ETV Bharat / state

ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ - ಸರ್ಕಾರದ ಪ್ರಧಾನ ಕಾರ್ಯದರ್ಶಿ

ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಬೇಕಾದ್ರೆ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿಧಾನಸೌಧ
ವಿಧಾನಸೌಧ
author img

By ETV Bharat Karnataka Team

Published : Sep 1, 2023, 10:57 PM IST

ಬೆಂಗಳೂರು : ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 3ಕ್ಕೆ ಮುಗಿದಿದೆಯಾದರೂ, ಕೆಲ ಇಲಾಖೆಗಳು ನಿಗದಿತ ಶೇ. 6ಕ್ಕಿಂತ ಹೆಚ್ಚು ವರ್ಗಾವಣೆ ಮಾಡಿದ್ದು, ವರ್ಗಾವಣೋತ್ತರ ಅನುಮೋದನೆಗೆ ಕಡತ ಮಂಡಿಸಲಾಗಿದೆ. ಇದು ನಿಯಮ ಬಾಹಿರ. ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಅನಿವಾರ್ಯವಾದರೆ, ಅಗತ್ಯ ಕಾರಣ ನೀಡಿ ಮುಖ್ಯಮಂತ್ರಿ ಅವರ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.

ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ನಿರ್ದಿಷ್ಟಪಡಿಸಲಾಗಿದೆ. ಆದರೆ ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಮೇಲೆ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ, ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ಪಡೆಯತಕ್ಕದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರು ಯಾವುದೇ ಪ್ರಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮುಖ್ಯಮಂತ್ರಿಯವರ ಸ್ಥಿರೀಕರಣ/ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.

ದಿನಾಂಕ:30.05.2023, 16.06.2023 ಮತ್ತು 30.06.2023ರ ಸರ್ಕಾರದ ಆದೇಶಗಳಲ್ಲಿ 2023-24ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ:01.06.2023 ರಿಂದ 03.07.2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: ವಿಚ್ಛೇದಿತ ಸರ್ಕಾರಿ ಉದ್ಯೋಗಿ ಸೇವೆಯಲ್ಲಿರುವಾಗಲೇ ಮೃತಪಟ್ಟರೆ ಅವಲಂಬಿತರ ನೇಮಕಾತಿ : ಸರ್ಕಾರದ ಸ್ಪಷ್ಟನೆ

ಆದರೆ, ನಿಗದಿತ ವರ್ಗಾವಣಾ ಅವಧಿಯ ನಂತರವೂ ಇಲಾಖಾ ಹಂತದಲ್ಲಿ ವರ್ಗಾವಣೆಗಳನ್ನು, ಜಾರಿಗೊಳಿಸಿ ನಂತರ ಘಟನೋತ್ತರ ಅನುಮೋದನೆಗಾಗಿ ಪುಸ್ತಾವನೆಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತಿದ್ದು, ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.

ಒಂದು ವೇಳೆ ಪೂರ್ವಾನುಮೋದನೆಯನ್ನು ಪಡೆಯದೇ ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುತ್ತಾ, ಸರ್ಕಾರದ ಸೂಚನೆಯನ್ನು ಚಾಚೂತಪ್ಪದೆ ಪಾಲಿಸತಕ್ಕದೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಗ್ಯಾರಂಟಿ ಜಾರಿ ನಡುವೆ ಸರ್ಕಾರಕ್ಕೆ ನೌಕರರ ಬೇಡಿಕೆಗಳ ಭಾರ..! 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಿಗುತ್ತಾ ಅನುದಾನ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.