ಬೆಂಗಳೂರು: ನಗರದಲ್ಲಿ ಹೆಸರಾಂತ ಆಹಾರ ಸರಬರಾಜು ಕಂಪನಿಯೊಂದರ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದಲ್ಲಿರುವ ಆಹಾರ ಸರಬರಾಜು ಕಂಪನಿಯ ಕಚೇರಿಯೊಂದರ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಆಹಾರ ಸರಬರಾಜು ಕಂಪನಿ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ನಿಯಮ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ನಗರದಲ್ಲಿರುವ ಆಹಾರ ಸರಬರಾಜು ಕಂಪನಿ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಆಡಿಟ್ ವರದಿ ಇರುವ ಕಡತಗಳ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.