ETV Bharat / state

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ 15 ಕೆಟಗರಿಯಲ್ಲಿ ಕೊರೊನಾ ಟೆಸ್ಟ್:​ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ 15 ಕೆಟಗರಿಯಲ್ಲಿ ಕೊರೊನಾ ಟೆಸ್ಟ್ ಮಾಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಸಚಿವ ಶ್ರೀರಾಮುಲು
ಸಚಿವ ಶ್ರೀರಾಮುಲು
author img

By

Published : Jun 24, 2020, 3:36 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ 15 ಕೆಟಗರಿಯಲ್ಲಿ ಕೊರೊನಾ ಟೆಸ್ಟ್ ಮಾಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಟಾಸ್ಕ್ ಫೋರ್ಸ್ ಕಮಿಟಿ ಸಭೆ ಇದೆ. ಸಭೆಯಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಹಾಗೂ ಲಾಕ್ ಡೌನ್ ಮಾಡಬೇಕಾ?, ಬೇಡವಾ? ಎನ್ನುವುದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಾಹಿತಿ ಇದೆ. ಹೊರಗಿನಿಂದ ಬಂದವರು, ವ್ಯಾಪಾರಿಗಳು, ಕೈಗಾರಿಕೆಗಳಲ್ಲಿ ಕೆಲಸ ಮಾಡುವವರು, ಮಾರುಕಟ್ಟೆಗಳಲ್ಲಿ ಕೆಲಸ ಮಾಡುವವರು ಸೇರಿದಂತೆ 15 ಕೆಟಗಿರಿಯಲ್ಲಿ ಕೊರೊನಾ ಟೆಸ್ಟ್ ಮಾಡುತ್ತೇವೆ ಎಂದು ಹೇಳಿದರು.

ಹಿರಿಯ ನಾಗರಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವೆಂದು ಹೇಳಿದ ಸಚಿವರು, ಇದರಿಂದ ಸಮುದಾಯಕ್ಕೆ ಹೇಗೆ ಹರಡುತ್ತಿದೆ ಎಂಬುದು ತಿಳಿದು ಬರಲಿದೆ ಎಂದರು.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು

ಮುಂಜಾಗ್ರತಾ ಕ್ರಮ: ನಾಳೆಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭವಾಗಲಿದ್ದು, ಸುಮಾರು 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಯಾವೊಬ್ಬ ವಿದ್ಯಾರ್ಥಿಯೂ ಆತಂಕಕ್ಕೆ ಒಳಗಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚೆ ವಿದ್ಯಾರ್ಥಿಗಳು ಬರಬೇಕು. ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಹಾಗೂ ಕಂಟೈನ್ಮೆಂಟ್ ಝೋನ್​ನಿಂದ ಬರುವ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಲಾಕ್ ಡೌನ್ ಮತ್ತೆ ಬೇಕಾ?, ಬೇಡವಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನನ್ನ ವೈಯಕ್ತಿಕ ಅಭಿಪ್ರಾಯಗಳು ಬೇರೆ. ಬೇರೆ ರಾಜ್ಯಗಳಿಂದ ಬರುವವರಲ್ಲೇ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಈಗಾಗಲೇ ಕೆಲ ಭಾಗಗಳನ್ನು ಸೀಲ್​ಡೌನ್ ಮಾಡಲಾಗಿದೆ. ಜೊತೆಗೆ ಸೋಮವಾರ ನಡೆಯಲಿರುವ ಟಾಸ್ಕ್ ಫೋರ್ಸ್ ಕಮಿಟಿ ಸಭೆಯಲ್ಲಿ ಎಲ್ಲದರ ಬಗ್ಗೆ ಸಮಗ್ರ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಸಚಿವ ಶ್ರೀರಾಮುಲು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.