ETV Bharat / state

ಫೆ. 29 ರಿಂದ ಮಾ. 7ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸೌಹಾರ್ದತೆ, ಸಹಬಾಳ್ವೆಗೆ ಒತ್ತು: ಸಿಎಂ - ಚಲನಚಿತ್ರೋತ್ಸವ

ಫೆ.29 ರಿಂದ ಮಾ.7ರ ವರೆಗೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮ ನಡೆಯಲಿದೆ.

ಸಂಘಟನಾ ಸಮಿತಿ ಸಭೆ
ಸಂಘಟನಾ ಸಮಿತಿ ಸಭೆ
author img

By ETV Bharat Karnataka Team

Published : Jan 3, 2024, 3:39 PM IST

ಬೆಂಗಳೂರು: 15ನೇ ಆವೃತ್ತಿಯ ಬೆಂಗಳೂರು ಚಲನಚಿತ್ರೋತ್ಸವವನ್ನು ಫೆಬ್ರುವರಿ 29 ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಸಂಘಟನಾ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಗಿದೆ. ಅದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆ ಸರ್ಕಾರ ಮಾಡಿಕೊಡುತ್ತೆ. ದೇಶ, ವಿದೇಶದ ಪ್ರಖ್ಯಾತಿ ಪಡೆದವರನ್ನ ಕರೆಸಲು ತೀರ್ಮಾನ ಆಗಿದೆ. ಯಶಸ್ವಿಯಾಗಿ ಇದನ್ನ ನಡೆಸುತ್ತೇವೆ. ಉದ್ಘಾಟನಾ ಸಮಾರಂಭವನ್ನು ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗುವುದು ಎಂದರು.

ಪ್ರತಿ ವರ್ಷ ಫೆಬ್ರುವರಿ, ಮಾರ್ಚ್ ಮಾಹೆಯಲ್ಲಿ ಚಿತ್ರೋತ್ಸವವನ್ನು ಏರ್ಪಡಿಸುತ್ತಿದ್ದು, ಈ ಬಾರಿಯೂ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು ಏರ್ಪಡಿಸಲು ಕೆಳಕಂಡಂತೆ ತಾತ್ಕಾಲಿಕ ದಿನಾಂಕಗಳ ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ. ಫೆಬ್ರವರಿ 29 ರಂದು ಗುರುವಾರ ಸಂಜೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಾರ್ಚ್ 1 ರಿಂದ 7ರ ವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನವಾಗಲಿದೆ ಎಂದು ಮಾಹಿತಿ ನೀಡಿದರು.

ಮಾರ್ಚ್ 7 ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ರಾಜ್ಯಪಾಲರು ಪ್ರಶಸ್ತಿ ವಿತರಿಸಲಿದ್ದಾರೆ. ಕಾರ್ಯಕ್ರಮವನ್ನು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಏರ್ಪಡಿಸಲಾಗುವುದು. ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಗಿದೆ.

ಲೀಲಾವತಿ, ಭಗವಾನ್‌ ಮತ್ತು ಸಿ.ವಿ. ಶಿವಶಂಕರ್‌ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರವು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಏರ್ಪಡಿಸುವ ಸಲುವಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿಯನ್ನು ಹಾಗೂ ಸರ್ಕಾರದ ಕಾರ್ಯದರ್ಶಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನ್ನು ಕಳೆದ ತಿಂಗಳ 30 ರಂದು ರಚಿಸಿ ಆದೇಶ ಹೊರಡಿಸಿತ್ತು.

ಅದರನ್ವಯ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್‌ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸಂಘಟಕರು/ತಾಂತ್ರಿಕ ಸಲಹೆಗಾರರು/ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಅಧ್ಯಕ್ಷರು ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಒರಿಯಾನ್ ಮಾಲ್​ನಲ್ಲಿರುವ ಪಿವಿಆರ್​ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು ಎಂದರು.

ಇದನ್ನೂ ಓದಿ: ನಾನು ಕ್ಲಿನಿಕಲಿ ಡೆಡ್ ಆಗಿದ್ದೆ: ಹೃದಯಾಘಾತಕ್ಕೊಳಗಾಗಿದ್ದ ನಟ ಶ್ರೇಯಸ್ ತಲ್ಪಾಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.