ETV Bharat / state

ರೈತರ ಹಿತ ಕಾಪಾಡುವುದು ಮುಖ್ಯ: ಸಿಎಂ ಗಮನಕ್ಕೆ ತರುತ್ತೇವೆಂದ ಸಚಿವರು - My sugar factory

ಮೈ ಶುಗರ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಬಗ್ಗೆ ಇಂದು ಸಚಿವರ ನೇತ್ರತ್ವದಲ್ಲಿ ಸಭೆ ಜರುಗಿದ್ದು, ಈ ಸಕ್ಕರೆ ಕಾರ್ಖಾನೆಯನ್ನು ಪುನಃ ತೆರೆಯುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹಾಗೂ ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ

the Minister
ಸಚಿವರ ನೇತ್ರತ್ವದಲ್ಲಿ ಸಭೆ
author img

By

Published : May 7, 2020, 9:49 PM IST

ಬೆಂಗಳೂರು: ಮೈ ಶುಗರ್ ಸಕ್ಕರೆ ಕಾರ್ಖಾನೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹಾಗೂ ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ಇಂದು ವಿಕಾಸೌಧದಲ್ಲಿ ಸಭೆ ಕರೆಯಲಾಗಿತ್ತು. ಈ ವೇಳೆ ಖಾಸಗಿಯವರಿಗೆ ನೀಡುವ ಸಂಪುಟ ಸಭೆಯ ನಿರ್ಣಯ ಹಿಂಪಡೆಯುವಂತೆ ಜಿಲ್ಲೆಯ ಶಾಸಕರು, ರೈತ ಮುಖಂಡರು ಆಗ್ರಹಿಸಿದ್ದಾರೆ.

ಸರ್ಕಾರ ಕೇವಲ 10-12 ಕೋಟಿ ರೂ. ಕೊಟ್ಟರೆ ಸಕ್ಕರೆ ಕಾರ್ಖಾನೆ ಆರಂಭ ಮಾಡಬಹುದು ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆ ಕಾರ್ಖಾನೆ ನೂರಾರು ಕೋಟಿ ರೂ. ನಷ್ಟದಲ್ಲಿದೆ. ಕೇವಲ ಕಾರ್ಖಾನೆಯನ್ನು ಮಾತ್ರ ಖಾಸಗಿಯವರಿಗೆ ನೀಡಲು ತೀರ್ಮಾನ ಮಾಡಲಾಗಿದೆ. ಕಾರ್ಖಾನೆಗೆ ಸಂಬಂಧಿಸಿದ ಇತರ ಯಾವುದೆ ಆಸ್ತಿಯನ್ನ ನೀಡುತ್ತಿಲ್ಲ ಎಂದು ಸಚಿವರು ಮಾಹಿತಿ ನೀಡಿದರು.

ರೈತರ ಹಿತ ಕಾಪಾಡುವುದು ನಮ್ಮ ಉದ್ದೇಶ, ಆದಷ್ಟು ಬೇಗ ಸಕ್ಕರೆ ಕಾರ್ಖಾನೆ ಆರಂಭವಾಗಬೇಕು. ಆ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ. ಸಭೆಯಲ್ಲಿ ಚರ್ಚಿಸಿದ ವಿಚಾರವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರುತ್ತೇವೆ. ಸಿಎಂ ಈ ಬಗ್ಗೆ ನೀಡುವ ಸೂಚನೆಯನ್ನು ಪಾಲಿಸುತ್ತೇವೆ ಎಂದು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಆಶ್ವಾಸನೆ ನೀಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಎಂ.ಶ್ರೀನಿವಾಸ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ, ಶ್ರೀಕಂಠೇಗೌಡ ಹಾಗೂ ರೈತ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.