ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಎರಡನೇ ಬಾರಿ ಸಿಐಡಿ ತನಿಖಾಧಿಕಾರಿಗಳ ಮುಂದೆ ಇಂದು ಹಾಜರಾದರು.
ನೇಮಕಾತಿ ವಿಭಾಗದಲ್ಲಿ ಅಮೃತ್ ಪೌಲ್ ಎಡಿಜಿಪಿ ಆಗಿದ್ದ ಸಂದರ್ಭದಲ್ಲಿ ಹಗರಣ ನಡೆದಿತ್ತು. ಈ ಸಂಬಂಧ ಅಮ್ರಿತ್ ಪೌಲ್ ಆಪ್ತ ಅಧಿಕಾರಿ ಡಿವೈಎಸ್ಪಿ ಶಾಂತರಾಜು ಅವರನ್ನು ಸಿಐಡಿ ಬಂಧಿಸಿದೆ. ಶಾಂತಕುಮಾರ್ ಹೇಳಿಕೆಯ ಮೇಲೆ, ಪ್ರಸ್ತುತ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿರುವ ಅಮ್ರಿತ್ ಪೌಲ್ ಈ ಹಿಂದೆ ಕೂಡ ಎರಡು ದಿನ ವಿಚಾರಣೆ ಎದುರಿಸಿದ್ದರು. ಸದ್ಯ ಈ ಕೇಸ್ನಲ್ಲಿ ಇನ್ನಷ್ಟು ಆರೋಪಿಗಳು ಬಂಧನವಾಗಿದ್ದು, ಬಂಧಿತರ ಸಂಖ್ಯೆ 40ರ ಗಡಿ ದಾಟಿದೆ.
ಇವರುಗಳ ಹೇಳಿಕೆ ಮತ್ತು ಸಾಂದರ್ಭಿಕ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಸಿಐಡಿ ಎಡಿಜಿ ಉಮೇಶ್ ಕುಮಾರ್ ಸಮ್ಮುಖದಲ್ಲಿ ಡಿವೈಎಸ್ಪಿ ಶೇಖರ್, ಅಮೃತ್ ಪೌಲ್ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಕಲಬುರಗಿ: ದೇವಲಗಾಣಗಾಪುರ ದತ್ತಾತ್ರೇಯ ದೇಗುಲದ ಅರ್ಚಕರ ವಿರುದ್ಧ ವಂಚನೆ ಪ್ರಕರಣ