ETV Bharat / state

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ.. ಸಚಿವ ಆರ್​ ಅಶೋಕ್​ ಹೇಳಿದ್ದೇನು? - ರಾಜ್ಯದಲ್ಲಿ ನಾಯಕತ್ವ ಬದಲಾವಣೆ,

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ದೆಹಲಿಗೂ ಕೆಲ ನಾಯಕರು ಹೋಗಿದ್ದಾರೆ. ಮಾಧ್ಯಮಗಳಲ್ಲಿ ಅದೆಲ್ಲಾ ಗಮನಿಸಿದ್ದೇನೆ. ಸಿಎಂ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲವರು ಕೆಲವು ಕಡೆ ಸಭೆಗಳನ್ನು ನಡೆಸುತ್ತಿರುವುದು ಕೂಡಾ ಗಮನಕ್ಕೆ ಬಂದಿದೆ ಎಂದು ಕಂದಾಯ ಸಚಿವ ಆರ್​ ಅಶೋಕ್​ ಅವರು ನಾಯಕತ್ವ ಬದಲಾವಣೆಯ ಬೆಳವಣಿಗೆಯನ್ನು ಒಪ್ಪಿಕೊಂಡಿದ್ದಾರೆ.

it-is-true-that-leadership-change-is-development-but-not-did-debated-minister-r-ashok
ಸಚಿವ ಆರ್​.ಅಶೋಕ್
author img

By

Published : May 26, 2021, 4:54 PM IST

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ಈ ಬಗ್ಗೆ ಚಟುವಟಿಕೆಗಳೂ ನಡೆಯುತ್ತಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿಗೂ ಕೆಲ ನಾಯಕರು ಹೋಗಿದ್ದಾರೆ. ಮಾಧ್ಯಮಗಳಲ್ಲಿ ಅದೆಲ್ಲಾ ಗಮನಿಸಿದ್ದೇನೆ. ಸಿಎಂ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲವರು ಕೆಲವು ಕಡೆ ಸಭೆಗಳನ್ನು ನಡೆಸುತ್ತಿರುವುದು ಕೂಡಾ ಗಮನಕ್ಕೆ ಬಂದಿದೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್​ ಅಶೋಕ್​

ನಿನ್ನೆಯಿಂದ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಗಮನಿಸುತ್ತಿದ್ದೇನೆ. ಆದರೆ ಅದಕ್ಕಿಂತ ಮುಖ್ಯ ಕೊರೊನಾ ವಿರುದ್ಧದ ಹೋರಾಟ. ಸೋಂಕನ್ನು ಹತೋಟಿಗೆ ತರಲು ಕೆಲಸ ಮಾಡುತ್ತಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ ಅಷ್ಟೇ. ಈ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಬೇಕಿದೆ. ರಾಜ್ಯದಲ್ಲಿ ಬೆಡ್ ಹಾಗೂ ಆಕ್ಸಿಜನ್ ಸಮಸ್ಯೆ ಇಲ್ಲ. ಆದರೆ, ವೆಂಟಿಲೇಟರ್ ಬೇಕಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಬ್ಲ್ಯಾಕ್​ ಫಂಗಸ್ ಭೂತದ ರೀತಿ ಕಾಡುತ್ತಿದೆ. ಇದರ ಬಗ್ಗೆ ಗಮನಹರಿಸಬೇಕಿದೆ ಎಂದರು.

ಬೋರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 40 ಇದ್ದ ಬೆಡ್​ಗಳನ್ನು 200ಕ್ಕೆ ಹೆಚ್ಚಿಸಲಾಗಿದೆ ಎಂದು ಸಚಿವರು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.