ETV Bharat / state

ಸಿಡಿ ಪ್ರಕರಣದ ಎಲ್ಲಾ ಆಗುಹೋಗುಗಳು ಡಿಕೆಶಿ ನಿಯಂತ್ರಣದಲ್ಲೇ ನಡೆಯುತ್ತಿರುವುದು ಸ್ಪಷ್ಟ: ಬಿಜೆಪಿ - ಡಿಕೆಶಿ ವಿರುದ್ಧ ಬಿಜೆಪಿ ಟ್ವೀಟ್

ಆರಂಭದಲ್ಲಿ ಹೆಗಲು ಮುಟ್ಟಿಕೊಂಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ. ಈಗ ಸಂತ್ರಸ್ತೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ. ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತವೆ ಎಂಬುದು ಸ್ಪಷ್ಟ ಅಲ್ಲವೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ಗೆ ಬಿಜೆಪಿ ಘಟಕ ಪ್ರಶ್ನಿಸಿದೆ.

ಬಿಜೆಪಿ
ಬಿಜೆಪಿ
author img

By

Published : Mar 27, 2021, 3:30 PM IST

Updated : Mar 27, 2021, 3:45 PM IST

ಬೆಂಗಳೂರು: ಸಿಡಿ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ? ಎಂದು ರಾಜ್ಯ ಬಿಜೆಪಿ ಘಟಕ ಡಿಕೆಶಿಗೆ ಪ್ರಶ್ನಿಸಿದೆ.

  • ಮಾನ್ಯ @DKShivakumar,

    ಆರಂಭದಲ್ಲಿ ಹೆಗಲು ಮುಟ್ಟಿಕೊಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ.

    ಈಗ ಸಂತ್ರಸ್ಥೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ.

    ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ?#DKShiMustResign

    — BJP Karnataka (@BJP4Karnataka) March 27, 2021 " class="align-text-top noRightClick twitterSection" data=" ">

ಈ ಸಂಬಂಧ ಸರಣಿ‌ ಟ್ವೀಟ್ ಮಾಡಿರುವ ಬಿಜೆಪಿ ಘಟಕ, ಆರಂಭದಲ್ಲಿ ಹೆಗಲು ಮುಟ್ಟಿಕೊಂಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ. ಈಗ ಸಂತ್ರಸ್ತೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ. ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತವೆ ಎಂಬುದು ಸ್ಪಷ್ಟ ಅಲ್ಲವೇ. ಪ್ರಕರಣದ ಆರೋಪಿಗಳೊಂದಿಗೆ ಸಂಬಂಧವಿರುವುದನ್ನು ಮಹಾನಾಯಕ ಒಪ್ಪಿಕೊಂಡಿದ್ದಾರೆ ಎಂದು ಟಾಂಗ್ ನೀಡಿದೆ.

ಪ್ರಕರಣದ ಮಾಸ್ಟರ್ ಮೈಂಡ್‌ಗಳೊಂದಿಗೆ ಯಾವ ರೀತಿಯ ಸಂಬಂಧವಿತ್ತೆಂಬುದನ್ನು ರಾಜ್ಯದ ಜನತೆಯ‌ ಮುಂದೆ ಖಳನಾಯಕ ಬಹಿರಂಗಪಡಿಸಬೇಕು. ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ. ಷಡ್ಯಂತ್ರದ ಹಿಂದೆ ಮಹಾನಾಯಕನ ಹೆಸರು ಪ್ರಸ್ತಾಪವಾಗಿದೆ. ಇತರ ಆರೋಪಿಗಳಂತೆ ಮಹಾನಾಯಕ ಕೂಡಾ ಆರೋಪಿಯಲ್ಲವೇ?. ರಾಜಕಾರಣದಲ್ಲಿ ಅತಿಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವ ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ? ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಬದ್ಧತೆ ಅನ್ನುವುದಿದ್ದರೆ ಮೊದಲು ಮಹಾನಾಯಕನ ರಾಜೀನಾಮೆ ಪಡೆಯಲಿ. ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಪಕ್ಷದ ನಾಯಕರು ಸದನದ ಅಮೂಲ್ಯ ಸಮಯವನ್ನು ವ್ಯರ್ಥ‌ಮಾಡಿದ್ದಾರೆ. ಮಹಾನಾಯಕ, ಮಹಾನಾಯಕಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳ ಮುತುವರ್ಜಿಯಲ್ಲೇ ಈ ಪ್ರಕರಣ ನಡೆದಿರುವ ಶಂಕೆ ರಾಜ್ಯದ ಜನತೆಯಲ್ಲಿ ಮೂಡುತ್ತಿದೆ. ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ನೀಡುವುದೇ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ : ನನ್ನನ್ನು ಯುವತಿ ಭೇಟಿ ಮಾಡಿಲ್ಲ, ನರೇಶ್ ನನಗೆ ಬೇಕಾದ ಹುಡುಗ: ಡಿಕೆಶಿ

ಮಾಜಿ ಸಚಿವ ರಮೇಶ್​ ಜಾರಕಿಹೊಳಿಯವರದ್ದು ಎನ್ನಲಾದ ಸಿಡಿ ಪ್ರಕರಣದ ವಿಚಾರದಲ್ಲಿ ಕೆಲ ದಿನಗಳ ಹಿಂದಿನಿಂದಲೂ ಡಿಕೆಶಿ ಹೆಸರು ಕೇಳಿ ಬರುತ್ತಿತ್ತು. ಅಲ್ಲದೆ, ಕಾಂಗ್ರೆಸ್​​ ನಾಯಕರು ಅಧಿವೇಶನದಲ್ಲಿಯೂ ಸಿಡಿ ಪ್ರಕರಣದ ವಿಚಾರವಾಗಿ ದನಿಯೆತ್ತಿದ್ದರು. ಆದರೆ, ನಿನ್ನೆ ಯುವತಿ ಸಂಬಂಧಿಕರೊಂದಿಗೆ ಮಾತನಾಡಿದ್ದಾಳೆ ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆ, ಬಿಜೆಪಿ ಇಂದು ಡಿಕೆಶಿಯನ್ನು ಗುರಿಯಾಗಿಸಿ ಟ್ವೀಟ್ ಮಾಡಿದೆ.

Last Updated : Mar 27, 2021, 3:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.