ETV Bharat / state

ರಾಜ್ಯದಲ್ಲಿರುವುದು 'ಡಬಲ್ ಸ್ಟೇರಿಂಗ್' ಸರ್ಕಾರ: ಬಿ.ವೈ.ವಿಜಯೇಂದ್ರ ಟೀಕೆ

ರಾಜ್ಯದ ಮುಖ್ಯಮಂತ್ರಿಗಳು ಐದು ವರ್ಷ ಇರ್ತಾರೋ ಇಲ್ವೋ ಅಂತಾನೇ ಗ್ಯಾರಂಟಿ ಇಲ್ಲ ಎಂದು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.

MLA BY Vijayendra
ಬಿ.ವೈ ವಿಜಯೇಂದ್ರ
author img

By

Published : May 24, 2023, 12:33 PM IST

ಬೆಂಗಳೂರು: ಇದು ಡಬಲ್ ಸ್ಟೇರಿಂಗ್ ಸರ್ಕಾರ. ಸಿಎಂಗೊಂದು ಸ್ಟೇರಿಂಗ್, ಡಿಸಿಎಂಗೊಂದು ಸ್ಟೇರಿಂಗ್ ಇದೆ. ಯಾರು ಯಾವ ಕಡೆ ಎಳೀತಾರೋ ಗೊತ್ತಿಲ್ಲ ಎಂದು ಶಾಸಕ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದರು.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ (ಮಂಗಳವಾರ) ಡಿಸಿಎಂ ಸಾಹೇಬ್ರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದಾರೆ. ಕೇಸರೀಕರಣದ ವಿರುದ್ಧವೂ ಮಾತಾಡಿದಾರೆ. ರಾಷ್ಟ್ರದ ಧ್ಚಜದಲ್ಲಿ‌ ಕೇಸರಿ ಬಣ್ಣ ಇದೆ. ಸ್ವಾಮೀಜಿಗಳ‌ ಉಡುಗೆ ಕೇಸರಿ. ಹನುಮ ಧ್ವಜದ ಬಣ್ಣ ಕೇಸರಿ. ಇಂತಹ ಕೇಸರಿ ಬಗ್ಗೆ ಕಾಂಗ್ರೆಸ್​​ನವರಿಗೆ ಯಾಕೆ ಸಿಟ್ಟು‌ ಗೊತ್ತಿಲ್ಲ. ಅವರು ಇಡೀ ದೇಶದಲ್ಲೇ ಅಧಿಕಾರಕ್ಕೆ ಬಂದಿದ್ದೇವೆ ಅನ್ನೋ ಭ್ರಮೆಯಲ್ಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ರಾಜ್ಯದ ಮುಖ್ಯಮಂತ್ರಿಗಳು ಐದು ವರ್ಷ ಇರ್ತಾರೋ ಇಲ್ವೋ ಅಂತಾನೇ ಗ್ಯಾರಂಟಿ ಇಲ್ಲ. ಹಾಗಾಗಿ ಗ್ಯಾರಂಟಿ ಸ್ಕೀಂಗಳ ಬಗ್ಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ನಿರಾಸೆ ಕಾದಿದೆಯಾ? ಎಂಬ ಅನುಮಾನ ಮೂಡುತ್ತಿದೆ. ದಾರಿಯಲ್ಲಿ ಹೋಗುವವರ ಬಳಿ ಮತ ಕೇಳಿ ಹಾಕಿಸಿಕೊಂಡಿದ್ದಾರೆ. ಆದರೆ ಗ್ಯಾರಂಟಿ ಬೀದೀಲಿ ಹೋಗುವವರಿಗೆ ಕೊಡಲ್ಲ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ: ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಬಿ ವೈ ವಿಜಯೇಂದ್ರ: ಭುಜ ತಟ್ಟಿ ಹಾರೈಸಿದ ಸಿಎಂ ಸಿದ್ದರಾಮಯ್ಯ.. ವಿಡಿಯೋ

ಮೊದಲ ಬಾರಿಗೆ ವಿಧಾನಸೌಧ ಪ್ರವೇಶ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನಿನ್ನೆ (ಮಂಗಳವಾರ) ಮೊದಲ ಬಾರಿಗೆ ವಿಧಾನ ಸೌಧ ಪ್ರವೇಶಿಸಿದರು. ವಿಧಾನ ಸಭಾ ಕಲಾಪಕ್ಕೆ ಹಾಜರಾಗುವ ಮುನ್ನ ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಶೀರ್ವಾದ ಪಡೆದಿದ್ದರು.

ವಿಧಾನಸಭಾ ಸದಸ್ಯರಾಗಿ ಪ್ರತಿಜ್ಞಾವಿಧಿ ಸ್ವೀಕಾರ: 2023 ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಸೋಮವಾರದಿಂದ ಮೂರು ದಿನಗಳ ಕಾಲ ಮೊದಲ ಅಧಿವೇಶನ ಆರಂಭವಾಗಿದೆ. ಸೋಮವಾರ ಮತ್ತು ಮಂಗಳವಾರ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದೆ. ಇಂದು ನೂತನ ಸ್ಪೀಕರ್​ ಆಗಿ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ಶಿಕಾರಿಪುರ ಶಾಸಕರಾಗಿ ಆಯ್ಕೆಯಾದ ವಿಜಯೇಂದ್ರ ಮಂಗಳವಾರ ತಮ್ಮ ಪ್ರತಿಜ್ಞಾವಿಧಿ ಸ್ವೀಕರಿಸಿದ್ದರು.

ಇದನ್ನೂ ಓದಿ: ತಂದೆ ಬಿಎಸ್​ವೈ ಆಶೀರ್ವಾದ ಪಡೆದು ಮೊದಲ ಬಾರಿಗೆ ವಿಧಾನಸೌಧದ ಮೆಟ್ಟಿಲೇರಿದ ವಿಜಯೇಂದ್ರ

27 ಮಂದಿ ಶಾಸಕರ ಪ್ರಮಾಣವಚನ ಸ್ವೀಕಾರ: ನಿನ್ನೆ ವಿವಿಧ ಪಕ್ಷಗಳ 27 ಮಂದಿ ಶಾಸಕರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮೊದಲಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ಪ್ರಭು ಶ್ರೀರಾಮಚಂದ್ರನ ಸತ್ಯನಿಷ್ಠೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳ್ಕರ್ ಜಗಜ್ಯೋತಿ ಬಸವಣ್ಣ ಹೆಸರಿನಲ್ಲಿ ಪ್ರಮಾಣ ಮಾಡಿ ಸತ್ಯನಿಷ್ಠೆ ಹೆಸರಿನಲ್ಲಿ ಪ್ರತಿಜ್ಙೆ ಸ್ವೀಕರಿಸಿದ್ದರು.

ಇದನ್ನೂ ಓದಿ: ಎರಡನೇ ದಿನ 27 ಮಂದಿ ಶಾಸಕರ ಪ್ರಮಾಣವಚನ ಸ್ವೀಕಾರ: ಪ್ರತಿಜ್ಞಾವಿಧಿಗೆ ಸಮಯ ನೋಡಿದ ಶಾಸಕ ಎನ್.ಎಚ್ ಕೋನರೆಡ್ಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.