ETV Bharat / state

ಮೈಸೂರು ವಿವಿ ಕುಲಪತಿಯಾಗಿ ಪ್ರೊ.ಕೆ.ಎನ್.ಲೋಕನಾಥ್ ನೇಮಕಕ್ಕೆ ಮಧ್ಯಂತರ ತಡೆ - Interim stay by High Court

ಮೈಸೂರು ವಿವಿ ಕುಲಪತಿಯಾಗಿ ಪ್ರೊ.ಎನ್.ಕೆ. ಲೋಕನಾಥ್ ನೇಮಕ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

High Court
ಮೈಸೂರು ವಿವಿ ಕುಲಪತಿಯಾಗಿ ಪ್ರೊ.ಕೆ.ಎನ್.ಲೋಕನಾಥ್ ನೇಮಕಕ್ಕೆ ಮಧ್ಯಂತರ ತಡೆ
author img

By

Published : Jun 21, 2023, 9:25 PM IST

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತು. ಪ್ರೊ.ಶರತ್ ಅನಂತಮೂರ್ತಿ ಎಂಬವರು ಸಲ್ಲಿಸಿದ್ದ ಅರ್ಜಿ ಆಲಿಸಿದ ನ್ಯಾ.ಇ.ಎಸ್. ಇಂದಿರೇಶ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರತಿವಾದಿಗಳಾದ ಕುಲಾಪತಿ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಮೈಸೂರು ವಿ.ವಿ. ಶೋಧನಾ ಸಮಿತಿ ಮತ್ತು ಲೋಕನಾಥ್ ಅವರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಮೊದಲಿಗೆ ವಿಶ್ವವಿದ್ಯಾಲಯದ ಕಾಯಿದೆ ಅನ್ವಯ ನಿರ್ದಿಷ್ಟ ಅರ್ಹತೆ ಇಲ್ಲದಿದ್ದರೂ ನಿಯಮಾವಳಿ ಉಲ್ಲಂಘಿಸಿ ಕುಲಪತಿಯನ್ನು ನೇಮಕ ಮಾಡಲಾಗಿದೆ. ಲೋಕನಾಥ್ ಅವರ ಹೆಸರು ಉನ್ನತ ಶಿಕ್ಷಣ ಇಲಾಖೆ ಮಾಡಿದ್ದ ಪಟ್ಟಿಯಲ್ಲೇ ಇರಲಿಲ್ಲ ಎಂದರು.

ಇದನ್ನೂ ಓದಿ: Rape on minor girl: ಸ್ಕೂಟಿ ಕಲಿಸುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಕಾಮುಕನ ಬಂಧನ

ಅಲ್ಲದೆ, ಕುಲಪತಿಯಾಗಿ ನೇಮಕ ಮಾಡಿರುವ ಲೋಕನಾಥ್ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ಬಾಕಿ ಇದೆ. ಆದರೆ ಅವರು ಆ ವಿಷಯವನ್ನು ಮುಚ್ಚಿಟ್ಟಿದ್ದಾರೆ. ಸುಪ್ರೀಂ ಕೋರ್ಟ್ ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ನೀಡಿರುವ ತೀರ್ಪಿಗೆ ವಿರುದ್ಧವಾಗಿ ನಿಯಮಗಳನ್ನು ಗಾಳಿಗೆ ತೂರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Haveri Theft Case: ಮೊದಲು ಲಾರಿ ಕದ್ರು.. ಬಳಿಕ 87 ಲಕ್ಷ ರೂ. ಮೌಲ್ಯದ ಗುಟ್ಕಾ ಕದ್ದೊಯ್ದಿದ್ದ ನಾಲ್ವರು ಆರೋಪಿಗಳು ಅಂದರ್

ದಾಖಲೆಗಳ ಪ್ರಕಾರ, ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಲು 20 ದಿನ ಸಮಯ ನೀಡಿ ನ.8ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ 2022ರ ನ.28 ಕೊನೆಯ ದಿನವಾಗಿತ್ತು. ಅದೇ ದಿನ ಅವರು ಹೈಕೋರ್ಟ್‌ನಲ್ಲಿ ತಮ್ಮ ಪ್ರಕರಣದ ವಿರುದ್ಧ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. 2007ರಲ್ಲಿ ನಡೆದ ಪ್ರೊಪೆಸರ್ ನೇಮಕದಲ್ಲಿ ಅಕ್ರಮ ನಡೆದಿದೆ ಎನ್ನುವ ಕುರಿತಂತೆ ತನಿಖೆಗೆ ನೇಮಕ ಮಾಡಲಾಗಿದ್ದ ನ್ಯಾ.ರಂಗವಿಠಲಾಚಾರ್ ಆಯೋಗ ಪ್ರೊಫೆಸರ್ ನೇಮಕಕ್ಕೆ ಯುಜಿಸಿ ನಿಯಮದಂತೆ 10 ವರ್ಷಗಳ ಬೋಧನಾ ಅನುಭವವಿಲ್ಲ. ಹಾಗಾಗಿ ಅವರು ಯುಜಿಸಿ ನಿಯಮದ ಪ್ರಕಾರ ಪ್ರೊಫೆಸರ್ ಹುದ್ದೆಗೆ ಅರ್ಹರಲ್ಲ ವೆಂದು ಹೇಳಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮದುವೆ ನಿರಾಕರಿಸಿದ ಸಾಫ್ಟ್‌ವೇರ್ ಇಂಜಿನಿಯರ್​ ಕೊಲೆ ಯತ್ನ; ಕಿಡಿಗೇಡಿ ಯುವಕ ಸೆರೆ

ಮೈಸೂರಿನ ಜಯಲಕ್ಷ್ಮೀಪುರಂ ವಾಸಿ ಡಿ.ವಿ. ಶಶಿಧರ್ ಮತ್ತಿತರರು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಲೋಕನಾಥ್ ಮತ್ತಿತರರ ವಿರುದ್ಧ ಆಸ್ತಿ ಒತ್ತುವರಿ ಸಂಬಂಧ 2020ರ ನ.4ರಂದು ವಂಚನೆ ಪ್ರಕರಣ ದಾಖಲಿಸಿದ್ದರು. ಆ ಕುರಿತ ಪ್ರಕರಣ ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೋಚಿಂಗ್ ಕ್ಲಾಸ್‌ಗೆ ತೆರಳುತ್ತಿದ್ದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ; ರಾಜಸ್ಥಾನದಲ್ಲಿ ಸಂಚಲನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.