ಬೆಂಗಳೂರು: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವದ ಸ್ಥಾನಕ್ಕೆ ಭಾರತ ಅವಿರೋಧವಾಗಿ ಆಯ್ಕೆ ಆಗಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆಯ 192 ಸದಸ್ಯ ರಾಷ್ಟ್ರಗಳ ಪೈಕಿ, 184 ರಾಷ್ಟ್ರಗಳ ಬೆಂಬಲದಿಂದ ಭಾರತ ಈ ಸ್ಥಾನ ಪಡೆದಿರುವುದು ಜಾಗತಿಕವಾಗಿ ಭಾರತ ಹೊಂದಿರುವ ವಿಶ್ವಾಸ ಮತ್ತು ಸ್ನೇಹದ ದ್ಯೋತಕವಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿಗಳು, ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
