ಬೆಂಗಳೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಇದಕ್ಕೆ ಪೂರ್ವಭಾವಿಯಾಗಿ ಇದೇ ತಿಂಗಳ 21ರಂದು ನಡೆಯಲಿರುವ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸರ್ಕಾರದ ಪರವಾಗಿ ಆಮಂತ್ರಿಸಿದ್ದಾರೆ.
ಪದ್ಮನಾಭ ನಗರದ ಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಚಿವರು, ಗೌಡರ ಯೋಗಕ್ಷೇಮ ವಿಚಾರಿಸಿ, ಶೀಘ್ರ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು. ಮಾತುಕತೆಯ ಸಂದರ್ಭದಲ್ಲಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಇಡೀ ಯೋಜನೆಯ ರೂಪುರೇಷೆಗಳ ಬಗ್ಗೆ ಗೌಡರಿಗೆ ವಿವರಿಸಿದರು.
ಇದನ್ನೂ ಓದಿ : ಕೊಟ್ಟ ಕುದುರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ: ಸಿಎಂ ಕಾಲೆಳೆದ ಸಿದ್ದರಾಮಯ್ಯ