ETV Bharat / state

ರಾಜಧಾನಿಯಲ್ಲಿ ಸ್ಫೋಟಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಡಿ. 23 ರಂದು ಪೀಣ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಐಎಸ್​ಡಿ ತಂಡ ಬಂಧಿಸಿ ವಿಚಾರಣೆಗೊಳಪಡಿಸಿದೆ.

ISD
ಐಎಸ್​ಡಿ
author img

By

Published : Dec 26, 2020, 1:02 PM IST

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ರಾಜಶೇಖರ್ ಹಾಗೂ ಸುರೇಶ್ ಬಂಧಿತ ಆರೋಪಿಗಳು. ಡಿ. 23 ರಂದು ಪೀಣ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಐಎಸ್​ಡಿ ತಂಡ ಬಂಧಿಸಿ ವಿಚಾರಣೆಗೊಳಪಡಿಸಿದೆ.

ಬಂಧಿತರಿಂದ ಜಿಲೆಟಿನ್‌ ಕಡ್ಡಿಗಳು, ಡಿಟೊನೇಟರ್​ಗಳು ಹಾಗೂ ಅಮೋನಿಯಂ ನೈಟ್ರೇಟ್ ವಶಕ್ಕೆ ಪಡೆದುಕೊಂಡಿದೆ‌. ಕಳೆದ‌ ಮೂರು ವರ್ಷಗಳಿಂದ ಸ್ಫೋಟಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳು ಆಂಧ್ರ ಪ್ರದೇಶದಿಂದ‌ ಖರೀದಿಸಿ‌ ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಆರೋಪಿಗಳ ಹಿನ್ನೆಲೆ ಹಾಗೂ ಯಾವ ಉದ್ದೇಶಕ್ಕಾಗಿ ಮಾರಾಟ ಮಾಡುತ್ತಿದ್ದರು ಎಂಬುದರ ಬಗ್ಗೆ ಐಎಸ್​ಡಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.