ETV Bharat / state

ವಿಶೇಷಚೇತನ ಮಕ್ಕಳ ಶಾಲೆ ಬಳಿ ಕಟ್ಟಡ ನಿರ್ಮಾಣಕ್ಕೆ ಮಧ್ಯಂತರ ತಡೆ - ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ

ವಿಕಲಚೇತನ, ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ ಆವರಣದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಹೈಕೋರ್ಟ್ ಆದೇಶಿಸಿದೆ.

High Court
ಹೈಕೋರ್ಟ್
author img

By

Published : Feb 28, 2023, 10:01 PM IST

ಬೆಂಗಳೂರು: ಮೈಸೂರಿನ ತಿಲಕ ನಗರದಲ್ಲಿರುವ ವಿಕಲಚೇತನ ಹಾಗೂ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ ಆವರಣದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಈ ಶಾಲಾ ಆವರಣದಲ್ಲಿ 10 ಲಕ್ಷ ಲೀಟರ್ ಸಾಮರ್ಥ್ಯದ ಮೇಲ್ಮಟ್ಟದ ಜಲಸಂಗ್ರಹಗಾರ (ವಾಟರ್ ಟ್ಯಾಂಕ್) ನಿರ್ಮಾಣದ ಪ್ರಸ್ತಾವ ಇತ್ತು. ಇದನ್ನು ಪ್ರಶ್ನಿಸಿ ಮೈಸೂರಿನ ನಿವಾಸಿ ಎನ್.ವೀರ ಕ್ಯಾತಯ್ಯ ಎಂಬುವರು ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ: ಡ್ರೀಮ್ಸ್ ಜಿ ಕೆ ಸಂಸ್ಥೆ ವಂಚನೆ: ಹೂಡಿಕೆದಾರರಿಗೆ ಪರಿಹಾರ ಕಲ್ಪಿಸಲು ಕ್ರಮವೆಂದ ಸರ್ಕಾರ

ವಿದ್ಯಾರ್ಥಿಗಳಿಗೆ ಸಮಸ್ಯೆ ಸಾಧ್ಯತೆ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶಾಲಾ ಆವರಣದಲ್ಲಿನ 50*60 ಅಡಿ ವಿಸ್ತೀರ್ಣದ ಜಾಗದಲ್ಲಿ 10 ಲಕ್ಷ ಲೀಟರ್ ಸಾಮರ್ಥ್ಯದ ಮೇಲ್ಮಟ್ಟದ ಜಲಸಂಗ್ರಹಗಾರ ನಿರ್ಮಿಸಲು ಸರ್ಕಾರ 2022ರ ಅ.11ರಂದು ಅನುಮತಿ ನೀಡಿತ್ತು. ಅದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಅನುಮತಿ ಹಿಂಪಡೆಯಲಾಗಿತ್ತು. ಆದರೆ, 2023ರ ಫೆ.3ರಂದು ಮೈಸೂರು ಮಹಾನಗರ ಪಾಲಿಕೆಯ ಕಾರ್ಯಕಾರಿ ಎಂಜಿನಿಯರ್ ಶಾಲಾ ಆವರಣಕ್ಕೆ ಭೇಟಿ ನೀಡಿ, ತಡೆಗೋಡೆ ನೆಲಸಮಗೊಳಿಸಿದ್ದಾರೆ. ಅಲ್ಲಿನ ಮರಗಳನ್ನು ಕತ್ತರಿಸಿದ್ದಾರೆ. ಒಂದೊಮ್ಮೆ ಜಲಸಂಗ್ರಹಗಾರ ಸೇರಿದಂತೆ ಶಾಲಾ ಅವರಣದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ನಡೆಸಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುವ ಸಾಧ್ಯತೆಯಿರಲಿದೆ ಎಂದು ವಕೀಲರು ಹೇಳಿದರು.

ಇದನ್ನೂ ಓದಿ: ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕ್ರಮ: ನಿರ್ಣಯ ಹಿಂಪಡೆದ ಮಂಡ್ಯ ವಕೀಲರ ಸಂಘ

ಸರ್ಕಾರದ ಪರ ವಕೀಲರಿಂದ ಆಕ್ಷೇಪ: ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಸರ್ಕಾರದ ಪರ ವಕೀಲರು, ಶಾಲಾ ಆವರಣದ ಖಾಲಿ ಜಾಗದ ಭಾಗವೊಂದನ್ನು ಜಲ ಸಂಗ್ರಹಗಾರ ನಿರ್ಮಾಣಕ್ಕೆ ನೀಡಲು ನಿರ್ಣಯಿಸಲಾಗಿತ್ತು. ಪ್ರಕರಣ ಕುರಿತು ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದನ್ನೂ ಓದಿ: ಎರಡು ಪ್ರಕರಣಗಳಲ್ಲಿ ಶಿಕ್ಷೆಯಾದಲ್ಲಿ ಒಂದೇ ಅವಧಿಯಲ್ಲಿ ಅನುಭವಿಸಬೇಕು: ಹೈಕೋರ್ಟ್

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾಗಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೈಸೂರು ಮಹಾನಗರ ಪಾಲಿಕೆಗೆ ನೋಟಿಸ್ ಜಾರಿಗೊಳಿಸಿತು. ಜೊತೆಗೆ ಮುಂದಿನ ವಿಚಾರಣೆವರೆಗೆ ಶಾಲಾ ಅವರಣದಲ್ಲಿ ಯಾವುದೇ ಕಟ್ಟಡ ನಿರ್ಮಾಣ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಪೋಷಕರಿಗೆ ಮಕ್ಕಳನ್ನು ಭೇಟಿ ಮಾಡುವ ಹಕ್ಕು ಕಲ್ಪಿಸುವ ಅಧಿಕಾರ ಮಕ್ಕಳ ಆಯೋಗಕ್ಕಿಲ್ಲ: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.