ETV Bharat / state

ಹೋಮಿಯೋ ಕೇರ್ ಉದ್ಘಾಟನೆ ಮಾಡಿದ ಸಿಎಂ ಯಡಿಯೂರಪ್ಪ

ಹೋಮಿಯೋಪತಿ ಅಭ್ಯಾಸ ಮಾಡುತ್ತಿರುವವರು ಹೆಚ್ಚು ಸಂಶೋಧನೆಗಳನ್ನು ನಡೆಸಿ, ಅದನ್ನು ಜನರಿಗೆ ತಿಳಿಸಬೇಕು. ಹೋಮಿಯೋಪತಿಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ. ರೋಗನಿರೋಧಕ ಶಕ್ತಿ ವೃದ್ಧಿಸಲು ಈ ಪದ್ಧತಿ ಪೂರಕವಾಗಿದೆ. ಆದರೆ ಈ ಪದ್ಧತಿ ಬಹಳ ಸರಳ, ಸಲೀಸಾಗಿ ದೊರೆಯುತ್ತದೆ ಎಂಬ ಕಾರಣಕ್ಕೆ ಜನರಲ್ಲಿ ನಂಬಿಕೆ ಕಡಿಮೆಯಾಗಿದೆ ಎಂದೂ ಹೇಳಲಾಗುತ್ತಿದೆ.

Inauguration of Homeo Care From CM Yeddyurappa's
ಹೋಮಿಯೋ ಕೇರ್ ಉದ್ಘಾಟನೆ ಮಾಡಿದ ಸಿಎಂ
author img

By

Published : Nov 20, 2020, 7:47 PM IST

ಬೆಂಗಳೂರು: ಕೆಹೆಚ್​ಬಿ ಕಾಲೋನಿಯಲ್ಲಿ ಕರ್ನಾಟಕ ಹೋಮಿಯೋಪತಿ ಮಂಡಳಿಯ ನೂತನ ಆಡಳಿತ ಕಚೇರಿ ಹೋಮಿಯೋ ಭವನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ಈ ವೇಳೆ ಆರೋಗ್ಯ ಸಚಿವ ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾಗಿಯಾಗಿದ್ದರು‌.

Inauguration of Homeo Care From CM Yeddyurappa's
ಹೋಮಿಯೋ ಕೇರ್ ಉದ್ಘಾಟನೆ ಮಾಡಿದ ಸಿಎಂ

ಉದ್ಘಾಟನೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹೋಮಿಯೋಪತಿ ನೈಸರ್ಗಿಕ ವೈದ್ಯ ಪದ್ಧತಿ ವಿಶ್ವದೆಲ್ಲೆಡೆ ಜನಪ್ರಿಯವಾಗಿದೆ. ಈ‌ ಪದ್ಧತಿ ರೋಗ ನಿಯಂತ್ರಿಸುವಲ್ಲಿ ತುಂಬ ಶಕ್ತಿಶಾಲಿಯಾಗಿದೆ. ಇನ್ನು‌ ಕೊರೊನಾ ಎಂಬ ಸಾಂಕ್ರಾಮಿಕ ತಡೆಗಟ್ಟಲು,‌ ರೋಗವನ್ನ ನಿರೋಧಿಸಲು ಶಕ್ತಿ ವೃದ್ಧಿಸುವಲ್ಲಿ‌ ಹೋಮಿಯೋಪತಿ ಔಷಧಿ ಸೂಕ್ತವಾಗಿದೆ ಎಂದರು.

ಸಚಿವ ಡಾ. ಕೆ.ಸುಧಾಕರ್ ಮಾತನಾಡಿ, ಕೋವಿಡ್ ಸಮಯದಲ್ಲಿ ಬಹಳ ಜನರು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸರ್ಕಾರಿ ಹೋಮಿಯೋಪತಿ ಆಸ್ಪತ್ರೆಗಳಿಗೆ ಹೋಗಿ ಔಷಧಿ ಪಡೆದಿದ್ದಾರೆ. ಈ ರೀತಿ ಜನರು ಹೋಮಿಯೋಪತಿ ಕಡೆ ಆಸಕ್ತಿ ತೋರಿದ್ದಾರೆ. ಕೋವಿಡ್ ಸೋಂಕು ಆರಂಭವಾದ ಬಳಿಕ ಅಲೋಪತಿ ಮಾತ್ರವಲ್ಲದೆ ಯುನಾನಿ, ಆಯುರ್ವೇದ, ಹೋಮಿಯೋಪತಿಗೂ ಬೇಡಿಕೆ ಹೆಚ್ಚಿದೆ.

ಇಂತಹ ಸಮಯದಲ್ಲಿ ಹೋಮಿಯೋಪತಿ ಅಭ್ಯಾಸ ಮಾಡುತ್ತಿರುವವರು ಹೆಚ್ಚು ಸಂಶೋಧನೆಗಳನ್ನು ನಡೆಸಿ ಅದನ್ನು ಜನರಿಗೆ ತಿಳಿಸಬೇಕು. ಹೋಮಿಯೋಪತಿಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ. ರೋಗನಿರೋಧಕ ಶಕ್ತಿ ವೃದ್ಧಿಸಲು ಈ ಪದ್ಧತಿ ಪೂರಕವಾಗಿದೆ. ಆದರೆ ಈ ಪದ್ಧತಿ ಬಹಳ ಸರಳ, ಸಲೀಸಾಗಿ ದೊರೆಯುತ್ತದೆ ಎಂಬ ಕಾರಣಕ್ಕೆ ಜನರಲ್ಲಿ ನಂಬಿಕೆ ಕಡಿಮೆಯಾಗಿದೆ ಎಂದೂ ಹೇಳಲಾಗುತ್ತಿದೆ. ರಾಜ್ಯದಲ್ಲಿ ಹೋಮಿಯೋಪತಿ ಅಭ್ಯಾಸ ಮಾಡುವ 15 ಸಾವಿರ ವೈದ್ಯರಿದ್ದಾರೆ. ಎಲ್ಲರೂ ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಇನ್ನು ತೆಲಂಗಾಣದಲ್ಲಿ ಕೋವಿಡ್ ಪರೀಕ್ಷೆ, ಚಿಕಿತ್ಸೆಗೆ ಹಣ ಪಡೆಯಲಾಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಕಳೆದ 9 ತಿಂಗಳಿಂದ ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಯುತ್ತಿದೆ. ಸರ್ಕಾರದ ಶಿಫಾರಸು ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಸಾಮಾನ್ಯ ಜನರಿಗೆ ಆರೋಗ್ಯ ಭಾಗ್ಯ ನೀಡಬೇಕು ಎಂಬ ಗುರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಂದಿದ್ದಾರೆ. ಈ ಹೊಸ ಭವನ ಅದಕ್ಕೆ ಪೂರಕವಾಗಿದೆ. ಮಂಡಳಿ ಅಧ್ಯಕ್ಷ ಡಾ. ಬಿ.ಟಿ.ರುದ್ರೇಶ್ ಅವರು ತಮ್ಮ ಹಣ ಹಾಗೂ ದೇಣಿಗೆ ಬಳಸಿ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ ಎಂದು ಸುಧಾಕರ್ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.