ಬೆಂಗಳೂರು: ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಬಿ. ನಾರಾಯಣ ರಾವ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾರೈಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಸವ ಕಲ್ಯಾಣ ಶಾಸಕ ಬಿ. ನಾರಾಯಣ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ದು:ಖವಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ನಾರಾಯಣ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆ ನೀಡುತ್ತಿರುವ ವೈದ್ಯರ ಜೊತೆ ನಾನು ಮಾತನಾಡಿದ್ದು, ನಾರಾಯಣ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ನಿನ್ನೆ (ಸೆ.1) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷೇತ್ರದಲ್ಲಿ ನಿರಂತರವಾಗಿ ಸಂಚರಿಸಿದ್ದು,, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಕೊರೊನಾ ಬಂದಿರುವ ಸಾಧ್ಯತೆ ಇದೆ ಎಂದು ಅವರೇ ಹೇಳಿಕೊಂಡಿದ್ದಾರೆ. ಇನ್ನೂ ಶಾಸಕರ ಚೇತರಿಕೆಗೆ ಹಲವು ನಾಯಕರು ಹಾರೈಸಿದ್ದಾರೆ.