ETV Bharat / state

ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆ ಹರಿಸಿದ ಡಿ. ರೂಪಾ - ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಪ್ರಶ್ನೆಗಳ ಸುರಿಮಳೆ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಪ್ರಶ್ನೆಗಳ ಸುರಿಮಳೆ ಮುಂದುವರೆಸಿದ್ದಾರೆ. ಫೇಸ್​ಬುಕ್​ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ.

ips-officer-d-roopa-facebook-post-on-ias-officer-rohini-sindhuri
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮುಂದೆ ಪ್ರಶ್ನೆಗಳ ಸರಣಿಯನ್ನಿಟ್ಟ ಐಪಿಎಸ್ ಅಧಿಕಾರಿ ಡಿ.ರೂಪಾ
author img

By

Published : Feb 19, 2023, 12:52 PM IST

Updated : Feb 19, 2023, 12:59 PM IST

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಪ್ರಶ್ನೆಗಳ ಸುರಿಮಳೆ ಮುಂದುವರೆಸಿದ್ದಾರೆ. ಶಾಸಕ ಸಾ.ರಾ.ಮಹೇಶ್ ಅವರ ಬಳಿ ರೋಹಿಣಿ ಸಿಂಧೂರಿ ಸಂಧಾನಕ್ಕೆ ಹೋಗಿದ್ದರು ಎಂಬ ಸುದ್ದಿಯನ್ನು ಆಧರಿಸಿ ತಮ್ಮ ಫೇಸ್‌ಬುಕ್‌ ಖಾತೆಯ ಮೂಲಕ ಡಿ.ರೂಪಾ ತರಾಟೆಗೆ ತೆಗೆದುಕೊಂಡಿದ್ದಾರೆ.

"ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ, ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ಯ ಸಂಧಾನಕ್ಕೆ ಹೋಗಿರುವುದನ್ನು ನಾನು ಇದೇ ಮೊದಲು ಕೇಳಿದ್ದೇನೆ. ಹಾಗಾದರೆ, ರೋಹಿಣಿ ಸಿಂಧೂರಿ ಐಎಎಸ್ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯ ಲೋಪದ ಬಗ್ಗೆಯೋ, ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು? ಎಂದು ಡಿ.ರೂಪಾ ಪ್ರಶ್ನಿಸಿದ್ದಾರೆ.

ips-officer-d-roopa-facebook-post-on-ias-officer-rohini-sindhuri
ಐಪಿಎಸ್ ಅಧಿಕಾರಿ ಡಿ.ರೂಪಾ ಪೋಸ್ಟ್​

1. ಡಿಕೆ ರವಿ, ಐಎಎಸ್​​, ಸಂಭಾವಿತ ವ್ಯಕ್ತಿ. ಸಿಬಿಐ ರಿಪೋರ್ಟ್​​ನಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ limit cross ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.

2. ಮುಂದೆ ಸಿಇಒ ಮಂಡ್ಯ ಆದಾಗ ಈಕೆ ಕಟ್ಟಿಸಿದ ಶೌಚಾಲಯಗಳಿಗಿಂತ ಹೆಚ್ಚು ತೋರಿಸಿ figures fudge ಮಾಡಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ತನಿಖೆಯೇ ಆಗಲಿಲ್ಲ.

3. ಚಾಮರಾಜನಗರದಲ್ಲಿ 24 ಜನರು ಆಮ್ಲಜನಕ ಇಲ್ಲದೇ ಸತ್ತಾಗ, ಆಪಾದನೆಗಳು ಇವರ ಮೇಲೇ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.

4. ಕನ್ನಡದ ಹುಡುಗಿ ಶಿಲ್ಪಾ ನಾಗ್ ಐಎಎಸ್. ಅವರ ಜೊತೆ ಜಗಳ, ರಂಪ. ಏತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಕೋಳಿ ಜಗಳ. ಶಿಲ್ಪಾಗೆ ಹೆಚ್ಚು ಕೆಲಸ ಮಾಡಿದ್ದು, ಹೆಚ್ಚು ಅವರ ಬಗ್ಗೆ ಪಾಸಿಟಿವ್ ಆಗಿ ಬರೆಯಲಾಯಿತು. ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾಗೆ ಕಿರುಕುಳ ನೀಡಿದರು ಎಂದು ಕೆಲವರು ಹೇಳಿದರು. ಕಡೆಗೆ ಮೈಸೂರಲ್ಲಿ ಗೌಡ ಪತ್ರಕರ್ತರು ಶಿಲ್ಪಾ ನಾಗ್ ಅವರಿಗೆ ಜಾತಿ ಬೆಂಬಲ ನೀಡುತ್ತಿದ್ದಾರೆ ಎಂಬ ಮಟ್ಟಿಗೆ ಸ್ವತಃ ಇಲ್ಲದ ಜಾತೀಯತೆ ಮೈಸೂರಿನ ಜರ್ನಲಿಸ್ಟ್​​ಗಳಲ್ಲಿ ಬಿತ್ತಿದರು ಈಕೆ ಎಂದು ಅನೇಕರು ಹೇಳುತ್ತಾರೆ.

5. ಹರ್ಷ ಗುಪ್ತ ಐಎಎಸ್. ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ. ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಈ ವಿಷಯ ಗೊತ್ತಿದೆ.

6. ಮಣಿವಣ್ಣನ್ ಐಎಎಸ್ ಜೊತೆ ಲೇಬರ್ / ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ.. ಅವರ ಜೊತೆ ಜಗಳ.

7. ಡಿಕೆ ರವಿ ತೀರಿದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ, ಎನ್​ ಹರೀಶ್ ಐಪಿಎಸ್, ಈಕೆಯ ಬ್ಯಾಚ್​ಮೇಟ್​. ಮದ್ವೆ ಆಗಿರಲಿಲ್ಲ, ಆತ, ಈಕೆಗೆ ಕಾದು ಕಾದು ಆತನೂ ಆತ್ಮಹತ್ಯೆ ಮಾಡಿಕೊಂಡದ್ದು ಎಂದು ಹಲವರು ಹೇಳಿದರೂ, ನಾನು ಅದನ್ನು ನಂಬಲಿಲ್ಲ, ಈಗೂ ನಂಬಿಲ್ಲ.

8. ಸಾ.ರಾ ಮಹೇಶ್​, ಎಂಎಲ್ಎ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದ ಈಕೆ ಒಂದನೂ ಪ್ರೂವ್​​ ಮಾಡಲಿಲ್ಲ. ಅದಕ್ಕೇ ಸಂಧಾನಕ್ಕೆ ಹೋದರಾ?

9. ಮೈಸೂರು ಎಂಪಿ ಪ್ರತಾಪ್ ಸಿಂಹ ಮೇಲೆ ಕೂಡ ಅನೇಕರ ಬಳಿ ಈಕೆ ಸಾಬೀತು ಮಾಡಲಾರದ ಆರೋಪಗಳನ್ನು ಮಾಡಿದರು. ಅಂದರೆ, ಪ್ರತಾಪ್ ಸಿಂಹ ಅವರು ಖಾಸಗಿ ಕ್ಲಿನಿಕ್ಸ್​ಗೆ ಆಮ್ಲಜನಕ ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆ ಎಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು ಸಾಬೀತು ಯಾಕೆ ಮಾಡಲಿಲ್ಲ.

10. ಹಾಸನದಲ್ಲಿ ತನ್ನನ್ನು ಒಂದು ವರ್ಷದ ಒಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ CAT (Central administrative tribunal), ಇಲ್ಲಿ ದಾವೆ ಹೂಡಿದರು. ಆ ದಾವೆಗೆ ಅರ್ಜಿ ಬರೆದು ಕೊಟ್ಟಿದ್ದೇ ನನ್ನ ಪತಿ, ಮುನೀಶ್​ ಮೌದ್ಗಿಲ್​ ಐಎಎಸ್​​​. ನನ್ನೆದುರಿಗೆ ಬರೆದು ಬರೆದು ಆಕೆಗೆ, ಆಕೆಯ ತಂದೆಗೆ, ಲಾಯರ್​​ಗೆ ಕಳಿಸಿದ್ದರು. ಆದರೆ ಈಕೆ, ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ ಮೈಸೂರಿಗೆ ಡಿಸಿ ಎಂದು ವರ್ಗಾವಣೆ ಆಗಿದ್ದ ಕನ್ನಡದ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರು ಎಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ, ಆರೋಪ ಇಲ್ಲದ ಶರತ್​​ರ ಸ್ಥಾನಕ್ಕೆ ಬಂದಿದ್ದು, ಈಕೆ ಯಾವ ಹೈ ಲೆವಲ್​ ಪ್ರಭಾವದಿಂದ?

11. ಡಾ. ರವಿಶಂಕರ್​ ಐಎಎಸ್​ ಈಕೆಯ ಮೇಲೆ ಪ್ರಿಲಿಮಿನರಿ ವಿಚಾರಣೆಯಲ್ಲಿ ತಪ್ಪು ಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಹೆರಿಟೇಜ್ ಬಿಲ್ಡಿಂಗ್​ ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು. ಮನುಷ್ಯತ್ವ ಇರೋರು ಕೋವಿಡ್​​ ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರ? John was fiddling when Rome was burning ಅಂದ ಹಾಗೆ. ಮೇರಿ ಅಂಟೋನೆಟ್ ಎಂಬ ರಾಣಿ, ಜನರು ಬ್ರೆಡ್​​ ಇಲ್ಲದೆ ಸಾಯ್ತಿದ್ದಾರೆ ಅಂತ ಕೇಳಿಸಿಕೊಂಡಾಗ, ಬ್ರೆಡ್​​ ಇಲ್ಲದೆ ಇದ್ದರೆ ಏನು, ಜನರು ಕೇಕ್​​ ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯ್ತು.

12. ಹಿಂದೆ ನನಗೆ ಒಬ್ಬರು ವಾಟ್ಸ್​ ಆ್ಯಪ್​​ ಮೆಸೇಜ್ ಮಾಡಿ ತಾವು ಇವರ ಪರವಾಗಿ ನಡೆಸುವ social media handling agency ಒಂದರಲ್ಲಿ ಕೆಲಸ ಮಾಡಿದ್ದು, ಈಗ ಆ ಕೆಲಸ ಬಿಟ್ಟಿದ್ದೇನೆ ಎಂದು ಹೇಳುತ್ತ , ಹೇಗೆ ಅಲ್ಲಿ ಈಕೆಯ ಪರವಾಗಿ ಸುದ್ದಿ, photos, videos create ಮಾಡುತ್ತಾರೆ, ಹೇಗೆ ಈಕೆಯ ವಿರುದ್ಧ ಇರುವವರ ಟ್ರೋಲ್ ಮಾಡುವ content ಹಾಗೂ ಹ್ಯಾಂಡಲ್​ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್​ಬುಕ್​ನಲ್ಲಿಯೂ ಹಾಕಿದ್ದೆ.

13. ಈಕೆಯ ಮೇಲೆ ಅಗ್ಗದ ಬ್ಯಾಗ್​​ಗಳನ್ನೂ ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಿರುವ ದೂರು ಲೋಕಾಯುಕ್ತದಲ್ಲಿ ದಾಖಲಾಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದ್ದರೂ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೆ ಒಳಪಡಿಸಲು ಅನುಮತಿ ನಿರಾಕರಣೆ ಮಾಡಲಾಗಿದೆ. ಅದರ ಪ್ರತಿ ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ ಬೆಂಬಲ ಇರುತ್ತದೆಯೇ?

14. ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ, ಒಂದಲ್ಲ, ಎರಡಲ್ಲ, ಅನೇಕರಿಗೆ ತನ್ನ not so decent ಚಿತ್ರಗಳನ್ನು ಕಳಿಸಿರುವ, ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಪಿಕ್ಸ್​ಗಳು ನನಗೆ ಸಿಕ್ಕಿವೆ. ಇದು ಖಾಸಗಿ ವಿಷಯ ಆಗುವುದಿಲ್ಲ. All India service conduct rules ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಪಿಕ್ಸ್, ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾಸತ್ಯತೆ ಹೊರ ಬರಬೇಕಿದೆ.

15. ಮೊನ್ನೆ ಇವರ ಭಾವ ಮಧುಸೂಧನ್ ರೆಡ್ಡಿ ಅವರು, ಲಕ್ಕಿ ಅಲಿ ಎಂಬ ಗಾಯಕರ ಜಾಗಕ್ಕೆ 20-30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ ಲಕ್ಕಿ ಅಲಿ ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದು? ಈ ರೀತಿಯ ಭಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?

16. ಇವರ ಗಂಡ ಹಾಗೂ ಇವರ ಮಾವನವರು (ಈಗ ತೀರಿ ಹೋಗಿದ್ದಾರಂತೆ) ರಿಯಲ್​ ಎಸ್ಟೇಟ್​​ ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೇ ಹಾಗೂ ಭೂ ದಾಖಲೆ ಕಚೇರಿಯ ಮೂಲಕ ತನ್ನ ಫ್ಯಾಮಿಲಿ ಬ್ಯುಸಿನೆಸ್​ಗೆ ಅಗತ್ಯ ಇರುವ ಅನೇಕ ಜಾಗದ ಕುರಿತಾದ ಮಾಹಿತಿ, ಅಂದರೆ, ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದು ಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.

17. ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್​ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ, (senior most sp in the state, 2013 ರಲ್ಲೀ ನಾನು) ಬೆಂಗಳೂರಿಗೆ ನನಗೆ ವರ್ಗವಾದಾಗ, ಆ ಜಾಗದಲ್ಲಿ ಇದ್ದ ಅಧಿಕಾರಿ, ಪವಾರ್, ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್​ಗೆ ಹೋದರು. ಆದರೆ, ರೋಹಿಣಿ ಸಿಂಧೂರಿಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ, ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ, ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳು, ಹೇಗೆ ನಡೆಸಿಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೆ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ಮಲತಾಯಿ ಧೋರಣೆ?

18. ಈಕೆ ಪ್ರೊಬೇಷನರಿ ಅಂತ ಇದ್ದಾಗ, ಅಲ್ಲಿಯ ಡಿಸಿ, ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಡಿಸಿ, ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೀಗ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

19. ಜಾಲಹಳ್ಳಿಯಲ್ಲಿ ಈಕೆಯ ಪತಿ (ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ) ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ immovable property returnsನಲ್ಲಿ ಈ ಮನೆಯ ಉಲ್ಲೇಖ ಇರದೆ, ಬೇರೆಲ್ಲಾ ಲಂಗು ಲೊಟ್ಟು ಆಸ್ತಿ ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನೀಚರ್, 26 ಲಕ್ಷದ ಜರ್ಮನ್ ಉಪಕರಣ ಅದನ್ನು ಡ್ಯೂಟಿ ಫ್ರೀ ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇರುವ, 6 ಲಕ್ಷ ರೂ.ಗಳನ್ನು ಕೇವಲ ಬಾಗಿಲಿನ ಹಿಂಗ್ಸ್​ಗೆ ಖರ್ಚು ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್​ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಇದರ ಮೇಲೆ ಕೂಲಂಕಷ ತನಿಖೆ ಆಗುವುದೇ ಎಂಬುದನ್ನು ನೋಡಬೇಕಿದೆ.

ಇಷ್ಟೆಲ್ಲಾ ಆದರೂ, ಯಾರು ಪ್ರತಿ ಬಾರಿ ಈಕೆಯನ್ನು ತನಿಖೆಗೂ ಒಳ ಪಡಿಸದೇ ಬಚಾವ್ ಮಾಡುತ್ತಾ ಇರುವುದು. ಈಕೆ ಕೆಮ್ಮಿದ್ದೂ ಕ್ಯಾಕರಿಸಿದ್ದೂ ತಮ್ಮ ಟಿಆರ್​ಪಿಗೋಸ್ಕರ ಹಾಕುವ ಮೀಡಿಯಾಗಳೇ ಈಕೆಯನ್ನು ಹೀರೋ/ಹೀರೋಯಿನ್ ಮಾಡುವ ಮೂಲಕ ಈಕೆ ಯಾವುದೇ ಶಿಕ್ಷೆಯಿಲ್ಲದೆ ಪ್ರತಿ ಬಾರಿ ಬಚಾವ್ ಆಗಿರುವುದೇ? ಅಥವಾ ಕಿಂದರಿ ಜೋಗಿ ಮಾದಿದರೀತಿಯಲ್ಲಿ ಸರ್ಕಾರದಲ್ಲಿ ಇರುವ ಪ್ರಭಾವಿಗಳು ಕಿಂದರಿ ಜೋಗಿಯ ಪಾಶಕ್ಕೆ ಸಿಲುಕಿದರೆ? ಎಂದು ಪ್ರಶ್ನೆಗಳ ಸರಣಿಯನ್ನು ಡಿ. ರೂಪಾರವರು ರೋಹಿಣಿ ಸಿಂಧೂರಿಯವರ ಮುಂದಿಟ್ಟಿದ್ದಾರೆ.

Last Updated : Feb 19, 2023, 12:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.