ETV Bharat / state

ಸಿಲಿಕಾನ್​​ ಸಿಟಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ: ಬಿಬಿಎಂಪಿಯಿಂದ ಮುಂಜಾಗ್ರತ ಕ್ರಮ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಬಿಬಿಎಂಪಿ ವತಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ತಿಳಿಸಿದ್ದಾರೆ.

ಬಿಬಿಎಂಪಿಯಿಂದ ಸಕಲ ಸಿದ್ಧತೆ
ಬಿಬಿಎಂಪಿಯಿಂದ ಸಕಲ ಸಿದ್ಧತೆ
author img

By

Published : Jun 24, 2020, 6:12 PM IST

Updated : Jun 24, 2020, 7:43 PM IST

ಬೆಂಗಳೂರು: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಿಬಿಎಂಪಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಮುಖ್ಯಮಂತ್ರಿ ಅವರು ನೀಡಿರುವ ಸೂಚನೆಯಂತೆ ಕಲಾಸಿಪಾಳ್ಯ, ಕೆ.ಆರ್. ಮಾರುಕಟ್ಟೆ, ಚಿಕ್ಕಪೇಟೆ ಪ್ರದೇಶಗಳನ್ನು ಸೀಲ್​​ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ತಿಳಿಸಿದ್ದಾರೆ.

ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್

ಬಿಬಿಎಂಪಿ ವತಿಯಿಂದ, ಸೋಂಕಿತ ರೋಗಿಗಳನ್ನು ಅವರವರ ಮನೆಯಿಂದ ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಗೆ ವರ್ಗಾಯಿಸಲು 50 ಆ್ಯಂಬುಲೆನ್ಸ್​ಗಳ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ತಕ್ಷಣ ವರ್ಗಾಯಿಸಲು ಈ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಕೋವಿಡ್ ಕೇರ್ ಸೆಂಟರ್ ಹಜ್ ಭವನದಲ್ಲಿ 430 ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ರವಿಶಂಕರ್ ಗುರೂಜಿ ಆಸ್ಪತ್ರೆಯಲ್ಲೂ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ಹೇಳಿದರು.

ಹೋಟೆಲ್​​​ಗಳನ್ನು ಗುರುತು ಮಾಡಲಾಗಿದೆ. ಅಗತ್ಯ ಇರುವ ಆರೋಗ್ಯ ಸಿಬ್ಬಂದಿ, ಸೌಲಭ್ಯ ನೀಡುವ ಮ್ಯಾನೇಜ್​ಮೆಂಟ್ ಸಿಬ್ಬಂದಿಯನ್ನು ಸಹ ನೇಮಕ ಮಾಡಲಾಗುವುದು.‌ ಕಂಠೀರವ ಸ್ಟೇಡಿಯಂ, ತ್ರಿಪುರಾ ವಾಸಿನಿ ಅರಮನೆ ಮೈದಾನವನ್ನೂ ಸಿದ್ಧಗೊಳಿಸಿ, ಬೆಡ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

Last Updated : Jun 24, 2020, 7:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.