ETV Bharat / state

ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ ಸೇರಿ ಆರು ಮಂದಿ ನೂತನ ಸಚಿವರ ಪರಿಚಯ ಇಲ್ಲಿದೆ..! - etv bharat kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಇಂದು 24 ಮಂದಿ ಹೊಸ ಸಚಿವರು ಸೇರ್ಪಡೆಯಾಗಿದ್ದು, ಇವರಲ್ಲಿ ಆರು ಮಂದಿ ಸಚಿವರ ಪರಿಚಯ ಇಲ್ಲಿದೆ

introduction-of-six-new-ministers-of-karnataka
Etv Bharatಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ ಸೇರಿ ಆರು ಮಂದಿ ನೂತನ ಸಚಿವರ ಪರಿಚಯ ಇಲ್ಲಿದೆ..
author img

By

Published : May 27, 2023, 3:36 PM IST

ಬೆಂಗಳೂರು: ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷದ ಸಚಿವ ಸಂಪುಟ ರಚನೆ ಕಸರತ್ತು ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ 24 ಮಂದಿ ಹೊಸ ಸಚಿವರು ಸೇರ್ಪಡೆಯಾಗಿದ್ದಾರೆ. ಇದರಿಂದ ಸರ್ಕಾರದ ಎಲ್ಲ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಿದಂತಾಗಿದೆ. ನೂತನ ಸಚಿವರ ಪರಿಚಯ ಇಲ್ಲಿದೆ.

ಎಚ್.ಕೆ.ಪಾಟೀಲ್: ಹಿರಿಯ ರಾಜಕಾರಣಿ ಹಾಗೂ ಈ ಹಿಂದೆ ಹಲವು ಬಾರಿ ಸಚಿವರಾಗಿದ್ದ ಗದಗ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಮತ್ತೊಮ್ಮೆ ಎಚ್.ಕೆ.ಪಾಟೀಲ್ ಅವರು ಸಚಿವರಾಗಿದ್ದಾರೆ. ಕಳೆದ 50 ವರ್ಷಗಳಿಂದ ಗದಗ ಕ್ಷೇತ್ರದ ಮೇಲೆ ಹುಲಕೋಟಿಯ ಪಾಟೀಲ್ ಮನೆತನದ ಹಿಡಿತವಿದೆ. ಮಾಜಿ ಸಹಕಾರ ಸಚಿವ ಕೆ.ಎಚ್. ಪಾಟೀಲ್ ಕುಟುಂಬವೇ ಈ ಕ್ಷೇತ್ರದಲ್ಲಿ ರಾಜಕೀಯ ಹಿಡಿತ ಇಟ್ಟುಕೊಂಡಿದ್ದು, ಆಗಿನಿಂದಲೂ ಆ ಕುಟುಂಬ ಸದಸ್ಯರೇ ಆರಿಸಿಬಂದಿದ್ದಾರೆ.

ತಂದೆ ಕೆ.ಎಚ್.ಪಾಟೀಲ್, ತಾಯಿ ಪದ್ಮಾವತಿ ಮಗನಾಗಿ ಆಗಸ್ಟ್ 15, 1953 ರಲ್ಲಿ ಗದಗದಲ್ಲಿ ಎಚ್.ಕೆ.ಪಾಟೀಲ್ ಜನಿಸಿದರು. ಬ್ಯಾಚುಲರ್ ಆಫ್ ಸೈನ್ಸ್ ಹಾಗೂ ಬ್ಯಾಚುಲರ್ ಆಫ್ ಲಾ ಪದವಿಯನ್ನು ಪಡೆದುಕೊಂಡಿದ್ದ ಅವರು, ಪತ್ರಕರ್ತರಾಗಿಯೂ ಕೆಲಸ ಮಾಡಿದ್ದಾರೆ. ಗದಗ ಜಿಲ್ಲೆಯಲ್ಲಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಪತ್ನಿ ಹೇಮಾ ಪಾಟೀಲ್, ಇವರಿಗೆ ಒಬ್ಬರು ಪುತ್ರ, ಇಬ್ಬರು ಪುತ್ರಿಯರು.
2013 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿ ಕೆಲಸ ಮಾಡಿದ್ದರು.

ಎಚ್.ಕೆ.ಪಾಟೀಲ್ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದು, ಇದರ ಜೊತೆಗೆ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. 1984 ರಿಂದ 2008 ರವರೆಗೂ ಪಶ್ಚಿಮ ಪದವಿಧರ ಕ್ಷೇತ್ರದಿಂದ 4 ಬಾರಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದರು. ಜವಳಿ ಹಾಗೂ ಆಹಾರ ಸಂಸ್ಕರಣೆ, ಜಲಸಂಪನ್ಮೂಲ ಇಲಾಖೆ, ಕೃಷಿ ಇಲಾಖೆ, ಕಾನೂನು ಮಾನವ ಹಕ್ಕು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. 1994 ರಿಂದ 1998 ಹಾಗೂ 2006 ರಿಂದ 2008 ರವರೆಗೆ ಪ್ರತಿಪಕ್ಷ ನಾಯಕರಾಗಿದ್ದರು.

ಕೃಷ್ಣಬೈರೇಗೌಡ: ಸತತ ಆರು ಬಾರಿ ಗೆಲುವು ಸಾಧಿಸಿರುವ ಕೃಷ್ಣಬೈರೇಗೌಡ ಅವರು ನೂತನ ಸಚಿವ ಸಂಪುಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಕೃಷ್ಣಬೈರೇಗೌಡ ಅವರ, ತಂದೆ ಮಾಜಿ ಸಚಿವ ದಿ.ಸಿ.ಬೈರೇಗೌಡ. ತಂದೆ ನಿಧನರಾದ ನಂತರ ಅವರ ಸ್ಥಾನ ತುಂಬಲು ರಾಜಕೀಯಕ್ಕೆ ಎಂಟ್ರಿಕೊಟ್ಟರು. ಕೃಷ್ಣಬೈರೇಗೌಡರು 1973, ಏಪ್ರಿಲ್ 4 ರಂದು ಜನಿಸಿದ್ದು, ನರಸಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದಿ, ಮುದ್ದೇನಹಳ್ಳಿಯ ಸತ್ಯಸಾಯಿ ಶಾಲೆಯಲ್ಲಿ ಎಸ್ಎಸ್ಎಲ್​ಸಿಯನ್ನು ಮುಗಿಸಿದರು.

ಬಳಿಕ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜ್​ನಲ್ಲಿ ಪಿಯುಸಿ ಶಿಕ್ಷಣ ಮುಗಿಸಿ, 1994 ರಲ್ಲಿ ಸ್ನಾತಕ ಪದವಿ ಪಡೆದು ನಂತರ ಅಮೆರಿಕದಲ್ಲಿ ಇಂಟರ್ ನ್ಯಾಷನಲ್ ಆಫೇರ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅಮೆರಿಕ ವಾಷಿಂಗ್ಟನ್ ನಲ್ಲಿರುವ ಇಥಿಯೋಪಿಯಾ ರಾಜತಾಂತ್ರಿಕ ಕಚೇರಿಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್​ ಆಗಿ ಒಂದು ವರ್ಷ ಕೆಲಸ ಮಾಡಿದರು. ಬಳಿಕ 2000 ದಿಂದ 2002ರ ಮಧ್ಯೆ ಕೋಲಾರದ ವೇಮಗಲ್ ಹೋಬಳಿಯ ತಮ್ಮ ಹಳ್ಳಿಯಲ್ಲಿ ಕೃಷಿಕರಾಗಿಯೂ ಕೆಲಸ ಮಾಡಿದ್ದರು. ರಾಹುಲ್ ಗಾಂಧಿ ಅವರಿಗೆ ಆಪ್ತ ನಾಯಕರಲ್ಲಿ ಕೃಷ್ಣಬೈರೇಗೌಡ ಅವರು ಸಹ ಒಬ್ಬರು. ಕೃಷಿ ಭಾಗ್ಯ, ಜಲಾಮೃತ, ಸ್ವಚ್ಛ ಮೇವ ಜಯತೆ ಕೃತಿಗಳನ್ನು ಕೂಡ ರಚಿಸಿದ್ದಾರೆ.

2003 ರಲ್ಲಿ ತಂದೆ ಬೈರೇಗೌಡರು ನಿಧನರಾದ ಬಳಿಕ ಆ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿ ಕೋಲಾರದ ವೇಮಗಲ್ ಕ್ಷೇತ್ರದಿಂದ ಗೆಲುವು ಸಾಧಿಸಿ ಶಾಸಕರಾದರು. 2004 ಜನತಾ ದಳ ತೊರೆದು, ಕಾಂಗ್ರೆಸ್ ಸೇರಿ ಮತ್ತೆ ಪುನರಾಯ್ಕೆಯಾಗಿದ್ದರು. 2008 ರಲ್ಲಿ ಬ್ಯಾಟರಾಯನಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡರು. 2009ರಲ್ಲಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದರು. 2013 ರ ಚುನಾವಣೆಯಲ್ಲಿ ಮತ್ತೆ ಬ್ಯಾಟರಾಯನಪುರ ಕ್ಷೇತ್ರದಿಂದ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕೃಷಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

2018ರಲ್ಲೂ ಗೆದ್ದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. ಇದೀಗ ಮತ್ತೆ ಬ್ಯಾಟರಾಯನಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಎನ್.ಚೆಲುವರಾಯಸ್ವಾಮಿ: ಹಲವು ವರ್ಷಗಳಿಂದ ರಾಜಕೀಯ ಅನುಭವಿಯಾಗಿರುವ ನಾಗಮಂಗಲ ಕ್ಷೇತ್ರದ ಶಾಸಕ ಎನ್.ಚೆಲುವರಾಯಸ್ವಾಮಿ, 1994 ರಿಂದ 1999 ರವರೆಗೆ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. 1999 ಮತ್ತು 2008 ರ ಮಧ್ಯೆ ಎರಡು ಅವಧಿಗೆ ವಿಧಾನಸಭೆಗೆ ಆಯ್ಕೆಯಾಗಿ ಸಂಪುಟ ದರ್ಜೆ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. 2009ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು.

1960, ಜೂನ್ 1 ರಂದು ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿ ಜನಿಸಿದ ಚೆಲುವರಾಯಸ್ವಾಮಿ ಅವರ ತಂದೆ ನರಸಿಂಹೇಗೌಡ, ತಾಯಿ ಸಾಕಮ್ಮ, ಧನಲಕ್ಷ್ಮಿ ಅವರನ್ನು ಮದುವೆಯಾದ ಚೆಲುವರಾಯಸ್ವಾಮಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ. 1978-1983 ಸಾಲಿನಲ್ಲಿ ಮಂಡ್ಯದ ಕೆ.ಆರ್. ಪೇಟೆಯ ಪಾಲಿಟೆಕ್ನಿಕ್ ಕಾಲೇಜ್​ನಿಂದ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾ ವ್ಯಾಸಂಗ ಮಾಡಿದ್ದಾರೆ.

ಕಟ್ಟಾ ಜೆಡಿಎಸ್ ನಾಯಕರಾಗಿದ್ದ ಚೆಲುವರಾಯಸ್ವಾಮಿ 2013ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಗಮಂಗಲದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ನಂತರ ಅವರು ಲೋಕಸಭೆಗೆ ರಾಜೀನಾಮೆ ನೀಡಿದ್ದರು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ 2018ರಲ್ಲಿ ಜೆಡಿಎಸ್​ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು. ಇದೀಗ ಮತ್ತೆ ನಾಗಮಂಗಲದಿಂದ ಗೆದ್ದು ಸಚಿವರಾಗಿದ್ದಾರೆ.

introduction-of-six-new-ministers-of-karnataka
ಸಚಿವ ಈಶ್ವರ್ ಖಂಡ್ರೆ

ಈಶ್ವರ್ ಖಂಡ್ರೆ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ್ ಖಂಡ್ರೆ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2008 ರಲ್ಲಿ ಬೀದರ್​ನ ಭಾಲ್ಕಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಈಶ್ವರ್ ಖಂಡ್ರೆ, 2013ರಲ್ಲೂ ಜಯಭೇರಿ ಸಾಧಿಸಿದ್ದರು. 2016 ರಿಂದ 2018 ರವರೆಗೆ ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವರಾಗಿದ್ದರು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದರು.

ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಈಶ್ವರ್ ಖಂಡ್ರೆ ಗುರುತಿಸಿಕೊಂಡಿದ್ದಾರೆ. ಅವರು ಭಾಲ್ಕಿಯಲ್ಲಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಹಾಗೂ ಲಕ್ಷ್ಮಿ ಬಾಯಿ ದಂಪತಿಗೆ 1962, ಜನವರಿ 15 ರಂದು ಜನಿಸಿದರು. 1985ರಲ್ಲಿ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದರು. ಇನ್ನೂ ಬೀದರ್ ಜಿಲ್ಲೆಯಲ್ಲಿ ವಿಧಾನಸಭೆಗೆ ಆಯ್ಕೆಯಾದ ಖಂಡ್ರೆ ಕುಟುಂಬದ ಮೂರನೇ ಸದಸ್ಯರು ಇವರಾಗಿದ್ದಾರೆ. ನಂತರ ಪಕ್ಷದ ಸಂಘಟನೆಯಲ್ಲಿ ಹೆಚ್ಚಾಗಿ ತೊಡಗಿರುವ ಕಾರಣ ಅವರನ್ನು 2018, ಜುಲೈನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ನೇಮಕವಾದರು. ಇದೀಗ ಮತ್ತೆ ಶಾಸಕರಾಗಿ ಸಿದ್ದರಾಮಯ್ಯ ಸಂಪುಟ ಸೇರ್ಪಡೆಯಾಗಿದ್ದಾರೆ.

ಸಚಿವ ಡಾ.ಎಚ್.ಸಿ.ಮಹದೇವಪ್ಪ

ಡಾ.ಎಚ್.ಸಿ.ಮಹದೇವಪ್ಪ: ಮೈಸೂರು ಜಿಲ್ಲೆ, ಟಿ.ನರಸೀಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಚ್.ಸಿ.ಮಹದೇವಪ್ಪ ಅವರು ಇದುವರೆಗೂ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2013 ರಲ್ಲೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ಮಹದೇವಪ್ಪ ಅವರು, ಚಿಕ್ಕಮಾದಯ್ಯ, ಮಾದಮ್ಮ ದಂಪತಿಗೆ 1953, ಏಪ್ರಿಲ್ 20 ರಂದು ನಂಜನಗೂಡು ತಾಲೂಕಿನ ಹದಿನಾರು ಗ್ರಾಮದಲ್ಲಿ ಜನಿಸಿದರು. ದಾವಣಗೆರೆಯ ಜೆಜೆಎಂ ಮೆಡಿಕೆಲ್ ಕಾಲೇಜ್​ನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಿದ್ದರು. ಇವರ ಪತ್ನಿ ಮಹದೇವಮ್ಮ, ದಂಪತಿಗೆ ಒಬ್ಬರು ಪುತ್ರರಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಮಹದೇವಪ್ಪ ಗುರುತಿಸಿಕೊಂಡಿದ್ದಾರೆ. ಡಾ.ಎಚ್.ಸಿ. ಮಹದೇವಪ್ಪ ಅವರು 1985 ರಿಂದ ಇಲ್ಲಿಯವರೆಗೂ ಒಟ್ಟು ಆರು ಬಾರಿ ಶಾಸಕರಾಗಿದ್ದಾರೆ. ಈ ಮೂಲಕ ಮಹದೇವಪ್ಪ ಅವರು, ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಸಚಿವ ಕೆ.ವೆಂಕಟೇಶ್

ಕೆ.ವೆಂಕಟೇಶ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಕ್ಷೇತ್ರದಿಂದ ಆರನೇ ಬಾರಿಗೆ ಗೆದ್ದಿರುವ ಕೆ.ವೆಂಕಟೇಶ್, ಈ ಬಾರಿ ಮತ್ತೆ ಸಿದ್ದರಾಮಯ್ಯನವರ ಸಚಿವ ಸಂಪುಟ ಸೇರಿದ್ದಾರೆ. ಸತತ ಐದು ಬಾರಿ ಗೆಲುವು ಸಾಧಿಸಿ ಪಿರಿಯಾಪಟ್ಟವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದ ಅವರು, 2018 ರಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ವಿರುದ್ಧ ಸೋಲು ಅನುಭವಿಸಿದ್ದರು. ಈಗ ಮತ್ತೆ ಆರನೇ ಬಾರಿ ಗೆದ್ದು ಮಂತ್ರಿಯಾಗಿದ್ದಾರೆ. ಈ ಹಿಂದೆಯೂ ಒಮ್ಮೆ ಸಚಿವರಾಗಿದ್ದ ವೆಂಕಟೇಶ್, ಬಿಡಿಎ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ:ದೇವರು, ಬಸವೇಶ್ವರ, ಛತ್ರಪತಿ ಶಿವಾಜಿ, ಸತ್ಯ ನಿಷ್ಠೆಯ ಮೇಲೆ 24 ಸಚಿವರ ಪದಗ್ರಹಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.