ಬೆಂಗಳೂರು: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ನಡುವೆ ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ವ್ಯಕ್ತಿ ಬಂಧಿಸುವಲ್ಲಿ ಪೂರ್ವ ವಿಭಾಗದ ರಾಮಮೂರ್ತಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಎಸ್. ರಾಮಬಾಬು ಬಂಧಿತ ಆರೋಪಿ. ಈ ಆರೋಪಿ.ಕೆ.ಆರ್ ಪುರಂ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ, ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ರವಿ ಪ್ರಸಾದ್ ಹಾಗೂ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ದಾಳಿ ಮಾಡಿ ಆರೋಪಿ ಬಂಧಿಸಿ ಗಾಂಜಾ ಜಪ್ತಿ ಮಾಡಿದ್ದಾರೆ.
ಇನ್ನು ಆರೋಪಿ ವಿಚಾರಣೆ ವೇಳೆ, ಕೆಲ ವಿಚಾರ ಬಾಯಿಬಿಟ್ಡಿದ್ದಾನೆ. ಆರೋಪಿ ಮೂಲತಃ ಆಂಧ್ರಪ್ರದೇಶ ರಾಜ್ಯದವಾನಾಗಿದ್ದು, ಈತ ಕಡಿಮೆ ಬೆಲೆಗೆ ಗಾಂಜಾ ಖರೀದಿ ಮಾಡಿ ಬೆಂಗಳೂರಿಗೆ ಆಗಾಗ ಬಂದು ರಾಮಮೂರ್ತಿನಗರ ಪೊಲೀಸ್ ಠಾಣೆ ಬಳಿ ಇರುವ ರೈಲ್ವೆ ನಿಲ್ದಾಣದ ಬಳಿ ಗಿರಾಕಿಗಳಿಗೆ ಹೆಚ್ಚು ಹಣಕ್ಕೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ಬಂಧಿಸಿದ ಪೊಲೀಸರು ಈತನ ಹಿಂದೆ ಬೇರೆ ಯಾರಿದ್ದಾರೆ ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ.