ಬೆಂಗಳೂರು: ನನ್ನ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಜೆಡಿಎಸ್ ಮುಖಂಡ ಬಿ.ಎಂ.ಫಾರೂಕ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ನಗರದ ರೆಸಿಡೆನ್ಸಿ ರಸ್ತೆಯ ಕಚೇರಿ ಬಳಿ ಐಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಬಗ್ಗೆ ನಿನ್ನೆಯೇ ಹೇಳಿದ್ದರು. ಐಟಿ ದಾಳಿಗೆ ನಾವು ಹೆದರಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅವರ ತನಿಖೆಗೆ ಅಗತ್ಯವಾದ ಎಲ್ಲಾ ಮಾಹಿತಿಯನ್ನ ಒದಗಿಸುವೆ ಎಂದರು.