ETV Bharat / state

ರಾಜ್ಯದಲ್ಲಿ 3,368 ಆಂಬ್ಯುಲೆನ್ಸ್​ಗಳಿಗೆ ಜಿಪಿಎಸ್​ ಅಳವಡಿಕೆ: ಹೈಕೋರ್ಟ್ - Etv Bharat Kannada

ಆಂಬ್ಯುಲೆನ್ಸ್‌ಗಳು ತಡೆ ರಹಿತವಾಗಿ ಸಂಚರಿಸಲು ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಬೇಕು ಎಂದು ಹೈಕೋರ್ಟ್​ ಆದೇಶ ಹೊರಡಿಸಿತ್ತು. ಅದರಂತೆ ಆಂಬ್ಯುಲೆನ್ಸ್​ಗಳಿಗೆ ಜಿಪಿಎಸ್​ ಅಳವಡಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್​ಗೆ ತಿಳಿಸಿದೆ.

KN_BNG
ಹೈಕೋರ್ಟ್
author img

By

Published : Dec 2, 2022, 11:00 PM IST

ಬೆಂಗಳೂರು: ಆಂಬ್ಯುಲೆನ್ಸ್‌ಗಳ ತಡೆ ರಹಿತವಾಗಿ ಸಂಚಾರಕ್ಕೆ ಅನುವು ಮಾಡಿಕೊಡುವ ಹಿನ್ನೆಲೆಯಲ್ಲಿ ಈವರೆಗೂ ಒಟ್ಟು 3,368 ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದಲ್ಲಿರುವ ಎಲ್ಲ ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಅವರ ನೇತೃತ್ವದ ವಿಭಾಗೀಯ ಪೀಠದ ವಿಚಾರಣೆ ನಡೆಸಿತು.

ಆಂಬ್ಯುಲೆನ್ಸ್‌ಗಳು ತಡೆ ರಹಿತವಾಗಿ ಸಂಚರಿಸಲು ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಬೇಕು ಎಂದು ನ.8ರಂದು ಹೈಕೋರ್ಟ್ ನೀಡಿರುವ ಆದೇಶದ ಅನುಪಾಲನಾ ವರದಿಯನ್ನು ಸರ್ಕಾರಿ ವಕೀಲರಾದ ಪ್ರತಿಮಾ ಹೊನ್ನಾಪುರ ನ್ಯಾಯಪೀಠಕ್ಕೆ ವಿವರಿಸಿದರು.

ರಾಜ್ಯದಲ್ಲಿ ಖಾಸಗಿ ಹಾಗೂ ಸರ್ಕಾರಕ್ಕೆ ಸೇರಿದ 12,107 ಆಂಬ್ಯುಲೆನ್ಸ್‌ಗಳಿವೆ. ಅವುಗಳನ್ನು ಸರ್ಕಾರ ತಪಾಸಣೆ ನಡೆಸಿದಾಗ 3,368ಗಳಿಗೆ ಮಾತ್ರ ಜಿಪಿಎಸ್ ಅಳವಡಿಸಿರುವುದು ಕಂಡುಬದಿದೆ. ಉಳಿದ ಆಂಬ್ಯುಲೆನ್ಸ್‌ಗಳಿಗೂ ಜಿಪಿಎಸ್ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಸಂಚರಿಸುವ ಮಾರ್ಗದ ಕುರಿತು ಸಂಚಾರ ದಟ್ಟಣೆ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಎಲ್ಲ ಆಂಬ್ಯುಲೆನ್ಸ್‌ಗಳ ಚಾಲಕರಿಗೆ ಮಾಹಿತಿ ನೀಡಲಾಗಿದೆ.

ಅದಕ್ಕಾಗಿ ವಿಶೇಷ ಸಹಾಯವಾಣಿ ಸಂಖ್ಯೆ ಪ್ರಕಟಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಸಂಯೋಜಿತ ಆಂಬ್ಯುಲೆನ್ಸ್‌ ಸೇವೆಗೆ ಒದಗಿಸಲು ಟೆಂಡರ್ ಕರೆಯಲಾಗಿತ್ತು. ಆದರೆ, ಟೆಂಡರ್‌ಗೆ ಈವರೆಗೂ ಯಾವುದೇ ಬಿಡ್ ಸ್ವೀಕರಿಸಿಲ್ಲ. ಆದ್ದರಿಂದ ಮುಂದಿನ 15 ದಿನಗಳಲ್ಲಿ ಹೊಸದಾಗಿ ಟೆಂಡರ್ ಅಧಿಸೂಚನೆಯನ್ನು ಹೊರಡಿಸಲು ಸರ್ಕಾರ ಸೂಚಿಸಿದೆ ಎಂದು ಮಾಹಿತಿ ನೀಡಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಸರ್ಕಾರವು ಪ್ರಕರಣವನ್ನು ತುರ್ತಾಗಿ ಪರಿಗಣಿಸಿ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ನ್ಯಾಯಾಲಯ ನಿರೀಕ್ಷಿಸಿದೆ. 15 ದಿನ ಅವಧಿಗೆ ಕಾಯದೆ ಟೆಂಡರ್‌ಗೆ ಅನುಮೋದನೆ ನೀಡಬೇಕು. ಸಹಾಯವಾಣಿ ಸಂಖ್ಯೆಯನ್ನು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಕೊಡಬೇಕು.

ಆ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು. ಇದರಿಂದ ಆ್ಯಂಬುಲೆನ್ಸ್ ಸಂಚರಿಸುವ ಮಾರ್ಗದಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಪೊಲೀಸರಿಗೆ ಸಹಾಯವಾಗುತ್ತದೆ. ಹುಸಿ ಕರೆಗಳನ್ನು ಪರಿಶೀಲನೆ ಮಾಡಲು ಇದು ಸಹಾಯವಾಗಲಿದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಜ.11ಕ್ಕೆ ಮುಂದೂಡಿದೆ.

ಇದನ್ನೂ ಓದಿ: 10 ವರ್ಷಗಳ ಬಳಿಕ ಮೇಲ್ಮನವಿ ಸಲ್ಲಿಸಿದ್ದ ಬಿಡಿಎ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.