ಬೆಂಗಳೂರು/ಮೈಸೂರು: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಎಲ್ಲೆಡೆ ಭರ್ಜರಿ ಪ್ರಚಾರ ಕೈಗೊಳ್ಳಲಾಗುತ್ತಿದೆ. ಇತ್ತ ಪೊಲೀಸರು, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯ ಚುರುಕುಗೊಳಿಸಿದ್ದು, ಅಕ್ರಮ ಹಣ ವಶಕ್ಕೆ ಪಡೆದಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆಲ ಅಭ್ಯರ್ಥಿಗಳು ಚುನಾವಣೆಯಲ್ಲಿ ಅಕ್ರಮ ಖರ್ಚಿಗಾಗಿ ದಾಸ್ತಾನು ಮಾಡಲಾಗಿತ್ತು ಎನ್ನಲಾದ ಬರೋಬ್ಬರಿ 20 ಕೋಟಿ ರೂಪಾಯಿ ಮೌಲ್ಯದ ಸಂಪತ್ತನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮೇ 4ರಂದು ನಡೆಸಿದ ಶೋಧ ಕಾರ್ಯದಲ್ಲಿ ಬೆಂಗಳೂರು ಹಾಗೂ ಮೈಸೂರಿನ ವಿವಿಧ ಫೈನಾನ್ಶಿಯರ್ಸ್ ಬಳಿ ಸಂಗ್ರಹವಾಗಿದ್ದ ಒಟ್ಟು 15 ಕೋಟಿ ರೂ.ಗಳಿಗೂ ಹೆಚ್ಚಿನ ಪ್ರಮಾಣದ ನಗದು ಮತ್ತು ಸುಮಾರು 5 ಕೋಟಿ ರೂ. ಬೆಲೆಬಾಳುವ ವಜ್ರಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಆರ್.ಎಂ.ವಿ ಬಡಾವಣೆ, ಕನ್ನಿಂಗ್ ಹ್ಯಾಂ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್, ಫೇರ್ ಫೀಲ್ಡ್ ಲೇಔಟ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಶೋಧ ಕಾರ್ಯ ಮಾಡಲಾಗಿತ್ತು ಎಂದು ಆದಾಯ ತೆರಿಗೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: Explained: ಕೋವಿಡ್ 19 ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯಲ್ವಾ; ವಿಶ್ವ ಆರೋಗ್ಯ ಸಂಸ್ಥೆ ಈ ರೀತಿ ಘೋಷಿಸಿದ್ದೇಕೆ?