ETV Bharat / state

ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಮ್ಮ ರಾಜ್ಯದಲ್ಲಿ ಅಷ್ಟೇ ಅಲ್ಲ, ಎಲ್ಲೆಡೆ ರಾಜಕೀಯ ಉದ್ದೇಶಕ್ಕಾಗಿಯೇ ಐಟಿ ದಾಳಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಆರೋಪಿಸಿದರು.

ಡಿಸಿಎಂ ಡಿ.ಕೆ ಶಿವಕುಮಾರ್
ಡಿಸಿಎಂ ಡಿ.ಕೆ ಶಿವಕುಮಾರ್
author img

By ETV Bharat Karnataka Team

Published : Oct 13, 2023, 4:04 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು : ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಆದಾಯ ತೆರಿಗೆ ಇಲಾಖೆಯಿಂದ (ಐಟಿ) ದಾಳಿ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ಬೆಂಗಳೂರಿನಲ್ಲಿ ಐಟಿ ದಾಳಿ ಆರಂಭವಾಗಿದೆ. ಇದರ ಹಿಂದೆ ರಾಜಕೀಯ ಉದ್ದೇಶ ಇದೆಯೇ ಎಂಬ ಪ್ರಶ್ನೆಗೆ, ರಾಜಕೀಯ ಇಲ್ಲದೆ ಯಾವುದೇ ಐಟಿ ದಾಳಿಯೂ ನಡೆಯುವುದಿಲ್ಲ ಎಂದರು.

ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಕಳುಹಿಸಲಾಗುತ್ತಿದೆ ಎಂಬ ಮಾಜಿ ಸಚಿವ ಅಶ್ವಥ್ ನಾರಾಯಣ ಆರೋಪಕ್ಕೆ, ಹಾದಿ ಬೀದಿಯಲ್ಲಿ ಹೋಗುವವರ ಮಾತಿಗೆ ನಾನು ಉತ್ತರಿಸುವುದಿಲ್ಲ ಎಂದು ಟಾಂಗ್ ನೀಡಿದರು. ಬಿಬಿಎಂಪಿಯಿಂದ ಬಿಡುಗಡೆ ಆದ 650 ಕೋಟಿ ರೂ ಅನುದಾನದಲ್ಲಿ ಪಡೆದ ಕಮಿಷನ್ ಹಣವನ್ನು ಅಂಬಿಕಾಪತಿ ಮೂಲಕ ಕಳುಹಿಸುತ್ತಿದ್ದರು ಎಂಬ ಆರೋಪದ ಬಗ್ಗೆ ಮಾತನಾಡುತ್ತಾ, ಈ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಕೆಂಪಣ್ಣ ಆಂತಕ ಪಡಬೇಕಿಲ್ಲ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ನಮ್ಮ ಪರಿಸ್ಥಿತಿ ರೈತರಿಗಿಂತ ಶೋಚನೀಯವಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಬಿಲ್ ಪಾವತಿ ವಿಚಾರದಲ್ಲಿ ಕೆಂಪಣ್ಣ ಆತಂಕಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ. ಕೆಂಪಣ್ಣ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ 60-70% ಹಣ ಬಿಡುಗಡೆ ಮಾಡಿದ್ದೇವೆ. ಬಿಲ್ ಪಾವತಿ ಸಮಯದಲ್ಲಿ ಜಿಎಸ್‌ಟಿ ಕೂಡ ಪಾವತಿ ಮಾಡಬೇಕು. ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ ಎಂದರು.

ಲೋಡ್ ಶೆಡ್ಡಿಂಗ್ ಕುರಿತು ಮಾತನಾಡಿ, ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ಕರೆದಿದ್ದಾರೆ. ನಾವು ಅಧಿಕಾರದಲ್ಲಿ ಇದ್ದಾಗ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು, ಬಿಜೆಪಿ ಅವರ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಆಗಿದೆ ಎಂಬ ಮಾಹಿತಿ ನನ್ನ ಬಳಿ ಇದೆ. ಮುಖ್ಯಮಂತ್ರಿಗಳ ಸಭೆ ಬಳಿಕ ನಾನು ಮಾತನಾಡುತ್ತೇನೆ ಎಂದು ಹೇಳಿದರು.

ಬಾಕಿ ಮೊತ್ತ ಬಿಡುಗಡೆ ಮಾಡಲು ಸರ್ಕಾರಕ್ಕೆ ಗಡುವು: ಶುಕ್ರವಾರ ಚಾಮರಾಜಪೇಟೆಯಲ್ಲಿರುವ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಗುತ್ತಿಗೆದಾರರ ಸಮಸ್ಯೆಗಳು ಬಗೆಹರಿಯುವುದಕ್ಕೆ ಬದಲಾಗಿ ಹೊಸದಾಗಿ ಮತ್ತಷ್ಟು ಸಮಸ್ಯೆಗಳು ಸೇರ್ಪಡೆಯಾಗಿವೆ. ಈಗಾಗಲೇ ಹಲವು ವರ್ಷಗಳಿಂದ ಗುತ್ತಿಗೆದಾರರು ಬಾಕಿ ಬಿಲ್ ಬಿಡುಗಡೆ, ಜಿಎಸ್​ಟಿ ಗೊಂದಲ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಹೊಸ ಸಕಾರ ರಚನೆಯಾದಾಗ ಗುತ್ತಿಗೆದಾರರಿಗೂ ಹಲವು ಭಾಗ್ಯಗಳನ್ನ ಕರುಣಿಸಲಾಗುತ್ತದೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಹಳೆಯ ಸಮಸ್ಯೆಗಳ ಜೊತೆಗೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿವೆ. ತನಿಖೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಾಕಿ ಹಣ ತಡೆಹಿಡಿದಿದೆ. ಕೆಲವು ಇಲಾಖೆಗಳಲ್ಲಿ ಶೇ. 7ರಷ್ಟು ಹಣ ಬಿಡುಗಡೆ ಮಾಡಿದ್ದಾರೆ. ಒಂದು ತಿಂಗಳಲ್ಲಿ ಶೇ.50 ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಗಡುವು ನೀಡಿದರು.

ಇದನ್ನೂ ಓದಿ: ಒಂದು ತಿಂಗಳೊಳಗೆ ಶೇ. 50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಿ: ಸರ್ಕಾರಕ್ಕೆ ಗಡುವು ನೀಡಿದ ಕೆಂಪಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.