ETV Bharat / state

ಹು-ಧಾ ಭಾಗದ ರಸ್ತೆ ಕಾಮಗಾರಿ ಕುರಿತು ಎನ್​ಹೆಚ್ಎಐಗೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ಸೂಚನೆ - Hubli-Dharwad road works

ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆಯಲ್ಲಿ ನಡೆಸಿದ ಸಭೆಯ ಕುರಿತು ಚರ್ಚಿಸಿದರು. ಬಳಿಕ ಸಭೆಯ ಅಂಶಗಳನ್ನು ಒಳಗೊಂಡಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಸೂಚನೆ ನೀಡಿದರು. ತಾವು ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
author img

By

Published : Aug 5, 2020, 11:26 PM IST

ಬೆಂಗಳೂರು: ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆ ನಡೆಸಿರುವ ಸಭೆಯ ಅಂಶಗಳನ್ನು ಒಳಗೊಂಡ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಶುಕ್ರವಾರದ ಒಳಗಾಗಿ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸಚಿವ ಶೆಟ್ಟರ್ ಸೂಚನೆ ನೀಡಲಾಯಿತು.

ಇಂದು ವಿಡಿಯೋ ಸಂವಾದದ ಮೂಲಕ ಹುಬ್ಬಳ್ಳಿ-ಧಾರವಾಡ ಭಾಗದ ಕೆಆರ್​ಡಿಸಿಎಲ್, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಅಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ವಿಡಿಯೋ ಸಂವಾದದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮತ್ತು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭಾಗವಹಿಸಿದ್ದರು.

ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜುಲೈ 24 ರಂದು ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ನಡೆದ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆಯಲ್ಲಿ ನಡೆಸಿದ ಸಭೆಯ ಕುರಿತು ಚರ್ಚಿಸಿದರು. ಬಳಿಕ ಸಭೆಯ ಅಂಶಗಳನ್ನು ಒಳಗೊಂಡಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಸೂಚನೆ ನೀಡಿದರು. ತಾವು ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಕಾಮಗಾರಿ ಪ್ರಾರಂಭದ ನಂತರ ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ಸಂಬಂಧಪಟ್ಟ ಎಲ್ಲಾ ಕಡೆಗಳಿಂದ ಅಗತ್ಯ ಒಡಂಬಡಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಈ ಪ್ರಸ್ತಾಪದ ಆರ್ಥಿಕ ಅನುಮೋದನೆಯ ನಂತರ ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕಾದ ಸರ್ವೀಸ್ ರೋಡ್, ಅಂಡರ್ ಪಾಸ್ ನಂತಹ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸುವಂತೆ ತಿಳಿಸಿದರು. ಇದೇ ವೇಳೆ, ಹುಬ್ಬಳ್ಳಿ-ಬಿಜಾಪುರ ರಸ್ತೆಯ ಕಾಮಾಗಾರಿಯ ಬಗ್ಗೆ ಪ್ರಸ್ತಾಪಿಸಿ, 218 ನೇ ನ್ಯಾಷನಲ್ ಹೈವೇ ರಸ್ತೆಯ ಕಾಮಗಾರಿ ಸಮರ್ಪಕವಾಗಿ ಮುಗಿದಿಲ್ಲ. ಆದರೂ ಹೆಬಸೂರು ಬಳಿ ಟೋಲ್ ಸಂಗ್ರಹಕ್ಕೆ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಾಮಗಾರಿ ಮುಗಿಯದೆ ಟೋಲ್ ಸಂಗ್ರಹ ಸರಿಯಲ್ಲ. ಕಾಮಗಾರಿಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.