ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಿಲ್ಲ. ಆದರೆ, ಗ್ರಾಹಕರಿಲ್ಲದ 'ಇಂದಿರಾ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಗಿತಗೊಳಿಸಲಾಗಿದೆ' ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಿರಿನಾಥ್ 18 ಇಂದಿರಾ ಮೊಬೈಲ್ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಹಲವು ತಿಂಗಳಿಂದ ಈ ಕ್ಯಾಂಟೀನ್‌ಗಳಿಗೆ ಗ್ರಾಹಕರೇ ಇರಲಿಲ್ಲ, ನಡೆಸುವುದು ತೀರಾ ಕಷ್ಟವಾಗಿತ್ತು, ಪರಿಶೀಲಿಸಿ ಕ್ರಮಕ್ಕೆ ಸೂಚಿಸಲಾಗಿತ್ತು. ಹೀಗಾಗಿ ಒಂದೊಂದನ್ನೇ ನಿಲ್ಲಿಸಲಾಗಿದೆ. ಗ್ರಾಹಕರೇ ಇಲ್ಲದ ಮೇಲೆ ಅದನ್ನು ಉಳಿಸಿಕೊಳ್ಳುವುದು ಬೇಡವೆಂದು ಎಲ್ಲವನ್ನೂ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ವಾರ್ಡ್ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೆಲವು ಕಾರ್ಯನಿರ್ಹಿಸುತ್ತಿಲ್ಲ. ಅದಮ್ಯ ಚೇತನ ಸಂಸ್ಥೆಗೆ ನೀಡಿದ್ದ ಗುತ್ತಿಗೆ ಅವಧಿ ಮುಗಿದಿದ್ದು, ಅದನ್ನು ನವೀಕರಿಸುವ ಪ್ರಕ್ರಿಯೆ ಸರ್ಕಾರದ ಹಂತದಲ್ಲಿದೆ ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಸ್ತಾಪ ಸದ್ಯಕ್ಕೆ ಇಲ್ಲ ಎಂದು ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ನಡು ರಾತ್ರಿ ಕೆಟ್ಟು ನಿಂತ ಶಾಲಾ ಮಕ್ಕಳ ಬಸ್ : ರಿಪೇರಿ ಮಾಡಿಸಿ ಮಾನವೀಯತೆ ಮೆರೆದ ಪಿಎಸ್ಐ