ETV Bharat / state

Indira Canteen : ತಮ್ಮ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಕಾಯಕಲ್ಪಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ - ಈಟಿವಿ ಭಾರತ್​ ಕನ್ನಡ ನ್ಯೂಸ್

ಇಂದಿರಾ ಕ್ಯಾಂಟೀನ್​ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಸಿದ್ದರಾಮಯ್ಯ ಸಭೆ ಕರೆದಿದ್ದಾರೆ.

ಇಂದಿರಾ ಕ್ಯಾಂಟೀನ್
ಇಂದಿರಾ ಕ್ಯಾಂಟೀನ್
author img

By

Published : Jun 11, 2023, 6:13 PM IST

ಬೆಂಗಳೂರು : ಮಹಾನಗರದಲ್ಲಿ ಆರಂಭವಾಗಿ ರಾಜ್ಯಾದ್ಯಂತ ವಿಸ್ತರಣೆ ಆಗಿರುವ ಇಂದಿರಾ ಕ್ಯಾಂಟೀನ್ ಕಾಯಕಲ್ಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಕನಸಿನ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಪುನಶ್ಚೇತನ ಮಾಡುವುದನ್ನೇ ಗುರಿಯಾಗಿಸಿಕೊಂಡು ನಾಳೆ ಮಹತ್ವದ ಸಭೆ ಕರೆದಿದ್ದಾರೆ. ನಗರದ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 1 ಗಂಟೆಗೆ ಅಧಿಕಾರಿಗಳನ್ನು ಸಭೆ ಕರೆದಿದ್ದು, ಇಂದಿರಾ ಕ್ಯಾಂಟೀನ್​ಗೆ ಮತ್ತೆ ಹಳೆಯ ವೈಭವ ಕಲ್ಪಿಸುವ ಹಾಗೂ ಇನ್ನಷ್ಟು ಉನ್ನತೀಕರಿಸುವ ವಿಚಾರವಾಗಿ ಸಿದ್ದರಾಮಯ್ಯ ಗಂಭೀರ ಚರ್ಚೆ ನಡೆಸಲಿದ್ದಾರೆ.

ಇಂದಿರಾ ಕ್ಯಾಂಟೀನ್ ಹಿನ್ನೆಲೆ : ರಾಜ್ಯದಲ್ಲಿ 2013 ರಿಂದ 18ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ನಗರದ ಎಲ್ಲಾ 198 ವಾರ್ಡ್ ಗಳಿಗೂ ಇಂದಿರಾ ಕ್ಯಾಂಟೀನ್ ನಿರ್ಮಿಸುವ ಗುರಿ ಹೊಂದಲಾಗಿತ್ತು. ಆದರೆ ಇದು ಪೂರ್ಣಗೊಳ್ಳುವ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಂಡು ಬಹುಮತದ ಸರ್ಕಾರ ಬರದ ಹಿನ್ನೆಲೆ 2018 ರಲ್ಲಿ ಜೆಡಿಎಸ್ ಜೊತೆ ಕೈಜೋಡಿಸಿ ಕಾಂಗ್ರೆಸ್ ಸರ್ಕಾರ ನಡೆಸಿತ್ತು. ಅಲ್ಲಿಯವರೆಗೂ ಎಲ್ಲವೂ ಸರಿಯಾಗಿತ್ತು.

ಆದರೆ ಬಿಜೆಪಿ ಸರ್ಕಾರ ರಚನೆಯಾದ ಬಳಿಕ 2019 ರಿಂದ 2023ರ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಗಳು ಮುಚ್ಚಿದ್ದವು. ಮೊಬೈಲ್ ಕ್ಯಾಂಟೀನ್ ಗಳು ಸಹ ಸ್ಥಗಿತಗೊಂಡಿದ್ದವು. ರಾಜ್ಯದಲ್ಲಿ ತಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುವ ಜೊತೆಗೆ ಇನ್ನಷ್ಟು ಕ್ಯಾಂಟೀನ್​ಗಳನ್ನು ಆರಂಭಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಅದೇ ಪ್ರಕಾರ ಆ ಕಾರ್ಯದಲ್ಲಿ ಈಗ ನಿರತವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 185 ಇಂದಿರಾ ಕ್ಯಾಂಟೀನ್‌ಗಳು ಇದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ 10 ಮೊಬೈಲ್ ಕ್ಯಾಂಟೀನ್‌ಗಳ ಮುಚ್ಚಿದ್ದವು. ಹಾಲಿ ಕ್ಯಾಂಟೀನ್‌ಗಳ ಪುನಾರಂಭ ಜೊತೆಗೆ 243 ವಾರ್ಡ್‌ಗಳಿಗೂ ಕ್ಯಾಂಟೀನ್ ವಿಸ್ತರಣೆಗೆ ಸಿದ್ದರಾಮಯ್ಯ ಸರ್ಕಾರ ಸಿದ್ಧತೆ ನಡೆದಿದೆ. ಅಲ್ಲದೇ ಆಹಾರದ ಪ್ರಮಾಣ (ಕ್ವಾಂಟಿಟಿ), ಗುಣಮಟ್ಟ ಹೆಚ್ಚಿಸಲಿದೆ. ಇದರಿಂದ ಬೆಲೆ ಸಹ 5-10 ರೂಪಾಯಿ ಹೆಚ್ಚಾಗಬಹುದು ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಇನ್ನೊಂದೆಡೆ ಗುಣಮಟ್ಟದ ಆಹಾರವನ್ನು ಪರಿಶೀಲಿಸಲು ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದು. ಬೆಂಗಳೂರು ನಗರದಲ್ಲಿ ಸಚಿವರು ಈ ಕಾರ್ಯದಲ್ಲಿ ತೊಡಗಿದ್ದಾರೆ. ನಾಳಿನ ಸಭೆ ಇಂದಿರಾ ಕ್ಯಾಂಟೀನ್ ಅಭಿವೃದ್ಧಿ ವಿಚಾರದಲ್ಲಿ ಅತ್ಯಂತ ಮಹತ್ವದ ಸಭೆ ಅನ್ನಿಸಿಕೊಂಡಿದೆ.

ಸದ್ಯ ಕ್ಯಾಂಟೀನ್​ನಲ್ಲಿ ಬೆಳಗ್ಗೆ 7.30 ರಿಂದ 10.30ರ ವರೆಗೆ ತಿಂಡಿ ವಿತರಣೆ, ಮಧ್ಯಾಹ್ನ 12.30ರಿಂದ 2.30ರವರೆಗೆ ಮಧ್ಯಾಹ್ನದ ಊಟ, ರಾತ್ರಿ 7.30 ರಿಂದ 8.30ರವರೆಗೆ ಊಟ ಲಭ್ಯವಿರುತ್ತದೆ. ಆಯಾ ಕ್ಯಾಂಟೀನ್‍ಗಳಲ್ಲಿ ಎಷ್ಟು ಊಟ ಲಭ್ಯವಿದೆ ಎನ್ನುವ ಮಾಹಿತಿ ಡಿಸ್‍ಪ್ಲೇ ಬೋರ್ಡ್‍ನಲ್ಲಿ ಪ್ರಕಟಿಸಲಾಗುತ್ತದೆ. ಪ್ರತಿ ಕ್ಯಾಂಟೀನ್‍ನಲ್ಲೂ ಆಹಾರದ ಸುರಕ್ಷತೆಗಾಗಿ ಆರೋಗ್ಯಾಧಿಕಾರಿಗಳನ್ನು ನೇಮಿಸುವುದರ ಜೊತೆಗೆ ಕ್ಯಾಂಟೀನ್‍ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ 185 ಇಂದಿರಾ ಕ್ಯಾಂಟೀನ್‌ಗಳ ನಿರ್ವಹಣೆಯ ಗುತ್ತಿಗೆಯನ್ನು ಶೆಫ್‌ಟಾಕ್‌, ರಿವಾರ್ಡ್ಸ್ ಮತ್ತು ಅದಮ್ಯ ಚೇತನ ಸಂಸ್ಥೆಗೆ ವಹಿಸಲಾಗಿತ್ತು. ಸದ್ಯ ಅದಮ್ಯ ಚೇತನ 40, ಶೆಫ್‌ಟಾಕ್‌ 92 ಮತ್ತು ರಿವಾರ್ಡ್ಸ್ ಸಂಸ್ಥೆಯು 40 ಕ್ಯಾಂಟೀನ್‌ಗಳನ್ನಷ್ಟೇ ನಿರ್ವಹಿಸುತ್ತಿವೆ. ಈ ಪೈಕಿ ಕೆಲವೊಂದು ಕ್ಯಾಂಟೀನ್‌ಗಳಲ್ಲಿ ರಾತ್ರಿ ಊಟ ನೀಡುವುದನ್ನು ನಿಲ್ಲಿಸಲಾಗಿದೆ. ಗುಣಮಟ್ಟದ ಹಾಗೂ ರುಚಿಕರ ಆಹಾರ ದೊರಕದ ಕಾರಣ ಬಹುತೇಕರು ಇಂದಿರಾ ಕ್ಯಾಂಟೀನ್‌ಗಳತ್ತ ಮುಖ ಮಾಡುತ್ತಿಲ್ಲ.

ಹೀಗಾಗಿ, ಕ್ಯಾಂಟೀನ್‌ಗಳಲ್ಲಿ ತಿಂಡಿ, ಊಟ ಮಾಡುತ್ತಿದ್ದವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಸ್ಥಳಾವಕಾಶದ ಕೊರತೆ ಇರುವ ವಾರ್ಡ್‌ಗಳಲ್ಲಿ ಮೊಬೈಲ್‌ ಕ್ಯಾಂಟೀನ್‌ಗಳ ಮೂಲಕ ಆಟೋ, ಟ್ಯಾಕ್ಸಿ ಚಾಲಕರು, ಬೀದಿಬದಿ ವ್ಯಾಪಾರಿಗಳು, ನಿರ್ಗತಿಕರಿಗೆ ಊಟ, ತಿಂಡಿ ವಿತರಿಸಲಾಗುತ್ತಿತ್ತು. ಆದರೆ ಇದು ಹಿಂದಿನ ವೈಭವ ಕಳೆದುಕೊಂಡಿದ್ದು, ಮತ್ತೆ ಇದಕ್ಕೆ ಕಾಯಕಲ್ಪ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್ ಜನಪ್ರಿಯತೆ ಸಾಧಿಸಿದ್ದ ಹಿನ್ನೆಲೆಯಲ್ಲಿ 2017ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಇದೀಗ ಅದಕ್ಕೆ ಜೀವ ತುಂಬುವ ಯತ್ನದಲ್ಲಿ ಇದ್ದಾರೆ.

ಇದನ್ನೂ ಓದಿ : ಆರ್ಥಿಕ ಸಂಕಷ್ಟದ ನಡುವೆಯೂ ಹೊಸದಾಗಿ 50 ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಮುಂದಾದ ಪಾಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.