ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮೇಯರ್ ಗಂಗಾಂಬಿಕೆ ಧ್ವಜಾರೋಹಣ ನೆರವೇರಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ನಮಿಸಿ, ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ವತಿಯಿಂದ 38 ಲಕ್ಷ ಬೆಲೆಯ ಆಹಾರ ಮತ್ತು ಅಗತ್ಯ ಸಾಮಗ್ರಿಗಳನ್ನು ಸಾಗಿಸಲಾಯಿತು.
ಬಾಗಲಕೋಟೆ ಮತ್ತು ಬೆಳಗಾವಿಗೆ ತಲುಪಿಸುವ ವಾಹನಕ್ಕೆ ಮೇಯರ್ ಹಸಿರು ನಿಶಾನೆ ತೋರಿಸಿದರು. ಆಡಳಿತ ಪಕ್ಷದ ನಾಯಕ ವಾಜಿದ್ ,ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.