ETV Bharat / state

ಸ್ನಾತಕೋತ್ತರ ಪ್ರವೇಶದಲ್ಲಿ ಅಕ್ರಮ: ವೈದ್ಯರ ವಿರುದ್ಧದ ಸಿಬಿಐ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

author img

By ETV Bharat Karnataka Team

Published : Oct 24, 2023, 9:44 PM IST

ಡಾ.ನೇಹಾ ಬನ್ಸಾಲ್‌ ಅವರು ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ತೀರ್ಪು ನೀಡಿದೆ.

High court
ಹೈಕೋರ್ಟ್‌

ಬೆಂಗಳೂರು: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 2006ರಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಆರೋಪದಲ್ಲಿ ವೈದ್ಯರೊಬ್ಬರ ವಿರುದ್ಧ ಸಿಬಿಐ ಹೂಡಿರುವ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ಇತ್ತೀಚೆಗೆ ನಿರಾಕರಿಸಿದೆ.

ಡಾ.ನೇಹಾ ಬನ್ಸಾಲ್‌ ಎಂಬವರು ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶಿಸಿದೆ. ಅಲ್ಲದೆ, ಕೆಲವು ಸಾಕ್ಷಿಗಳ ಹೇಳಿಕೆಗಳ ಮೇರೆಗೆ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಲಾಗದು ಮತ್ತು ಅವರು ವಿಚಾರಣೆ ಎದುರಿಸಬೇಕು. ಅರ್ಜಿದಾರರು ಬೇಕಿದ್ದರೆ ಸಾಕ್ಷಿಗಳ ಹೇಳಿಕೆಯನ್ನು ಪ್ರಶ್ನಿಸುವುದಕ್ಕೆ ಅವಕಾಶವಿರಲಿದೆ ಎಂದು ಪೀಠ ಹೇಳಿದೆ.

ಅರ್ಜಿದಾರರು ಮೊದಲಿನಿಂದಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಬೇರೆಯವರ ಜತೆ ಅವರನ್ನು ಹೋಲಿಕೆ ಮಾಡುವುದು ಸರಿಯಲ್ಲ, ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿದಾರರ ಪರ ವಕೀಲರ ವಾದ ತಿರಸ್ಕರಿಸಿರುವ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಆರೋಪ ಕುರಿತಂತೆ ವಿಚಾರಣೆ ನಡೆದು ಸತ್ಯಾಂಶ ಹೊರಬರಲಿ ಎಂದು ವಿವರಿಸಿದೆ.

ಪ್ರಕರಣದ ಹಿನ್ನೆಲೆ: ಪ್ರಾಸಿಕ್ಯೂಷನ್‌ ಆರೋಪಿಸಿರುವಂತೆ ಅರ್ಜಿದಾರರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿ ಸ್ನಾತಕೋತ್ತರ ಕೋರ್ಸ್‌ಗೆ ಪ್ರವೇಶವನ್ನು ಪಡೆದಿದ್ದಾರೆ. ನಂತರ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯಲ್ಲಿ ಕೆಲವು ಕಳಪೆ ವಿದ್ಯಾರ್ಥಿಗಳೂ ಸಹ ಅಧಿಕ ಅಂಕಗಳನ್ನು ಗಳಿಸಿರುವುದು ಕಂಡುಬಂದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಮಾಧ್ಯಮ ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚನೆ ಮಾಡಿತ್ತು. ಆ ಸಮಿತಿ ಸ್ನಾತಕೋತ್ತರ ಕೋರ್ಸ್‌ ಪ್ರವೇಶ ಪರೀಕ್ಷೆಯಲ್ಲಿ ಎಲ್ಲವೂ ಸರಿಯಾಗಿ ನಡೆದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹಾಗಾಗಿ ಸರ್ಕಾರ ಇದರ ಹಿಂದೆ ಏನೋ ಪಿತೂರಿ ಇದೆ ಎಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಸಿಬಿಐ ತನಿಖೆಯಲ್ಲಿ 2005ರ ಜು.22ರಿಂದ 2007ರ ಜು.21ರ ವರೆಗೆ ಅಧಿಕಾರದಲ್ಲಿದ್ದ ವಿವಿಯ ಕುಲಪತಿ ಒಂದನೇ ಆರೋಪಿ, ರಿಜಿಸ್ಟ್ರಾರ್‌ ಎರಡನೇ ಆರೋಪಿ ಹಾಗೂ ಸಹಾಯಕ ರಿಜಿಸ್ಟ್ರಾರ್‌ ಡಾ.ಹನುಮಂತ ಪ್ರಸಾದ್‌ ಅವರು ಇತರೆ ಆರೋಪಿಗಳ ಜತೆ ಸೇರಿ ಪಿತೂರಿ ನಡೆಸಿದ್ದರು. ಅದರಂತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಕೆಲವು ವ್ಯಕ್ತಿಗಳಿಗೆ ಮಾತ್ರ ಲಭ್ಯವಾಗುವಂತೆ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲಾಗಿತ್ತು ಎಂದು ಸಿಬಿಐ ತನಿಖೆ ಸಂದರ್ಭದಲ್ಲಿ ಬಹಿರಂಗವಾಗಿತ್ತು.

ಇದಾದ ನಂತರ ಅರ್ಜಿದಾರರನ್ನು ಸಿಬಿಐ 8ನೇ ಆರೋಪಿಯನ್ನಾಗಿ ಮಾಡಿತ್ತು, ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್‌ 13(1)(ಡಿ) ಮತ್ತು 13(2) ಹಾಗೂ ಐಪಿಸಿ ಸೆಕ್ಷನ್‌ 409, 420 ಮತ್ತು 120 ಬಿ ಡಿ ಆರೋಪಗಳನ್ನು ಹೊರಿಸಲಾಗಿತ್ತು. ಅರ್ಜಿದಾರರು ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿದ್ದರು, ಆದರೆ ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಇದನ್ನೂಓದಿ: ಕೋಟ್ಯಂತರ ರೂ ವಂಚನೆ ಆರೋಪ: ಮಂತ್ರಿ ಡೆವಲಪರ್ಸ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.