ಬೆಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲೂ 73ನೇ ಸ್ವಾತಂತ್ರ್ಯ ದಿನವನ್ನ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಇನ್ಫೆಂಟ್ರಿ ರಸ್ತೆ ಬಳಿ ಇರುವ ಕಮಿಷನರ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮಾಡಿದ್ದು, ನೂತನ ಕಮಿಷನರ್ ಭಾಸ್ಕರ್ ರಾವ್ ಧ್ವಜಾರೋಹಣ ನೆರವೇರಿಸಿದರು. ಎಲ್ಲ ಸಿಬ್ಬಂದಿಗೂ ಶುಭಾಶಯ ಕೋರಿ ಸಿಹಿ ಹಂಚಿ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗಿಯಾದರು.
ಕಮಿಷನರ್ ಕಚೇರಿ ಮಾತ್ರವಲ್ಲದೇ ಪೊಲೀಸ್ ಇಲಾಖೆಯ ಸಿಬ್ಬಂದಿ ಪ್ರತಿ ಠಾಣೆಯಲ್ಲೂ ಸ್ವಾತಂತ್ರ್ಯ ದಿನವನ್ನ ಆಚರಣೆ ಮಾಡಿದರು.