ETV Bharat / state

ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಶೀಘ್ರ ಭರ್ತಿ: ಸಚಿವ ಆರ್. ಅಶೋಕ್ - ಆರ್​ ಅಶೋಕ್​

ಲೋಕಸೇವಾ ಆಯೋಗದ ಮೂಲಕ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಮಾದರಿಯಲ್ಲೇ ಗ್ರಾಮ ಲೆಕ್ಕಿಗರಿಗೂ ಲಿಖಿತ ಪರೀಕ್ಷೆ ನಡೆಸುವ ಆಲೋಚನೆ ಇಲ್ಲವೆಂದು ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್​ ಅಶೋಕ್​ ಹೇಳಿದ್ದಾರೆ.

R Ashok
ಸಚಿವ ಆರ್. ಅಶೋಕ್
author img

By

Published : Mar 22, 2021, 3:45 PM IST

ಬೆಂಗಳೂರು: ರಾಜ್ಯದಲ್ಲಿ ಒಟ್ಟು 9,776 ಗ್ರಾಮ ಲೆಕ್ಕಾಧಿಕಾರಿಗಳಿದ್ದು, ಅದರಲ್ಲಿ 1,660 ಹುದ್ದೆ ಖಾಲಿ ಇದೆ. ಕೊರೊನಾ ಕಾರಣದಿಂದ ಹೊಸ ನೇಮಕಾತಿಗಳಿಗೆ ಅವಕಾಶ ಇಲ್ಲ. ಹೊಸ ನೇಮಕಾತಿಗಳಿಗೆ ಆರ್ಥಿಕ ಇಲಾಖೆ ಅವಕಾಶ ನೀಡಿದ ನಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದರು.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದ ಬಗ್ಗೆ ಕೇಳಿದಾಗ ಸಚಿವರು ಗ್ರಾಮ ಲೆಕ್ಕಾಧಿಕಾರಿ ಹುದ್ದೆಯನ್ನು ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳುವ ನಿಯಮಗಳು ಪ್ರಸ್ತುತ ಜಾರಿಯಲ್ಲಿವೆ. ಇವುಗಳನ್ನು ಬದಲಾಯಿಸಿ ಲಿಖಿತ ಪರೀಕ್ಷೆ ನಡೆಸುವ ತೀರ್ಮಾನಗಳು ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ವಿಧಾನಸಭೆ ಕಲಾಪ

ಲೋಕಸೇವಾ ಆಯೋಗದ ಮೂಲಕ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಮಾದರಿಯಲ್ಲೇ ಗ್ರಾಮ ಲೆಕ್ಕಿಗರಿಗೂ ಲಿಖಿತ ಪರೀಕ್ಷೆ ನಡೆಸುವ ಆಲೋಚನೆ ಇಲ್ಲ. 2008-09 ರಲ್ಲೇ ನೇರ ನೇಮಕಾತಿ ಮಾಡುವ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ತಮ್ಮ ಕಾರ್ಯ ವ್ಯಾಪ್ತಿಯ ಸ್ಥಳಗಳಲ್ಲೆ ವಾಸ ಮಾಡುವಂತೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ

ರಾಜ್ಯದಲ್ಲಿರುವ ಎಲ್ಲ ಗ್ರಾಮ ಲೆಕ್ಕಾಧಿಕಾಗಳು ತಮ್ಮ ಕಾರ್ಯ ವ್ಯಾಪ್ತಿಯ ಸ್ಥಳಗಳಲ್ಲೇ ವಾಸ ಮಾಡುವಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆ ಗ್ರಾಮ ಲೆಕ್ಕಾಧಿಕಾರಿಗಳು ನಗರ, ಪಟ್ಟಣಗಳಲ್ಲಿ ವಾಸ ಮಾಡುತ್ತಾರೆ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲೇ ವಾಸ ಮಾಡಲು ಅವರಿಗೆ ವಸತಿ ಎಲ್ಲವನ್ನೂ ಕಲ್ಪಿಸಬೇಕಾಗಿದೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಗ್ರಾಮ ಮಟ್ಟದಲ್ಲೇ ಅವರ ವಾಸಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.