ಬೆಂಗಳೂರು : ಮಹಾನಗರದಲ್ಲಿ ಬಂಧಿತರಾದ ಶಂಕಿತ ಉಗ್ರರ ಕುರಿತು ಗುಪ್ತಚರ ಇಲಾಖೆಯು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಪೂರ್ಣ ಮಾಹಿತಿ ಸಲ್ಲಿಕೆ ಮಾಡಿದೆ. ಗುಪ್ತಚರ ಇಲಾಖೆ ಸಂಗ್ರಹಿಸಿದ ಮಾಹಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ನೀಡಿದ್ದಾರೆ.
-
ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ
— CM of Karnataka (@CMofKarnataka) July 19, 2023 " class="align-text-top noRightClick twitterSection" data="
ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ…
">ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ
— CM of Karnataka (@CMofKarnataka) July 19, 2023
ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ…ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ
— CM of Karnataka (@CMofKarnataka) July 19, 2023
ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ…
ವಿಧಾನಸಭೆ ಆವರಣದ ಸಿಎಂ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರರ ಸಂಚಿನ ಇಂಚಿಂಚು ಮಾಹಿತಿ ನೀಡಿದ ಗೃಹ ಸಚಿವ ಪರಮೇಶ್ವರ್ ಇದೇ ವಿಚಾರವಾಗಿ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ವಿಪಕ್ಷಗಳ ಸಭೆ ಹಿಟ್ ಲಿಸ್ಟ್ ನಲ್ಲಿ ಇತ್ತು ಎಂಬ ಆಘಾತಕಾರಿ ಮಾಹಿತಿಯನ್ನು ಗೃಹ ಸಚಿವರು ನೀಡಿದ್ದಾರೆ. ಸ್ವಲ್ಪ ಅಜಾಗರೂಕಾಗಿದ್ದರೂ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಇವೆಲ್ಲವನ್ನು ಪೊಲೀಸರು ತಡೆದಿದ್ದಾರೆ. ಸರಿಯಾದ ಮಾಹಿತಿ ಆಧರಿಸಿ ಉಗ್ರರನ್ನು ಸೆರೆ ಹಿಡಿದಿದ್ದಾರೆ ಎಂದು ಸಿಎಂಗೆ ಗೃಹ ಸಚಿವರು ವಿವರಿಸಿದ್ದಾರೆ.
ಇನ್ನೆರಡು ದಿನದಲ್ಲಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಬ್ಲಾಸ್ಟ್ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಉಗ್ರರು ಮಹಾನಗರದಲ್ಲಿ ದೊಡ್ಡಮಟ್ಟದ ಆತಂಕದ ಸ್ಥಿತಿ ಉಂಟುಮಾಡುವ ಯತ್ನದಲ್ಲಿ ಇದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ತಿಳಿದು ಬಂದಿದೆ. ಅಂತಿಮವಾಗಿ ಈ ಬಗ್ಗೆ ಖಚಿತ ಸುಳಿವಿನ ಹಿನ್ನೆಲೆಯಲ್ಲಿ ಕಡೆ ಗಳಿಗೆಯಲ್ಲಿ ಉಗ್ರರನ್ನು ಬಂಧಿಸಿ ಸಂಭಾವ್ಯ ಭಾರಿ ಅನಾಹುತವನ್ನು ತಪ್ಪಿಸಲಾಗಿದೆ. ಈ ವಿಚಾರವಾಗಿ ಬೆಂಗಳೂರು ಪೊಲೀಸರು ಅಭಿನಂದನೆಗೆ ಅರ್ಹರು ಎಂದು ಪರಮೇಶ್ವರ್ ಹೇಳಿದ್ದಾರೆ.
ತನಿಖೆ ವೇಳೆ ಒಂದಕ್ಕಿಂತ ಒಂದು ಆತಂಕಕಾರಿ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ. ಎಂದಿನಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅತ್ಯಂತ ಕಠಿಣ ಹಾಗೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ನಿನ್ನೆಯ ಪ್ರಮುಖ ಸಭೆ ಹಿನ್ನೆಲೆಯಲ್ಲಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಂಬ್ ಸಿಡಿಸುವ ಉಗ್ರರ ಸಂಚಿಗೆ ಅವಕಾಶ ಒದಗಿ ಬಂದಿಲ್ಲ. ಈ ಪ್ರಯತ್ನದಲ್ಲಿ ಹಿನ್ನಡೆ ಉಂಟಾಗುತ್ತಿದ್ದಂತೆ ಅವರು ಬೇರೆ ಕಡೆಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂಬ ಸತ್ಯ ವಿಚಾರಣೆ ವೇಳೆ ಬಯಲಾಗಿದೆ. ಇದು ಇನ್ನಷ್ಟು ಅಘಾತಕಾರಿ ವಿಚಾರವಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ
ಸಿಎಂ ಸಿದ್ದರಾಮಯ್ಯ ಜನತಾ ದರ್ಶನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಕಳೆದ ಎರಡು ವಾರಗಳಿಂದ ಅಧಿವೇಶನ ನಡೆಯುತ್ತಿದ್ದು, ಮೂರನೇ ವಾರವಾದ ಈ ವಾರ ಅಧಿವೇಶನ ಕೊನೆಗೊಳ್ಳಲಿದೆ. ಬಿಡುವಿಲ್ಲದ ಒತ್ತಡದ ಕೆಲಸದ ನಡುವೆಯೂ ಸಿಎಂ ಜನರ ಅಹವಾಲು ಸ್ವೀಕರಿಸುವ ಕಾರ್ಯಕ್ಕೆ ಯಾವುದೇ ತೊಂದರೆ ಆಗದಂತೆ ನಡೆದುಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಭಾರಿ ಸ್ಫೋಟಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ, ತನಿಖೆ ತೀವ್ರ