ETV Bharat / state

ತಾಲೂಕು, ಜಿಲ್ಲಾ ಮಟ್ಟದಲ್ಲೂ ದೆಹಲಿ ಮಾದರಿ ಅಭಿವೃದ್ಧಿಗೆ ಮುನ್ನುಡಿ: ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ - ಆಮ್​ ಆದ್ಮಿ ಸುದ್ಧಿಗೋಷ್ಠಿ

ಲೋಕಾಯುಕ್ತವನ್ನು ಹಾಳುಗೆಡವಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಯುತ್ತಿರುವ ಎಲ್ಲಾ ಭ್ರಷ್ಟಾಚಾರಗಳಿಗೆ ಮುನ್ನುಡಿ ಬರೆದರು. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಲೋಕಾಯುಕ್ತ ಮರಳಿ ತರುವುದಾಗಿ ಹೇಳಿದ್ದ ಯಡಿಯೂರಪ್ಪ ಈಗ ಲೋಕಾಯುಕ್ತವನ್ನೇ ಬಳಸಿಕೊಂಡು ತಮ್ಮ ಮೇಲಿದ್ದ ಭೂ ಹಗರಣವನ್ನೇ ಖುಲಾಸೆಗೊಳಿಸುತ್ತಿದ್ದಾರೆ ಎಂದು ಉತ್ತರಪ್ರದೇಶದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಆರೋಪಿಸಿದರು.

ಸಂಜಯ್ ಸಿಂಗ್
ಸಂಜಯ್ ಸಿಂಗ್
author img

By

Published : Jan 23, 2021, 7:24 AM IST

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಮ್ಮ ಪಕ್ಷವು ಸಂಘಟಿತವಾಗಿ ಕೆಲಸ ಮಾಡುತ್ತಿದ್ದು, ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ. ಸಾಕಷ್ಟು ಯುವ ಜನತೆ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಯಲ್ಲೂ ಗೆಲುವು ಸಾಧಿಸಲಿದ್ದೇವೆ ಎಂದು ಆಪ್ ಉತ್ತರಪ್ರದೇಶದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ತಿಳಿಸಿದರು.

ಆಪ್ ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮತನಾಡಿದ ಅವರು, ಕೇಜ್ರಿವಾಲ್ ಅವರ ದೆಹಲಿ ಮಾದರಿಗೆ ರಾಷ್ಟ್ರದ ಜನ ಮನಸೋತಿದ್ದಾರೆ. ಬಿಜೆಪಿ ಕಾಂಗ್ರೆಸ್ ಹೊರತಾಗಿ ಪರ್ಯಾಯ ರಾಜಕೀಯ ಪಕ್ಷವನ್ನು ಎದುರು ನೋಡುತ್ತಿದ್ದು ಇದಕ್ಕೆ ಉದಾಹರಣೆಯಾಗಿ ಇತ್ತೀಚೆಗೆ ದೇಶಾದ್ಯಂತ ಅನೇಕ ರಾಜ್ಯಗಳಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿರುವುದು ಬದಲಾವಣೆಗೆ ಮುನ್ನುಡಿ ಎಂದರು.

ಕರ್ನಾಟಕದಲ್ಲಿದ್ದ ಲೋಕಾಯುಕ್ತ ಸಂಸ್ಥೆ, ನ್ಯಾ. ಸಂತೋಷ್ ಹೆಗಡೆಯವರ ದಕ್ಷತೆ ಕಂಡು ಕರ್ನಾಟಕದ ಬಗ್ಗೆ ಹೆಮ್ಮೆ ಪಟ್ಟಿದ್ದೆ. ಆದರೆ ಲೋಕಾಯುಕ್ತವನ್ನು ಹಾಳುಗೆಡವಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆಯುತ್ತಿರುವ ಎಲ್ಲಾ ಭ್ರಷ್ಟಾಚಾರಗಳಿಗೆ ಮುನ್ನುಡಿ ಬರೆದರು. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಲೋಕಾಯುಕ್ತ ಮರಳಿ ತರುವುದಾಗಿ ಹೇಳಿದ್ದ ಯಡಿಯೂರಪ್ಪ ಈಗ ಲೋಕಾಯುಕ್ತವನ್ನೇ ಬಳಸಿಕೊಂಡು ತಮ್ಮ ಮೇಲಿದ್ದ ಭೂ ಹಗರಣವನ್ನೇ ಖುಲಾಸೆಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್

ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ ಪ್ರತಿ ವಿಧಾನಸಭಾ ಕ್ಷೇತ್ರ, ವಾರ್ಡ್ ಹಾಗೂ ಬೂತ್ ಮಟ್ಟದಲ್ಲೂ ಕಚೇರಿಗಳನ್ನು ತೆರೆದು ವೀಕ್ಷಕರನ್ನು ನೇಮಿಸಿಲಾಗಿದೆ. ವಿಧಾನಪರಿಷತ್ತಿನಲ್ಲಿ 79 ಎ,ಬಿ ಸೇರಿದಂತೆ ರೈತ ವಿರೋಧಿ ಕಾಯ್ದೆಗಳಿಗೆ ಬೆಂಬಲ ನೀಡಿದ ಜೆಡಿಎಸ್ ಪಕ್ಷದವರು ರೈತರ ಹೆಸರು, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳಲು ನಾಚಿಕೆ ಪಡಬೇಕು ಎಂದು ವಾಗ್ದಾಳಿ ನಡೆಸಿದರು.

ಕಳೆದ ವರ್ಷ ಡಿಸೆಂಬರ್‌ 22 ಮತ್ತು 27 ರಂದು ನಡೆದ ವಿಚಾರಣೆ ವೇಳೆ ಹೈಕೋರ್ಟ್ ದೇವರ ಬೀಸನಹಳ್ಳಿ ಮತ್ತು ಬೆಳ್ಳಂದೂರು ಡಿನೋಟಿಫಿಕೇಶನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ವಿಚಾರಣೆ ಎದುರಿಸಬೇಕೆಂದು ಆದೇಶ ನೀಡಿದ್ದರೂ ಸಹ ಲೋಕಾಯುಕ್ತ ಸಂಸ್ಥೆಯನ್ನೇ ತಮ್ಮ ಅಧಿಕಾರ ದುರ್ಬಳಕೆಗೆ ಮಾಡಿ ಬಿ ರಿಪೋರ್ಟ್ ಹಾಕಿಸಿಕೊಂಡಿರುವುದು ನಿಜಕ್ಕೂ ಆಘಾತಕಾರಿ ಬೆಳವಣಿಗೆ ಎಂದು ಸಂಜಯ್​ ಸಿಂಗ್​ ಆತಂಕ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ತಲೆಗೆ ಸುತ್ತಿಕೊಂಡಿರುವ ಮಠದಹಳ್ಳಿ ಡಿನೋಟಿಫಿಕೇಶನ್ ಪ್ರಕರಣ, ಜಂತಕಲ್ ಮೈನಿಂಗ್ ಹಗರಣ, ಸಿದ್ದರಾಮಯ್ಯ ತಮ್ಮ ಮೇಲಿರುವ ರೀಡೂ ಹಗರಣ, ಡಿ.ಕೆ. ಶಿವಕುಮಾರ್ ಮೇಲಿರುವ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ಮುಕ್ತಾಯಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಬಳಸಿಕೊಳ್ಳುತ್ತಿದ್ದಾರೆ. ಇದೆಲ್ಲದರ ಪರಿಣಾಮ ಕರ್ನಾಟಕದಲ್ಲಿ ನಾಮಕಾವಸ್ಥೆಗೆ ಮಾತ್ರ ಬಿಜೆಪಿ ಅಧಿಕಾರ ನಡೆಸುತ್ತಿದ್ದು, ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಹಗರಣ, ಹಣ ಕಬಳಿಕೆ, ಜನದ್ರೋಹದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಾಲುದಾರಿಕೆ ಹೊಂದಿವೆ. ಇಂದು ಕರ್ನಾಟಕದಲ್ಲಿ ಮೂರು ಪಕ್ಷಗಳು ಸೇರಿ ಹೊಂದಾಣಿಕೆಯಿಂದ ನಡೆಸುತ್ತಿರುವ ಭ್ರಷ್ಟಾಚಾರಿಗಳ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಆರೋಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.