ETV Bharat / state

ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ - ಈಟಿವಿ ಭಾರತ್​ ಕನ್ನಡ

ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆಯ ತಿದ್ದುಪಡಿ ವಿಧೇಯಕ ವಿಧಾನ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. 2022ನೇ ಸಾಲಿನ ಮುನ್ಸಿಪಾಲಿಟಿ (ತಿದ್ದುಪಡಿ) ವಿಧೇಯಕದಲ್ಲಿ ಗೊಂದಲವಿದೆ ಎಂಬ ಕಾರಣಕ್ಕೆ ಮುಂದಿನ ವಾರದ ಚರ್ಚೆಗೆ ಹಾಕಲಾಯಿತು.

acceptance-of-the-bill-in-assembly
ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ
author img

By

Published : Sep 16, 2022, 7:33 PM IST

ಬೆಂಗಳೂರು : ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಇಂದು ಅಂಗೀಕಾರ ದೊರೆಯಿತು. ಮುಖ್ಯಮಂತ್ರಿಗಳ ಪರವಾಗಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿ, ಅದಕ್ಕೆ ಒಪ್ಪಿಗೆ ನೀಡುವಂತೆ ಕೋರಿದರು.

ಹಣಕಾಸು ಸಂಸ್ಥೆಗಳಲ್ಲಿ ಠೇವಣಿ ಇಡುವ ಠೇವಣಿದಾರರಿಗೆ ವಂಚಿಸುವ ಅಪರಾಧವನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲು ಹಾಗೂ ಇಂತಹ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ಈ ತಿದ್ದುಪಡಿ ಕಾಯಿದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿಧೇಯಕ ಜಾರಿಯಿಂದ ಹಣಕಾಸು ಸಂಸ್ಥೆಗಳಲ್ಲಿ ಠೇವಣಿ ಇಟ್ಟು ನಷ್ಟ ಅನುಭವಿಸುವ ಠೇವಣಿದಾರರಿಗೆ ರಕ್ಷಣೆ ಒದಗಿಸಲು ಸಾಧ್ಯವಾಗುತ್ತದೆ.

ಜೊತೆಗೆ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುವವರಿಗೂ ಶಿಕ್ಷೆ ನೀಡಲು ಅನುಕೂಲವಾಗುತ್ತದೆ. ಹಾಗಾಗಿ ಈ ಕಾಯಿದೆಗೆ ಒಪ್ಪಿಗೆ ನೀಡಬೇಕು ಎಂದು ಅವರು ಹೇಳಿದರು. ಈ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ಈ ಕಾಯ್ದೆಯಲ್ಲಿ ಅವಕಾಶವಿದೆ. ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಒಪ್ಪಿಗೆ ಪಡೆದು ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಹೇಳಿದರು.

ಠೇವಣಿದಾರರಿಗೆ ವಂಚನೆ ಎಸಗುವ ಆರೋಪಿತ ಸಂಸ್ಥೆಯ ವಿರುದ್ಧ ರಾಜ್ಯಾದ್ಯಂತ ಇರುವ ಪ್ರಕರಣಗಳನ್ನು ಒಂದೇ ಪ್ರಕರಣ ಎಂದು ದಾಖಲಿಸಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು ಎಂದರು. ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕವನ್ನು ಮತಕ್ಕೆ ಹಾಕಿದ್ದು, ಸದನ ಧ್ವನಿಮತದ ಮೂಲಕ ಒಪ್ಪಿಗೆ ಒಪ್ಪಿಗೆ ಪಡೆಯಿತು.

ಮುನ್ಸಿಪಾಲಿಟಿ (ತಿದ್ದುಪಡಿ) ವಿಧೇಯಕ ತಡೆ : 2022ನೇ ಸಾಲಿನ ಮುನ್ಸಿಪಾಲಿಟಿ ವಿಧೇಯಕವನ್ನು ವಿಧಾನಸಭೆಯಲ್ಲಿ ಇಂದು ತಡೆ ಹಿಡಿಯಲಾಗಿದೆ. ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರ ಪರವಾಗಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಂಡಿಸಿದ ವಿಧೇಯಕವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಚರ್ಚೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದರು.

ಈ ವೇಳೆ ಮಾತನಾಡಿದ ಸಚಿವ ಮಾಧುಸ್ವಾಮಿ ಅವರು, ಇ-ಸ್ವತ್ತಿಗೆ ಅಡ್ಡಿ ಬರದಂತೆ ಕ್ರಮ ಕೈಗೊಳ್ಳಲಾಗುವುದು. ಒಂದು ಎಕರೆಗಿಂತ ಹೆಚ್ಚು ಹೊಸ ಬಡಾವಣೆ ಮಾಡಿದರೆ ಟೌನ್ ಪ್ಲಾನಿಂಗ್ ಒಪ್ಪಿಗೆ ಪಡೆಯಬೇಕು. ಹಳೆಯ ಬಡಾವಣೆಯಾದರೆ ಟೌನ್ ಪ್ಲಾನಿಂಗ್‌ನಿಂದ ಹೊರಗಿಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಚಿವ ನಾಗರಾಜ್ ಅವರು, ಅಕ್ರಮ-ಸಕ್ರಮ ವಿಚಾರಕ್ಕೆ ಸುಪ್ರೀಂಕೋರ್ಟ್​ನಲ್ಲಿ ತಡೆಯಾಜ್ಞೆ ಇದೆ. ಯೋಜನಾ ಪ್ರಾಧಿಕಾರದ ಅನುಮತಿಯಿಲ್ಲದೆ ನಿರ್ವಹಿಸಿರುವ ಕಟ್ಟಡಗಳಿಗೆ ದಂಡ ವಿಧಿಸಿ ನಮೂನೆ - 3ನ್ನು ನೀಡಲಾಗುವುದು ಎಂದು ಹೇಳಿದರು.

ಮುಂದಿನ ವಾರದ ಚರ್ಚೆಗೆ : ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೇರಿ, ಈ ವಿಧೇಯಕದ ಬಗ್ಗೆ ಗೊಂದಲವಿದೆ. ಬೇರೆ ಬೇರೆ ಇಲಾಖೆಗಳನ್ನು ಅಭಿಪ್ರಾಯ ಸಂಗ್ರಹಿಸಿ ಇ-ಸ್ವತ್ತಿನ ವಿಧೇಯಕ ಬಗೆಹರಿಸಬೇಕು. ಹಾಗಾಗಿ ಮುಂದಿನ ವಾರ ಚರ್ಚೆಗೆ ತೆಗೆದುಕೊಳ್ಳುವುದಾಗಿ ಹೇಳಿ ವಿಧೇಯಕವನ್ನು ತಡೆಹಿಡಿದರು.

ಇದನ್ನೂ ಓದಿ : ಬಿಇಎಂಎಲ್‍ನ 971 ಎಕರೆ ಜಮೀನು ಅಭಿವೃದ್ಧಿಪಡಿಸಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ: ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.