ETV Bharat / state

ಕಾವೇರಿ ಕೂಗು ಅಭಿಯಾನ: ಹೈಕೋರ್ಟ್ ಆದೇಶ ಪ್ರಶ್ನಿಸಿ ಈಶ ಫೌಂಡೇಶನ್ ಸುಪ್ರೀಂಗೆ ಮೇಲ್ಮನವಿ

ಹೈಕೋರ್ಟ್ ಮೂಲ ಅರ್ಜಿದಾರ ಅಮರನಾಥ್ ಅವರನ್ನು ಪ್ರಕರಣದಿಂದ ಕೈಬಿಟ್ಟು ಸ್ವಯಂಪ್ರೇರಿತ ಅರ್ಜಿಯಾಗಿ ಪರಿವರ್ತಿಸಿಕೊಂಡು, ಅಮಿಕಸ್ ಕ್ಯೂರಿಯನ್ನು ನೇಮಿಸಿಕೊಂಡಿತ್ತು. ಇದೀಗ ಪಿಐಎಲ್ ಆಗಿ ದಾಖಲಿಸಿಕೊಂಡಿರುವುದನ್ನು ಪ್ರಶ್ನಿಸಿ ಈಶ ಔಟ್ ರೀಚ್ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದೆ.

isha-foundation-appeals-to-supreme-court-question-the-high-court-order
ಹೈಕೋರ್ಟ್ ಆದೇಶ ಪ್ರಶ್ನಿಸಿ ಈಶ ಫೌಂಡೇಶನ್ ಸುಪ್ರೀಂಗೆ ಮೇಲ್ಮನವಿ
author img

By

Published : Mar 25, 2021, 8:48 PM IST

ಬೆಂಗಳೂರು: ಸದ್ಗುರು ಜಗ್ಗಿ ವಾಸುದೇವ್ ಮುಖ್ಯಸ್ಥಿಕೆಯ ಈಶ ಫೌಂಡೇಶನ್ ಕಾವೇರಿ ಕೂಗು ಅಭಿಯಾನದಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ವಿಚಾರವಾಗಿ ದಾಖಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ಆಗಿ ದಾಖಲಿಸಿಕೊಂಡಿರುವುದನ್ನು ಪ್ರಶ್ನಿಸಿ ಈಶ ಔಟ್ ರೀಚ್ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದೆ.

ಈಶ ಫೌಂಡೇಶನ್ ಸಾರ್ವಜನಿಕರಿಂದ ಹಣ ಸಂಗ್ರಹಿಸುವುದನ್ನು ಪ್ರಶ್ನಿಸಿ ವಕೀಲ ಎ.ವಿ ಅಮರನಾಥ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಕಳೆದ 2020ರ ಅಕ್ಟೋಬರ್ 15ರಂದು ಸ್ವಯಂಪ್ರೇರಿತ ಪಿಐಎಲ್ ಆಗಿ ಪರಿವರ್ತಿಸಿಕೊಂಡಿತ್ತು. ವಕೀಲ ಎ.ವಿ ಅಮರನಾಥ್, ಪ್ರಕರಣದ ವಿಚಾರವಾಗಿ ಅಂತರ್ರಾಷ್ಟ್ರೀಯ ವಾಹಿನಿಯೊಂದಕ್ಕೆ ಲೀಗಲ್ ನೋಟಿಸ್ ಜಾರಿ ಮಾಡಿ ಸೂಕ್ತ ವಿವರಣೆ ನೀಡದ ಹಿನ್ನೆಲೆಯಲ್ಲಿ ಅರ್ಜಿಯನ್ನು ಸ್ವಯಂಪ್ರೇರಿತ ಅರ್ಜಿಯಾಗಿ ಪರಿವರ್ತಿಸಿಕೊಳ್ಳಲಾಗಿತ್ತು.

ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದ ವೇಳೆ, ಈಶ ಔಟ್ ರೀಚ್ ಪರ ಪಕೀಲರು ಪೀಠಕ್ಕೆ ಮಾಹಿತಿ ನೀಡಿ, ಹೈಕೋರ್ಟ್ ಅರ್ಜಿಯನ್ನು ಸ್ವಯಂ ಪ್ರೇರಿತವಾಗಿ ಪರಿವರ್ತಿಸಿಕೊಂಡ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​​ನಲ್ಲಿ ಸ್ಪೆಷಲ್ ಲೀವ್ ಪಿಟಿಷನ್ (ಎಸ್ಎಲ್​ಪಿ) ದಾಖಲಿಸಲಾಗಿದೆ ಎಂದರು.

ಹೇಳಿಕೆ ದಾಖಲಿಕೊಂಡ ಪೀಠ, ವಿಚಾರಣೆಯನ್ನು ಒಂದು ತಿಂಗಳ ಕಾಲ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಈಶ ಫೌಂಡೇಶನ್ ಕಾವೇರಿ ಕೂಗು ಅಭಿಯಾನದ ಹೆಸರಲ್ಲಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸುತ್ತಿದೆ. ನದಿ ಸಂರಕ್ಷಣೆಗಾಗಿ ಅದರ ತಪ್ಪಲಿನ ಉದ್ದಕ್ಕೂ ಗಿಡಗಳನ್ನು ನೆಡುವುದಾಗಿ ಹೇಳಿಕೊಂಡು ಅಂದಾಜು 11 ಸಾವಿರ ಕೋಟಿ ರೂಪಾಯಿ ಸಂಗ್ರಹಿಸಲು ಮುಂದಾಗಿದೆ. ಇದು ನಿಯಮಬಾಹಿರ ಎಂದು ಆಕ್ಷೇಪಿಸಿ ವಕೀಲ ಎ.ವಿ ಅಮರನಾಥ್ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಸಂದರ್ಭದಲ್ಲೇ ಕಾವೇರಿ ಕೂಗು ಅಭಿಯಾನಕ್ಕೆ ಸಂಬಂಧಿಸಿದಂತೆ ಅಂತರ್ರಾಷ್ಟ್ರೀಯ ವಾಹಿನಿಯೊಂದು ಕಾರ್ಯಕ್ರಮ ಪ್ರಸಾರ ಮಾಡಲು ಸಿದ್ದವಾಗಿತ್ತು.

ಈ ವೇಳೆ ವಾಹಿನಿಗೆ ನೋಟಿಸ್ ಜಾರಿ ಮಾಡಿದ್ದ ವಕೀಲ ಅಮರನಾಥ್, ಕಾರ್ಯಕ್ರಮ ಪ್ರಸಾರ ಮಾಡಿದರೆ ನ್ಯಾಯಾಂಗ ನಿಂದನೆಯಾಗಲಿದೆ ಎಂದು ಬೆದರಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ಮೂಲ ಅರ್ಜಿದಾರ ಅಮರನಾಥ್ ಅವರನ್ನು ಪ್ರಕರಣದಿಂದ ಕೈಬಿಟ್ಟು ಸ್ವಯಂಪ್ರೇರಿತ ಅರ್ಜಿಯಾಗಿ ಪರಿವರ್ತಿಸಿಕೊಂಡು, ಅಮಿಕಸ್ ಕ್ಯೂರಿಯನ್ನು ನೇಮಿಸಿಕೊಂಡಿತ್ತು.

ಇದನ್ನೂ ಓದಿ: ಸಿಡಿ ಪ್ರಕರಣದ ಯುವತಿಯ ರಕ್ಷಣೆಗೆ ನಾವು ನಿಲ್ಲುತ್ತೇವೆ: ಕೆ.ಆರ್‌.ರಮೇಶ್​ ಕುಮಾರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.