ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲೂ ಹಗಲಿರುಳು ಕೆಲಸ ಮಾಡುತ್ತಾ ಸರ್ಕಾರ ಮತ್ತು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡುತ್ತಿರುವ, ಎಚ್ಚರಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಜೀವ ವಿಮೆ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಬೆಂಗಳೂರಿನ ಕೋರಮಂಗಲ ನಿವಾಸಿ ಜಾಕೊಬ್ ಜಾರ್ಜ್ ಎಂಬುವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಹಾಗೂ ಪತ್ರಿಕಾ ವಿತರಕರಲ್ಲಿ ಯಾರಾದರೂ ಕೋವಿಡ್-19 ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದರೆ ಅಂಥವರಿಗೆ ಸರ್ಕಾರದಿಂದ 50 ಲಕ್ಷ ರೂಪಾಯಿ ಹಾಗೂ ಆಯಾ ಮಾಧ್ಯಮ ಸಂಸ್ಥೆಗಳಿಂದ ತಲಾ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಲು ನಿರ್ದೇಶಿಸಬೇಕು ಎಂದು ಕೋರಲಾಗಿದೆ.
ರಾಜ್ಯದ ವಿವಿಧ ದೃಶ್ಯ ಮಾಧ್ಯಮಗಳು, ಮುದ್ರಣ ಮಾಧ್ಯಮಗಳು ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿನ ಸಾವಿರಾರು ಉದ್ಯೋಗಿಗಳು ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಪೊಲೀಸರು, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಮಾದರಿಯಲ್ಲೇ ಕೊರೊನಾ ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಸೋಂಕಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಜತೆಯಲ್ಲೇ ಸಾರ್ವಜನಿಕರ ಕುಂದು ಕೊರತೆಗಳ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದಾರೆ.
ವೈಯಕ್ತಿಕ ಬದುಕನ್ನು ಒತ್ತೆಯಿಟ್ಟು ಸಾರ್ವಜನಿಕರಿಗಾಗಿ ಕೆಲಸ ಮಾಡುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಕೆಲಸ ಮಾಡುವ ಸಂಸ್ಥೆಗಳಲ್ಲಿ ಆಗತ್ಯ ಸುರಕ್ಷತಾ ಕಿಟ್‌ಗಳನ್ನು ನೀಡಿಲ್ಲ. ಹೀಗಾಗಿ ಅವರಿಗೆ ಸೂಕ್ತ ರಕ್ಷಣಾ ಸಾಧನಗಳನ್ನು ನೀಡಲು ಸಂಸ್ಥೆಗಳಿಗೆ ಸೂಚಿಸಬೇಕು. ಜತೆಗೆ ಕಡ್ಡಾಯ ಆರೋಗ್ಯ ತಪಾಸಣೆ ನಡೆಸುವುದರ ಜತೆಗೆ ಆರೋಗ್ಯ ವಿಮೆ ನೀಡಬೇಕು. ಒಂದು ವೇಳೆ ಮಾಧ್ಯಮ ಪ್ರತಿನಿಧಿ ಕೋವಿಡ್-19 ಸೋಂಕಿಗೆ ತುತ್ತಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ಮತ್ತು ಆಯಾ ಮಾಧ್ಯಮ ಸಂಸ್ಥೆ ತಲಾ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಘೋಷಿಸಲು ಮತ್ತು ಈ ಮೊತ್ತಕ್ಕೆ ವಿಮೆ ನೀಡಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳಿಗೆ ವಿಮೆ ನೀಡಲು ಕೋರಿ ಹೈಕೋರ್ಟ್‌ಗೆ ಪಿಐಎಲ್ - PIL to High Court
ಮಾಧ್ಯಮ ಪ್ರತಿನಿಧಿಗಳು ಹಾಗೂ ಪತ್ರಿಕಾ ವಿತರಕರಲ್ಲಿ ಯಾರಾದರೂ ಕೋವಿಡ್-19 ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದರೆ ಅಂಥವರಿಗೆ ಸರ್ಕಾರದಿಂದ 50 ಲಕ್ಷ ರೂಪಾಯಿ ಹಾಗೂ ಆಯಾ ಮಾಧ್ಯಮ ಸಂಸ್ಥೆಗಳಿಂದ ತಲಾ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.