ETV Bharat / state

ರಾಜ್ಯ ಮಾತ್ರವಲ್ಲ, ದಕ್ಷಿಣ ಭಾರತದಲ್ಲೇ ಬಿಜೆಪಿ ಅಧಿಕಾರಕ್ಕೆ ಬರುವುದು ಅಸಾಧ್ಯ: ಎಚ್.ವಿಶ್ವನಾಥ್ - Narendra Modi

ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತೆ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

H Vishwanath
ಎಚ್ ವಿಶ್ವನಾಥ್
author img

By

Published : Apr 10, 2023, 9:45 PM IST

ಬೆಂಗಳೂರು: ''ರಾಜ್ಯದಲ್ಲಿ ಮಾತ್ರವಲ್ಲ, ಇನ್ನು ಮುಂದೆ ದಕ್ಷಿಣ ಭಾರತದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ'' ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನ ಶಿವಾನಂದ ವೃತ್ತ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ''ಕರ್ನಾಟಕದಲ್ಲಿ ಬಸವಣ್ಣ, ಕನಕದಾಸ, ನಾರಾಯಣ ಗುರು, ಪರಿಯಾರ್, ಅಣ್ಣಮಯ್ಯ ಸಾಮಾಜಿಕ ನ್ಯಾಯ ಬಿತ್ತಿದ್ದಾರೆ. ಎಷ್ಟೇ ಶ್ರಮ ಹಾಕಿದರೂ ಬಿಜೆಪಿ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವುದಿಲ್ಲ. ಈ ಸಾರಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಬಿಜೆಪಿ ಕಾಣುತ್ತಿದೆ. ದಕ್ಷಿಣ ಭಾರತದ ಹೆಬ್ಬಾಗಿಲಲ್ಲೇ ಬಿಜೆಪಿಗೆ ಹಿನ್ನಡೆ ಉಂಟಾಗಲಿದೆ'' ಎಂದರು.

ಇದನ್ನೂ ಓದಿ: ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ‌ ಸ್ಪರ್ಧೆ:ಮೀಸಲು ಕ್ಷೇತ್ರದಲ್ಲಿ ರಾಜಕೀಯ ರಂಗು

ಮೋದಿ, ಅಮಿತ್ ಶಾ ವಿರುದ್ಧ ಗರಂ: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬರುವುದರಿಂದ ಯಾವ ರೀತಿಯ ಪರಿಣಾಮ ಉಂಟಾಗಬಹುದು ಎಂಬ ಪ್ರಶ್ನೆಗೆ, ''ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ಬರಲಿ, ಕೇಂದ್ರ ಸಚಿವ ಅಮಿತ್ ಶಾ ಬರಲಿ, ಅದ್ಯಾವುದು ಲೆಕ್ಕಕ್ಕಿಲ್ಲ'' ಎಂದರು. ನಟ ಸುದೀಪ್ ಬಿಜೆಪಿ ಬೆಂಬಲ ವಿಚಾರವಾಗಿ ಮಾತನಾಡುತ್ತಾ, ''ಮತದಾರರ ಮನಸ್ಸನ್ನು ಸಿನಿಮಾ ನಟ ಆಕರ್ಷಣೆ ಮಾಡಲು ಸಾಧ್ಯವಿಲ್ಲ. ಅವರು ಸಾಂಸ್ಕೃತಿಕ ವ್ಯಕ್ತಿಗಳು, ಅವರು ಏಕೆ ರಾಜಕೀಯ ಹಂಗಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೋ, ಅರ್ಥ ಆಗ್ತಿಲ್ಲ'' ಎಂದು ಹೇಳಿದರು.

ಇದನ್ನೂ ಓದಿ: ದೇಶಕ್ಕೆ ಮಾದರಿಯಾಗುವಂತಹ ಪ್ರಣಾಳಿಕೆ ಸಿದ್ಧ, ವಾರದೊಳಗೆ ಬಿಡುಗಡೆ: ಡಾ.ಸುಧಾಕರ್

ಎರಡು ದಿನದಲ್ಲಿ ಕಾಂಗ್ರೆಸ್ ಸೇರ್ಪಡೆ?: ಬಿಜೆಪಿಯಿಂದ ಮಾನಸಿಕವಾಗಿ ದೂರವಾಗಿರುವ ವಿಶ್ವನಾಥ್, ಎರಡು ದಿನದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತಿದೆ. ಈ ಹಿಂದೆಯೇ ಪಕ್ಷ ಸೇರ್ಪಡೆ ಆಗಬೇಕಿತ್ತು. ಆದರೆ, ಸಿದ್ದರಾಮಯ್ಯ ದಿಲ್ಲಿಯಲ್ಲಿ ಹಾಗೂ ಡಿ.ಕೆ.ಶಿವಕುಮಾರ್ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆದಿಲ್ಲ. ಬಿಜೆಪಿ ಸದಸ್ಯತ್ವಕ್ಕೂ ಇದುವರೆಗೂ ವಿಶ್ವನಾಥ್ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ಇಂದೂ ಸಹ ಇದೇ ನಿಟ್ಟಿನಲ್ಲಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲೆಯವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ: ಡಿ.ಕೆ.ಸುರೇಶ್

ಪರಣ್ಣ, ಇಕ್ಬಾಲ್​ರನ್ನು ಫುಟ್‌ಬಾಲ್​ ರೀತಿ ಆಡಿ ಸೋಲಿಸಿ: ಜನಾರ್ದನ ರೆಡ್ಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.