ಬೆಂಗಳೂರು: ಕೊರೊನಾ ಪರೀಕ್ಷಾ ಲ್ಯಾಬ್ ಸೇರಿದಂತೆ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಈಗ ರಾಜ್ಯದಲ್ಲಿ 29 ಲ್ಯಾಬ್ಗಳು ಕಾರ್ಯನಿರತವಾಗಿವೆ. ಎಲ್ಲಾ ಖಾಸಗಿ ವೈದ್ಯಕೀಯ, ಇಎಸ್ಐಎಸ್ ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್-19 ಪರೀಕ್ಷೆಗೆ RT-PCR ಲ್ಯಾಬ್ ಸ್ಥಾಪಿಸಲು ಆದೇಶಿಸಲಾಗಿದೆ. 1 ತಿಂಗಳಲ್ಲಿ 60 ಲ್ಯಾಬ್ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.