ಷೆಗೆ ಸೆಂಟ್ ಜೋಸೆಫ್ ಪಿಯು ಇಂಡಿಯನ್ ಕಾಲೇಜು, ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳು ಸೆಂಟ್ ಮಾರ್ಕ್ ರಸ್ತೆ, ವಿಠಲ್ ಮಲ್ಯ ರಸ್ತೆ ಮೂಲಕ ಬಂದು ಯುಬಿ ಸಿಟಿಯ ಮುಂಭಾಗದ ಗೇಟ್‌ನಿಂದ ಕಾಲೇಜಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ : 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ: ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.