ಬೆಂಗಳೂರು: ನಿವೃತ್ತ ಡಿಜಿಪಿ ಎಸ್ ಸಿ ಸಕ್ಸೇನಾ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಹಿನ್ನೆಲೆ ಪೊಲೀಸ್ ಇಲಾಖೆಯಿಂದ ಬಳ್ಳಾರಿ ರಸ್ತೆಯ ಜಿ.ಕೆ.ವಿ.ಕೆ ಬಳಿಯ ಅಳ್ಳಾಲಸಂದ್ರದಲ್ಲಿ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಇಲಾಖೆಯಲ್ಲಿ ದಕ್ಷ ಮತ್ತು ಪ್ರಾಮಾಣಿಕರಾಗಿ ಎಸ್ ಸಿ ಸಕ್ಸೇನಾ ಸೇವೆ ಸಲ್ಲಿಸಿದ್ದರು ಎಂದು ಪೊಲೀಸ್ ಸಿಬ್ಬಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.