ಬೆಂಗಳೂರು : ಮಹಾನಗರದ ಬಡಜನತೆಯ ಹೊಟ್ಟೆ ತುಂಬಿಸುತ್ತಿದ್ದ ಇಂದಿರಾ ಕ್ಯಾಂಟೀನ್ಗೆ ಅನುದಾನದ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ. ಪಾಲಿಕೆ ಹಾಗೂ ಸರ್ಕಾರದ ನಡುವೆ ಅನುದಾನಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದ ಬಿಬಿಎಂಪಿಗೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಒಲ್ಲೆ ಎಂದಿದೆ.
ಕೇವಲ ಶೇಕಡಾ ಇಪ್ಪತ್ತೈದರಷ್ಟು ಅನುದಾನ ಕೊಡುವುದಕ್ಕೆ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ನೂರು ಶೇಕಡಾದ ಬದಲು ಐವತ್ತು ಪರ್ಸೆಂಟ್ ಆದರೂ ಅನುದಾನ ಕೊಡುವಂತೆ ಮನವಿ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದ್ದಾರೆ.
ಆಗಸ್ಟ್ ತಿಂಗಳಿಗೆ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ಅವಧಿ ಮುಗಿದಿದ್ದು, ಹೊಸ ಟೆಂಡರ್ ಕರೆಯುವವರೆಗೂ ಹಳೆಯ ಗುತ್ತಿಗೆದಾರರನ್ನೇ ಮುಂದುವರಿಸುವಂತೆ ಮನವಿ ಮಾಡಿದ್ದಾರೆ. ಈ ಮಧ್ಯೆ ಇಂದಿರಾ ಕ್ಯಾಂಟೀನ್ನ ಅವ್ಯವಹಾರ ಆರೋಪದ ಹಿನ್ನೆಲೆ ಸರ್ಕಾರ ತನಿಖೆಗೂ ಆದೇಶಿಸಿದೆ.
ಆದ್ರೆ,150 ಕೋಟಿ ರುಪಾಯಿ ಇಂದಿರಾ ಕ್ಯಾಂಟೀನ್ ನಿರ್ವಹಣಾ ವೆಚ್ಚ ಬಿಬಿಎಂಪಿಗೆ ಹೊರೆಯಾಗಿದೆ ಎಂದು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ತಿಳಿಸಿದ್ದಾರೆ.