ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದು ಮತ್ತು ದೂರು ನೀಡಿದ ಘಟನೆ ಕುರಿತು ಸಮಗ್ರ ಮಾಹಿತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗುಪ್ತಚರ ಇಲಾಖೆ ನೀಡಿದೆ.
ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಯಡಿಯೂರಪ್ಪ ಅವರನ್ನು ಭೇಟಿಯಾದರು. ಸಿಡಿ ಯುವತಿ ಕೇಸ್ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಇಂದು ಸಿಡಿ ಕೇಸ್ ವಿಚಾರದಲ್ಲಿ ಏನೆಲ್ಲ ಬೆಳವಣಿಗೆಯಾಗಿದೆ ಎನ್ನುವುದರ ಬಗೆಗೂ ಸಿಎಂಗೆ ಮಾಹಿತಿ ನೀಡಿ ತೆರಳಿದರು ಎನ್ನಲಾಗಿದೆ.
ಇದಕ್ಕೂ ಮುನ್ನ ಬೆಳಗ್ಗೆ ಯುವತಿಯ ಮೂರನೇ ಸಿಡಿ ಬಿಡುಗಡೆಯಾಗುತ್ತಿದ್ದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಿಎಂ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಸಿಎಂ ವಿಶ್ರಾಂತಿ ಪಡೆಯುತ್ತಿದ್ದ ಕಾರಣ ಭೇಟಿಗೆ ಅವಕಾಶ ಸಿಗದೆ ನಿರ್ಗಮಿಸಿ ಗೃಹ ಸಚಿವರನ್ನು ಭೇಟಿಯಾಗಿ ಸಿಡಿ ವಿಷಯದ ಕುರಿತು ಚರ್ಚೆ ನಡೆಸಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸಿಡಿ ಪ್ರಕರಣ.. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು