ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆ ಕೇಂದ್ರ ಕಚೇರಿ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ "ವಿಶ್ವ ಮಹಿಳಾ ದಿನಾಚರಣೆ" ಸಮಾರಂಭವನ್ನು ಗೌರವ್ ಗುಪ್ತಾ, ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಉದ್ಘಾಟಿಸಿದರು.
ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕಿಯರು ಮತ್ತು ಪಾಲಿಕೆಯ ಅಧಿಕಾರಿ ಮತ್ತು ನೌಕರರಿಗೆ "ದಿಟ್ಟ ಮಹಿಳಾ ಪ್ರಶಸ್ತಿ" ಪ್ರದಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದ ನಂತರ ರಕ್ತದಾನ ಶಿಬಿರ ಮತ್ತು ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ, ಪೂರ್ವ ವಿಭಾಗದ ಜಂಟಿ ಆಯುಕ್ತೆ ಪಲ್ಲವಿ, ಹಿನ್ನೆಲೆ ಗಾಯಕಿ ಮಂಜುಳಾ ಗುರುರಾಜ್, ಸಂಘದ ಅಧ್ಯಕ್ಷ ಅಮೃತ್ ರಾಜ್ ಉಪಸ್ಥಿತರಿದ್ದರು.