ಬೆಂಗಳೂರು: ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಿನಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ ಬದಲಾಗಿ ಹಗಲು ಹೊತ್ತಿನಲ್ಲಿ ಮಾತ್ರ ತ್ರೀ ಫೇಸ್ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಅವರಿಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯಾದ್ಯಂತ ಕಾಡಿನಂಚಿನಲ್ಲಿರುವ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬರುತ್ತಿರುವ ಹಿನ್ನೆಲೆ ಹೆಚ್ಚು ಪ್ರಾಣ ಹಾನಿ ಸಂಭವಿಸುತ್ತಿವೆ. ರಾತ್ರಿಯ ವೇಳೆ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಿದರೆ ರೈತರು ಪಂಪ್ ಸೆಟ್ ಆನ್ ಮತ್ತು ಆಫ್ ಮಾಡಲು ಜಮೀನುಗಳಿಗೆ ಸಂಚರಿಸುವ ಕಾರಣ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇದರಿಂದಾಗಿ ಬೆಳಗಿನ ಹೊತ್ತು ತ್ರೀ ಫೇಸ್ ವಿದ್ಯುತ್ ಪೂರೈಸುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ಹೊತ್ತು ತ್ರೀ ಫೇಸ್ ವಿದ್ಯುತ್ ಪೂರೈಸದಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರಲ್ಲಿ ಕೋರಿದ್ದಾರೆ.
ಇದನ್ನೂಓದಿ:ಸಿದ್ದರಾಮಯ್ಯ ಡೂಪ್ಲಿಕೇಟ್ ಸಿಎಂ: ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ